Kasagi Putagalu : ನವೀರಾದ ಪ್ರೇಮಕಥೆ ಹೊತ್ತ ‘ಖಾಸಗಿ ಪುಟಗಳು’ ನವೆಂಬರ್ 18ಕ್ಕೆ ರಿಲೀಸ್

Kasagi Putagalu : ನವೀರಾದ ಪ್ರೇಮಕಥೆಯುಳ್ಳ ‘ಖಾಸಗಿ ಪುಟಗಳು'(Kasagi Putagalu ) ಸಿನಿಮಾ ಬಿಡುಗಡೆಗೆ ರೆಡಿಯಾಗಿದೆ. ಸಂತೋಷ್ ಶ್ರೀಕಂಠಪ್ಪ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಚಿತ್ರ ಟ್ರೇಲರ್ ಹಾಗೂ ಚೆಂದದ ಹಾಡುಗಳ ಮೂಲಕ ಎಲ್ಲರ ಗಮನ ಸೆಳೆದಿದೆ. ಇದೀಗ ಪ್ರೇಕ್ಷಕರ ಮುಂದೆ ಬರಲು ಸಿನಿಮಾ ರೆಡಿಯಾಗಿದ್ದು, ನವೆಂಬರ್ 18ರಂದು ಸಿನಿಮಾ ಬಿಡುಗಡೆಯಾಗುತ್ತಿದೆ.

‘ಖಾಸಗಿ ಪುಟಗಳು'(Kasagi Putagalu ) ಚಿತ್ರ ಸಂಪೂರ್ಣ ಹೊಸಬರ ಪ್ರಯತ್ನ. ಕಾಲೇಜು ಹುಡುಗನ್ನೊಬ್ಬನ ನವೀರಾದ ಪ್ರೇಮಕಥೆ ಹೊತ್ತ ಸಿನಿಮಾವಿದು. ಕಿರುಚಿತ್ರದಲ್ಲಿ ನಟಿಸಿ ಅನುಭವ ಇರುವ ವಿಶ್ವ ಚಿತ್ರದಲ್ಲಿ ನಾಯಕ ನಟನಾಗಿ ನಟಿಸಿದ್ದು, ಶ್ವೇತಾ ಡಿಸೋಜ ನಾಯಕಿಯಾಗಿ ನಟಿಸಿದ್ದಾರೆ.

ಚಿತ್ರದ ನಾಯಕಿ ಶ್ವೇತ ಡಿಸೋಜ ಮಾತನಾಡಿ ಹಿಂದಿಯಲ್ಲಿ ‘ವೈ’ ಎಂಬ ಸಿನಿಮಾದಲ್ಲಿ ನಟಿಸಿದ್ದೇನೆ. ಇದು ನನ್ನ ಮೊದಲ ಕನ್ನಡ ಸಿನಿಮಾ. ಭೂಮಿ ಪಾತ್ರದಲ್ಲಿ ನಟಿಸಿದ್ದೇನೆ. ಇನೋಸೆಂಟ್ ಹಾಗೂ ಮೆಚೋರ್ಡ್ ಎರಡು ಶೇಡ್ ನಲ್ಲಿ ಕಾಣಸಿಗಲಿದ್ದೇನೆ ಎಂದು ತಮ್ಮ ಪಾತ್ರದ ಬಗ್ಗೆ ಮಾಹಿತಿ ಹಂಚಿಕೊಂಡ್ರು.

ಇದನ್ನೂ ಓದಿ : ಧರ್ಮಸ್ಥಳಕ್ಕೆ ಕಾಂತಾರ ನಟ ರಿಷಬ್ ಶೆಟ್ಟಿ ಭೇಟಿ : ವೀರೆಂದ್ರ ಹೆಗ್ಗಡೆ ಅವರ ಆಶೀರ್ವಾದ ಪಡೆದ ದಂಪತಿ

ಇದನ್ನೂ ಓದಿ : Pathaan Teaser: 4 ವರ್ಷಗಳ ಬಳಿಕ ಭರ್ಜರಿ ಕಮ್ ಬ್ಯಾಕ್ ಮಾಡಿದ ಬಾದ್ ಶಾ.. ‘ಪಠಾಣ್’ ಟೀಸರ್ ಹೇಗಿದೆ ನೋಡಿ..

ಕಿರುಚಿತ್ರಗಳಲ್ಲಿ ಅಭಿನಯಿಸುತ್ತಿದ್ದೆ ಸಿನಿಮಾಗಳಲ್ಲಿ ಅಭಿನಯಿಸಬೇಕು ಎಂಬ ಆಸೆಯಿತ್ತು. ನಾಯಕ ನಟನಾಗಿ ಇದು ನನ್ನ ಮೊದಲ ಸಿನಿಮಾ. ಒಂದು ತಂಡವಾಗಿ ಎಲ್ಲರೂ ಈ ಸಿನಿಮಾವನ್ನು ಮಾಡಿದ್ದೇವೆ. ನವೆಂಬರ್ 18ಕ್ಕೆ ಚಿತ್ರ ಬಿಡುಗಡೆಯಾಗುತ್ತಿದೆ ಎಲ್ಲರೂ ನೋಡಿ ಹರಸಬೇಕು ಎಂದು ನಾಯಕ ವಿಶ್ವ ಕೇಳಿಕೊಂಡ್ರು.

ಇದನ್ನೂ ಓದಿ : Rakshit Shetty : ರಕ್ಷಿತ್‌ ಶೆಟ್ಟಿ ನಿರ್ಮಾಣದಲ್ಲಿ “ಹಚ್ಚೇವು ಕನ್ನಡದ ದೀಪ” ಹಾಡು ರೀ ಕ್ರಿಯೆಟ್‌

ಸಂಗೀತ ನಿರ್ದೇಶಕ ವಾಸುಕಿ ವೈಭವ್ ಮಾತನಾಡಿ ಸಂತೋಷ್ ಶ್ರೀಕಂಠಪ್ಪ ಅವರಿಗೆ ಇರುವ ಸಿನಿಮಾ ಪ್ರೀತಿ ನೋಡಿ ಈ ಚಿತ್ರವನ್ನು ಒಪ್ಪಿಕೊಂಡೆ. ಚಿತ್ರದಲ್ಲಿ ನಾಲ್ಕು ಹಾಡುಗಳಿವೆ, ಕೆ. ಕಲ್ಯಾಣ್, ಪ್ರಮೋದ್ ಮರವಂತೆ, ತ್ರಿಲೋಕ್ ತ್ರಿವಿಕ್ರಮ್ ಸಾಹಿತ್ಯ ಬರೆದಿದ್ದಾರೆ. ಸಿನಿಮಾ ಬಿಡುಗಡೆಗೆ ರೆಡಿಯಾಗಿದೆ ಎಲ್ಲರೂ ಸಿನಿಮಾ ನೋಡಿ ಹೊಸಬರನ್ನು ಬೆಳೆಸಿ ಎಂದು ಕೇಳಿಕೊಂಡ್ರು.

ಚೇತನ್ ದುರ್ಗಾ, ನಂದಕುಮಾರ್,ಶ್ರೀಧರ್, ನಿರೀಕ್ಷಾ ಶೆಟ್ಟಿ, ದಿನೇಶ್ ಒಳಗೊಂಡ ತಾರಾಬಳಗ ಚಿತ್ರದಲ್ಲಿದೆ. ಎಸ್ ವಿ ಎಂ ಮೋಶನ್ ಪಿಕ್ಚರ್ ಬ್ಯಾನರ್ ನಡಿ ಮಂಜು ವಿ ರಾಜ್, ವೀಣಾ ವಿ ರಾಜ್, ಮಂಜುನಾಥ್ ಡಿ ಎಸ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ವಿಶ್ವಜಿತ್ ರಾವ್ ಛಾಯಾಗ್ರಹಣ,ರಾಕೇಶ್ ಆಚಾರ್ಯ ಬಿ.ಜಿ.ಎಂ ಮಾಡಿದ್ದು, ಆಶಿಕ್ ಕುಸುಗೋಳಿ ಸಂಕಲನ ಚಿತ್ರಕ್ಕಿದೆ.

Kasagi Putagalu: The movie ‘Kasagi Putagalu’ with Navira’s love story is ready for release. Directed by Santhosh Srikanthappa, this film has attracted everyone’s attention with its trailer and beautiful songs. Now the movie is ready to come in front of the audience and the movie is releasing on November 18.

Comments are closed.