‘ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫ್’ವಿಜೇತೆ ಮೆಬಿನಾ ಮೈಕಲ್ ಸಾವು

0

ಬೆಂಗಳೂರು : ಕನ್ನಡದ ಖ್ಯಾತ ರಿಯಾಲಿಟಿ ಶೋ ‘ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫ್’ಸೀಸನ್ 4 ವಿಜೇತೆ ಮೆಬಿನಾ ಮೈಕಲ್ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

ಬೆಂಗಳೂರಿನಿಂದ ತನ್ನೂರಾಗಿರುವ ಸೋಮವಾರಪೇಟೆಯ ಕಡೆಗೆ ಚಲಿಸುತ್ತಿದ್ದ ವೇಳೆಯಲ್ಲಿ ಟ್ರ್ಯಾಕ್ಟರ್ ಗೆ ಕಾರು ಢಿಕ್ಕಿ ಹೊಡೆದಿದ್ದು, ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯದಲ್ಲಿ ಮೆಬಿನಾ ಮೈಕಲ್ ಸಾವನ್ನಪ್ಪಿದ್ದಾರೆ.

ನಿನ್ನೆ ಸಂಜೆಯ ವೇಳೆಯಲ್ಲಿ ತನ್ನ ಕಾರಿನಲ್ಲಿ ಬೆಂಗಳೂರಿನಿಂದ ಕೊಡಗು ಜಿಲ್ಲೆಯ ಸೋಮವಾರಪೇಟೆಗೆ ಹೊರಟಿದ್ದರು. ಕಾರು ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೇವಿಹಳ್ಳಿಯ ಬಳಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಬರುತ್ತಿದ್ದಂತೆಯೇ ಯೂಟರ್ನ್ ತೆಗೆಯುತ್ತಿದ್ದ ಟ್ರ್ಯಾಕ್ಟರ್ ಗೆ ಢಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ಮೂವರ ಪೈಕಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದರು.

ಗಾಯಾಳುಗಳಿಗೆ ಆದಿಚುಂಚನಗಿರಿ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಕಳುಹಿಸಲಾಗಿತ್ತು. ಈ ವೇಳೆ ಮಾರ್ಗ ಮಧ್ಯೆ ಮೆಬಿನಾ ಸಾವನ್ನಪ್ಪಿದ್ದಾರೆ.

ಮೆಬಿನಾ ಮೈಕಲ್ ‘ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫ್’ರಿಯಾಲಿಟಿ ಶೋ ಕಾರ್ಯಕ್ರಮದಲ್ಲಿ ಪಾಲ್ಗೊಂಡು ವಿನ್ನರ್ ಆಗಿದ್ದರು. ರಿಯಾಲಿಟಿ ಶೋ ವಿನ್ನರ್ ಆಗಿ 7 ಲಕ್ಷ ರೂ. ಬಹುಮಾನ ಪಡೆದಿದ್ದರು. ಈ ಕುರಿತು ಬೆಳ್ಳೂರು ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Leave A Reply

Your email address will not be published.