ಕನ್ನಡದ ಹಿರಿಯ ನಟಿ ಬಿ.ಜಯಾ ಇನ್ನಿಲ್ಲ

ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ಕಲಾವಿದೆ ಬಿ.ಜಯಾ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ.

ರಂಗಭೂಮಿ ಕಲಾವಿದೆಯಾಗಿದ್ದ ಬಿ‌.ಜಯಾ ಅವರು 300ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದಾರೆ. ಇತ್ತೀಚಿನ‌ ವರ್ಷಗಳಲ್ಲಿ ಧಾರಾವಾಹಿಗಳಲ್ಲಿ ಜಯಾ ಅವರು ನಟಿಸುತ್ತಿದ್ದರು..

ಭಕ್ತ ಪ್ರಹ್ಲಾದ ಸಿನಿಮಾ ಮೂಲಕ ಸಿನಿಮಾರಂಗಕ್ಕೆ ಕಾಲಿಟ್ಟ ಜಯಾ ಅವರು, ಪೋಷಕ ಪಾತ್ರಗಳಲ್ಲಿ ನಟಿಸುತ್ತಿದ್ದರು. ಡಾ.ರಾಜಕುಮಾರ್, ನರಸಿಂಹರಾಜು, ದ್ವಾರಕೀಶ್ ಸೇರಿದಂತೆ ಹಿರಿಯ ಕಲಾವಿದರ ಜೊತೆ ತೆರೆ ಹಂಚಿಕೊಂಡಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಜಯಾ ಅವರನ್ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೆಲ ದಿನಗಳ ಹಿಂದೆಯಷ್ಟೇ ಮನೆಗೆ ವಾಪಸ್ ಆಗಿದ್ದರು. ಆದರೆ ಇಂದು ಅವರು ನಿಧನರಾಗಿದ್ದಾರೆ.

Comments are closed.