Karnataka Ratna: ಮರೆಯಾದ ಮಾಣಿಕ್ಯಗೆ ‘ಕರ್ನಾಟಕ ರತ್ನ’ ಪ್ರಶಸ್ತಿ: ಸರ್ಕಾರದಿಂದ ಈ ಸ್ಟಾರ್ ನಟರಿಗೆ ಆಹ್ವಾನ

ಬೆಂಗಳೂರು: Karnataka Ratna: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಮರೆಯಾಗಿ ಅಕ್ಟೋಬರ್ 29ಕ್ಕೆ ಒಂದು ವರ್ಷ ಕಳೆಯುತ್ತದೆ. ಆದರೆ ಇನ್ನೂ ಅವರ ನೆನಪು ಮಾಸಿಲ್ಲ. ಇಂದಿಗೂ ಪ್ರತಿನಿತ್ಯ, ಪ್ರತಿಕ್ಷಣ ಅವರನ್ನು ನೆನಪಿಸಿಕೊಳ್ಳದವರಿಲ್ಲ. ತೆರೆ ಮೇಲೆ ತಮ್ಮ ಅಮೋಘ ಅಭಿನಯದಿಂದ ಪ್ರೇಕ್ಷಕರನ್ನು ರಂಜಿಸುತ್ತಾ, ತೆರೆ ಮರೆಯಲ್ಲಿ ಸದಾ ಜನಪರ ಕಾರ್ಯಗಳನ್ನು ಮಾಡುತ್ತಿದ್ದ ಅಪ್ಪುಗೆ ಈ ಬಾರಿ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವದ ಅಂಗವಾಗಿ ನಡೆಯಲಿರುವ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಪುನೀತ್ ರಾಜ್‍ಕುಮಾರ್‍ಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಅಂದಹಾಗೆ, ನ.1ರಂದು ಬೆಂಗಳೂರಿನ ವಿಧಾನಸೌಧದ ಆವರಣದಲ್ಲಿ ನಡೆಯಲಿರುವ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ ಜೂ.ಎನ್.ಟಿ.ಆರ್ ಅವರಿಗೆ ರಾಜ್ಯ ಸರ್ಕಾರ ಅಧಿಕೃತವಾಗಿ ಆಹ್ವಾನ ನೀಡಿದೆ. ಕಾರ್ಯಕ್ರಮದಲ್ಲಿ ಭಾಗಿಯಾಗಲು ಇಬ್ಬರು ನಟರೂ ಒಪ್ಪಿದ್ದಾರೆ ಎನ್ನಲಾಗಿದೆ. ಹೀಗಾಗಿ ಇವರ ಆಗಮನ ಕಾರ್ಯಕ್ರಮಕ್ಕೆ ಮತ್ತಷ್ಟು ಮೆರುಗು ತರಲಿದೆ.

ಈ ಮೊದಲು ಬಾಲಿವುಡ್ ನಟಿಯರಾದ ಐಶ್ವರ್ಯಾ ರೈ, ದೀಪಿಕಾ ಪಡುಕೋಣೆ ಅವರಿಗೆ ಆಹ್ವಾನ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿತ್ತು. ಆದರೆ ಅವರಿಗೆ ಪೂರ್ವ ನಿಯೋಜಿತ ಕಾರ್ಯಕ್ರಮಗಳು ಇರುವ ಹಿನ್ನೆಲೆ ತಲೈವಾ ರಜನಿಕಾಂತ್ ಹಾಗೂ ಜೂನಿಯರ್ ಎನ್.ಟಿ.ಆರ್ ಗೆ ಆಹ್ವಾನ ನೀಡಲಾಗಿದೆ. ಕನ್ನಡ ಸಿನಿಮಾ ಕ್ಷೇತ್ರದಲ್ಲಿ ಪುನೀತ್ ರಾಜ್‍ಕುಮಾರ್ ಅವರ ಗಣನೀಯ ಸಾಧನೆಯನ್ನು ಪರಿಗಣಿಸಿ ರಾಜ್ಯ ಸರ್ಕಾರದ ಅತ್ಯುನ್ನತ ಪ್ರಶಸ್ತಿಯಾದ ಕರ್ನಾಟಕ ರತ್ನ ಪ್ರಶಸ್ತಿಯನ್ನು ನೀಡುತ್ತಿದೆ. ಪುನೀತ್ ಪರವಾಗಿ ಅವರ ಪತ್ನಿ ಅಶ್ವಿನಿ ಅವರು ಈ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ. ಈ ವೇಳೆ ಡಾ. ರಾಜ್ ಕುಮಾರ್ ಕುಟುಂಬ ಕಾರ್ಯಕ್ರಮದಲ್ಲಿ ಭಾಗಿಯಾಗಿ ಅದ್ಭುತ ಕ್ಷಣವನ್ನು ಕಣ್ತುಂಬಿಕೊಳ್ಳಲಿದೆ. ಅಂದಹಾಗೆ ಪುನೀತ್ ಅವರ ಪ್ರಥಮ ವರ್ಷದ ಪುಣ್ಯಸ್ಮರಣೆ ಸಂದರ್ಭದಲ್ಲಿ ಅವರಿಗೆ ಈ ಪ್ರಶಸ್ತಿ ಲಭಿಸುತ್ತಿರುವುದು ವಿಶೇಷ.

ಇದನ್ನೂ ಓದಿ:UP Kannauj : ಸರಕಾರಿ ಅತಿಥಿ ಗೃಹದಲ್ಲಿ 12 ವರ್ಷದ ಬಾಲಕಿ ಮೇಲೆ ಅತ್ಯಾಚಾರ

ಇದನ್ನೂ ಓದಿ: PM Kisan Samman Nidhi : ಪತಿ ಮತ್ತು ಪತ್ನಿ ಇಬ್ಬರೂ ವರ್ಷಕ್ಕೆ 6,000 ರೂ. ಕ್ಲೈಮ್ ಮಾಡಿಕೊಳ್ಳಬಹುದಾ; ಪಿಎಂ ಕಿಸಾನ್ ಯೋಜನೆಯ ನಿಯಮ ಹೇಳುವುದಾದರೂ ಏನು…

karnataka ratna: rajanikanth and junior ntr are invited for karnataka ratna award function

Comments are closed.