ಸೋಮವಾರ, ಏಪ್ರಿಲ್ 28, 2025
HomeCinemaKendada Seragu Movie : ನಟಿ ಮಾಲಾಶ್ರೀ ನಟನೆಯ ಕೆಂಡದ ಸೆರಗು ಸಿನಿಮಾದ ಎರಡನೇ ಹಾಡು...

Kendada Seragu Movie : ನಟಿ ಮಾಲಾಶ್ರೀ ನಟನೆಯ ಕೆಂಡದ ಸೆರಗು ಸಿನಿಮಾದ ಎರಡನೇ ಹಾಡು ರಿಲೀಸ್

- Advertisement -

ಸ್ಯಾಂಡಲ್ ವುಡ್ ನ ಕನಸಿನ ರಾಣಿ ಮಾಲಾಶ್ರೀ ನಟನೆಯ ಕೆಂಡದ ಸೆರಗು ಸಿನಿಮಾ (Kendada Seragu Movie) ಬಿಡುಗಡೆಗೆ ಸಜ್ಜಾಗುತ್ತಿದೆ. ಕಾದಂಬರಿ ಆಧಾರಿತ ಈ ಸಿನಿಮಾ ಶೂಟಿಂಗ್ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದೆ. ಇದೀಗ ಈ ಕೆಂಡದ ಸೆರಗು ಸಿನಿಮಾದ ಎರಡನೇ ಹಾಡು ಅನಾವರಣಗೊಂಡಿದೆ. ಕೆಂಡದ ಸೆರಗು’ ಸಿನಿಮಾವನ್ನು ನಿರ್ದೇಶಿಸಿರುವ ರಾಕಿ ಸೋಮ್ಲಿ ಈ ಹುಡುಗಿ ಎಷ್ಟು ಚೆಂದ ಹಾಡಿಗೆ ಸಾಹಿತ್ಯ ಬರೆದಿದ್ದು, ಅನಿರುದ್ಧ್ ಶಾಸ್ತ್ರೀ ಕಂಠ ಕುಣಿಸಿದ್ದು, ವೀರೇಶ್ ಕಬ್ಲಿ ಟ್ಯೂನ್ ಹಾಕಿದ್ದಾರೆ. ಪಿ ಆರ್ ಒ ಕಂ ಯುವ ನಟ ಹರೀಶ್ ಅರಸು ಹಾಗೂ ಪೂರ್ಣಿಮಾ ಹಾಡಿಗೆ ಭರ್ಜರಿ ಹೆಜ್ಜೆ ಹಾಕಿದ್ದಾರೆ.

ಕುಸ್ತಿ ಸುತ್ತ ಹೆಣೆಯಲಾದ ಸಿನಿಮಾದಲ್ಲಿ ಕನಸಿನ ರಾಣಿ ಮಾಲಾಶ್ರೀ ಪೊಲೀಸ್ ಕಮಿಷನರ್ ಪಾತ್ರದಲ್ಲಿ ನಟಿಸಿದ್ದು, ಭೂಮಿ ಶೆಟ್ಟಿ ಕುಸ್ತಿ ಪಟುವಾಗಿ ಬಣ್ಣ ಹಚ್ಚಿದ್ದಾರೆ. ನಿರ್ದೇಶಕ ರಾಕಿ ಸೋಮ್ಲಿ ಬರೆದ ‘ಕೆಂಡದ ಸೆರಗು’ ಕಾದಂಬರಿ ಆಧಾರಿತ ಸಿನಿಮಾ ಇದಾಗಿದೆ.

ಇದನ್ನೂ ಓದಿ : Shivamma movie : ನಟ ರಿಷಬ್‌ ಶೆಟ್ಟಿ ನಿರ್ಮಾಣದ ಶಿವಮ್ಮ ಸಿನಿಮಾಕ್ಕೆ ವಿಶ್ವ ಮನ್ನಣೆ

ಇದನ್ನೂ ಓದಿ : Aura Movie : ಟ್ರೇಲರ್ ನಲ್ಲೇ ಮೋಡಿ ಮಾಡಿ ಹೊಸಬರ ಆರ ಸಿನಿಮಾ ಜುಲೈ 28ರಂದು ರಿಲೀಸ್

ಶ್ರೀ ಮುತ್ತು ಟಾಕೀಸ್ ಮತ್ತು ಎಸ್.ಕೆ ಪ್ರೊಡಕ್ಷನ್ಸ್ ಬ್ಯಾನರ್ ಅಡಿ ಕೆ. ಕೊಟ್ರೇಶ್ ಗೌಡ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಯಶ್ ಶೆಟ್ಟಿ, ವರ್ಧನ್ ತೀರ್ಥಹಳ್ಳಿ, ಪ್ರತಿಮಾ, ಹರೀಶ್ ಅರಸು, ಬಸು ಹಿರೇಮಠ್, ಶೋಭಿತ, ಸಿಂಧು ಲೋಕನಾಥ್ ಸಿನಿಮಾದ ತಾರಾಬಳಗದಲ್ಲಿದ್ದಾರೆ. ವಿಪಿನ್ ವಿ ರಾಜ್ ಛಾಯಾಗ್ರಹಣ, ವೀರೇಶ್ ಕಂಬ್ಲಿ ಸಂಗೀತ ನಿರ್ದೇಶನ, ಶ್ರೀಕಾಂತ್ ಸಂಕಲನ ಸಿನಿಮಾಕ್ಕಿದೆ.

Kendada Seragu Movie : Actress Malashree starrer Kendada Seragu movie’s second song release

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular