Kerala High Court: ‘ವರಾಹ ರೂಪಂ’ ಹಾಡಿಗೆ ತಪ್ಪದ ಸಂಕಷ್ಟ: ತೈಕುಡಂ ಬ್ರಿಡ್ಜ್ ದಾವೆ ತಿರಸ್ಕರಿಸಿದ್ದ ಜಿಲ್ಲಾ ನ್ಯಾಯಾಲಯದ ಆದೇಶಕ್ಕೆ ಕೇರಳ ಹೈಕೋರ್ಟ್ ತಡೆ

ಬೆಂಗಳೂರು: Kerala High Court: ಕಾಂತಾರದ ವರಾಹ ರೂಪಂ ಹಾಡಿಗೆ ಮತ್ತೊಮ್ಮೆ ಸಂಕಷ್ಟ ಎದುರಾಗಿದೆ. ವರಾಹ ರೂಪಂ ಹಾಡಿನ ವಿರುದ್ಧ ಕೃತಿಚೌರ್ಯದ ಆರೋಪ ಮಾಡಿದ್ದ ತೈಕುಡಂ ಬ್ರಿಡ್ಜ್ ಅರ್ಜಿಯನ್ನು ವಜಾಗೊಳಿಸಿದ್ದ ಕೇರಳದ ಕೋಝಿಕ್ಕೋಡ್ ಜಿಲ್ಲಾ ನ್ಯಾಯಾಲಯದ ಆದೇಶಕ್ಕೆ ಕೇರಳ ಹೈಕೋರ್ಟ್ ತಡೆ ನೀಡಿದೆ.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ. ಸೋಮರಾಜನ್ ಅವರಿದ್ದ ಏಕಸದಸ್ಯ ಪೀಠವು ಹೊಂಬಾಳೆ ಫಿಲ್ಮ್ಸ್, ನಟ ರಿಷಬ್ ಶೆಟ್ಟಿ, ಪೃಥ್ವಿರಾಜ್ ಫಿಲ್ಮ್ಸ್, ಅಮೆಜಾನ್ ಸೆಲ್ಲರ್ ಸರ್ವೀಸ್ ಪ್ರೈ.ಲಿ, ಗೂಗಲ್ ಇಂಡಿಯಾ ಹೆಡ್ ಆಫೀಸ್, ಪೃಥ್ವಿರಾಜ್ ಸುಕುಮಾರನ್ ಸೇರಿದಂತೆ ಹಲವರಿಗೆ ಪ್ರಕರಣ ಸಂಬಂಧ ಕೇರಳ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಇದನ್ನೂ ಓದಿ: Hansika Motwani’s mehendi celebration : ಜೈಪುರ ಕೋಟೆ ಅರಮನೆಯಲ್ಲಿ ನಟಿ ಹನ್ಸಿಕಾ ಮೋಟ್ವಾನಿ ಮೆಹಂದಿ ಸಂಭ್ರಮ

ಸೆಪ್ಟಂಬರ್ 30ರಂದು ರಿಲೀಸ್ ಆಗಿದ್ದ ಕಾಂತಾರ ಸಿನಿಮಾ ದೇಶ-ವಿದೇಶಗಳಲ್ಲಿ ಸೂಪರ್ ಹಿಟ್ ಆಗಿತ್ತು. ಈ ನಡುವೆಯೇ ಸಂಗೀತ ಸಂಯೋಜಕ ಬಿ.ಅಜನೀಶ್ ಲೋಕನಾಥ್ ವರಾಹ ರೂಪಂ ಹಾಡಿನ ಹಕ್ಕುಸ್ವಾಮ್ಯ ಉಲ್ಲಂಘನೆಯ ಆರೋಪಗಳನ್ನು ಎದುರಿಸಿದ್ದರು. ಈ ಹಾಡು ಮಲಯಾಳಂನ ನವರಸಂ ಹಾಡಿನಿಂದ ನಕಲು ಮಾಡಲಾಗಿದೆ. ಅನುಮತಿ ಪಡೆಯದೇ ಕೃತಿಚೌರ್ಯ ಮಾಡಲಾಗಿದೆ ಎಂದು ಆರೋಪಿಸಿ ಕೇರಳದ ಸಂಗೀತ ಸಂಸ್ಥೆ ತೈಕುಡಂ ಬ್ರಿಡ್ಜ್ ಹಾಡಿನ ಪ್ರಸಾರಕ್ಕೆ ತಡೆಹೇರುವಂತೆ ಕೋರಿ ಕೇರಳದ ಕೋಝಿಕ್ಕೋಡ್ ಜಿಲ್ಲಾ ನ್ಯಾಯಾಲಯದ ಮೆಟ್ಟಿಲೇರಿತ್ತು.

ಕೋರ್ಟ್ ನಲ್ಲಿ ವಿಚಾರಣೆ ನಡೆದು ಹಾಡಿನ ಬಳಕೆಗೆ ತಾತ್ಕಾಲಿಕ ನಿರ್ಬಂಧ ವಿಧಿಸಲಾಗಿತ್ತು. ಅಲ್ಲದೇ ಹಾಡನ್ನು ಸಿನಿಮಾದಿಂದ ತೆಗೆದು ಹಾಕುವಂತೆಯೂ ಆದೇಶ ಹೊರಡಿಸಿತ್ತು. ಕೋಝಿಕ್ಕೋಡ್ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದ್ದ ವೇಳೆಯೇ ಕಾಂತಾರ ತಂಡ ಹೈಕೋರ್ಟ್ ಮೊರೆಹೋಗಿತ್ತು. ಕೆಳನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದ್ದ ಹಿನ್ನೆಲೆ ತಡೆಯಾಜ್ಞೆ ನೀಡಲು ಹೈಕೋರ್ಟ್ ನಿರಾಕರಿಸಿತ್ತು. ಈ ಮಧ್ಯೆ ಜಿಲ್ಲಾ ನ್ಯಾಯಾಲಯ ವರಾಹ ರೂಪಂ ಹಾಡಿನ ನಿರ್ಬಂಧ ಆದೇಶಕ್ಕೆ ತಡೆ ನೀಡಿತ್ತು. ಹೀಗಾಗಿ ಕಾಂತಾರ ಚಿತ್ರತಂಡ ವಿವಾದದಿಂದ ರಿಲೀಫ್ ಆಗಿತ್ತು. ಆದರೆ ಇದೀಗ ಕೇರಳ ಹೈಕೋರ್ಟ್ ತೈಕುಡಂ ಬ್ರಿಡ್ಜ್ ಮ್ಯೂಸಿಕ್ ತಂಡದ ಪರವಾಗಿ ತೀರ್ಪು ನೀಡಿದೆ. ಹೀಗಾಗಿ ಕಾಂತಾರ ಚಿತ್ರತಂಡಕ್ಕೆ ಈ ಪ್ರಕರಣದಲ್ಲಿ ಮತ್ತೆ ಹಿನ್ನಡೆಯಾಗಿದೆ.

ಇದನ್ನೂ ಓದಿ: Divinestar Rishabh Shetty‌ : ತುಳುವಿನಲ್ಲಿ ಬಿಡುಗಡೆಯಾದ ಕಾಂತಾರ ಸಿನಿಮಾ ಮಹತ್ವದ ಸಂದೇಶ ಕೊಟ್ಟ ರಿಷಬ್ ಶೆಟ್ಟಿ

Kerala High Court: Kerala high court stays district court order rejecting Thaikkudam bridges plaint against Hombale films

Comments are closed.