ಸ್ಯಾಂಡಲ್ ವುಡ್ ನ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನರಾಗಿ ಮೂರ್ನಾಲ್ಕು ತಿಂಗಳು ಕಳೆದಿದ್ದರೂ ಇನ್ನು ಪುನೀತ್ ನಿವಾಸಕ್ಕೆ ಸಾಂತ್ವನ ಹೇಳಲು ಆಗಮಿಸುವ ಸೆಲೆಬ್ರೆಟಿಗಳ ಸಂಖ್ಯೆ ಕಡಿಮೆಯಾಗಿಲ್ಲ. ರವಿವಾರ ಕೆಜಿಎಫ್ (KGF 2 ) ಟ್ರೇಲರ್ ಲಾಂಚ್ ಗಾಗಿ ಬೆಂಗಳೂರಿಗೆ ಬಂದಿಳಿದ ಬಾಲಿವುಡ್ ಸ್ಟಾರ್ ಸಂಜಯ್ ದತ್ (Sanjay Dutt) ನೇರವಾಗಿ ಪುನೀತ್ ರಾಜ್ ಕುಮಾರ್ (Puneeth Rajkumar) ನಿವಾಸಕ್ಕೆ ಭೇಟಿ ನೀಡಿದ್ದು, ಪುನೀತ್ ಭಾವಚಿತ್ರಕ್ಕೆ ನಮಿಸಿದ್ದಾರೆ.ಮಾತ್ರವಲ್ಲ ಪುನೀತ್ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.
ಬಾಲಿವುಡ್ ನಟ ಸಂಜಯ್ ದತ್ ಪುನೀತ್ ನಿವಾಸಕ್ಕೆ ಭೇಟಿ ನೀಡಿದ ವೇಳೆ ಪುನೀತ್ ರಾಜ್ ಕುಮಾರ್ ಸಹೋದರ ರಾಘವೇಂದ್ರ ರಾಜ್ ಕುಮಾರ್, ಅವರ ಪತ್ನಿ ಮಂಗಳಾ ರಾಘವೇಂದ್ರ್ ರಾಜ್ ಕುಮಾರ್ ಮಕ್ಕಳಾದ ವಿನಯ್ ರಾಜ್ ಕುಮಾರ್ ಹಾಗೂ ಯುವರಾಜ್ ಕುಮಾರ್ ಹಾಜರಿದ್ದರು. ಅಶ್ವಿನಿ ಪುನೀತ್ ರಾಜ್ ಕುಮಾರ್ ರಿಗೆ ಸಂಜಯ್ ದತ್ ಸಾಂತ್ವನ ಹೇಳಿದರು. ಕೆಜಿಎಫ್-2 ಟ್ರೇಲರ್ ರಿಲೀಸ್ ಗಾಗಿ ಸಂಜಯ್ ದತ್ ಬೆಂಗಳೂರಿಗೆ ಆಗಮಿಸಿದ್ದಾರೆ. ಈ ವೇಳೆ ಸಂಜಯ್ ದತ್ ಪುನೀತ್ ನಿವಾಸಕ್ಕೆ ಭೇಟಿ ನೀಡಿದ್ದು, ಅಭಿಮಾನಿಗಳು ಸಂಜಯ್ ದಾದಾ ಪುನೀತ್ ಪ್ರೀತಿಗೆ ಧನ್ಯವಾದ ಹೇಳಿದ್ದಾರೆ.
ಇದೇ ಮೊದಲ ಬಾರಿಗೆ ಕೆಜಿಎಫ್-2 ಸಿನಿಮಾದ ಮೂಲಕ ಸಂಜಯ್ ದತ್ ಕನ್ನಡಕ್ಕೆ ಎಂಟ್ರಿಕೊಟ್ಟಿದ್ದು, ರಾಕಿಂಗ್ ಸ್ಟಾರ್ ಯಶ್ ಎದುರು ಅಬ್ಬರದ ವಿಲನ್ ರೂಪದಲ್ಲಿ ಅಬ್ಬರಿಸಲಿದ್ದಾರಂತೆ. ಈ ಮಧ್ಯೆ ನಟ ಸಂಜಯ್ ದತ್ ಕೂಡ ಅನಾರೋಗ್ಯಕ್ಕೆ ತುತ್ತಾಗಿದ್ದು, ವಿದೇಶಕ್ಕೆ ಚಿಕಿತ್ಸೆಗಾಗಿ ತೆರಳಿದ್ದರು. ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ ಎನ್ನಲಾಗಿದ್ದು, ಕೆಜಿಎಫ್-2 ಡಬ್ಬಿಂಗ್ ಕೂಡ ಲಭ್ಯವಾಗೋದು ಅನುಮಾನ ಎನ್ನಲಾಗಿತ್ತು.
ಆದರೆ ಬಳಿಕ ಚೇತರಿಸಿಕೊಂಡ ಸಂಜಯ್ ದತ್ ಅಧಿರಾ ಪಾತ್ರಕ್ಕೆ ಜೀವ ತುಂಬಿದ್ದರು. ಈಗ ಕೆಜಿಎಫ್-2 ಟ್ರೇಲರ್ ರಿಲೀಸ್ ಗೆ ಸಂಜಯ್ ದತ್ ಸಿಲಿಕಾನ್ ಸಿಟಿಗೆ ಎಂಟ್ರಿಕೊಟ್ಟಿದ್ದಾರೆ. ಈ ಹಿಂದೆ ಚಿತ್ರತಂಡ ಸಂಜಯ್ ದತ್ ಹುಟ್ಟುಹಬ್ಬಕ್ಕೆ ದತ್ ಖಡಕ್ ಲುಕ್ ನ ಫರ್ಸ್ಟ್ ಲುಕ್ ರಿಲೀಸ್ ಮಾಡಿ ಅಭಿಮಾನಿಗಳಿಗೆ ಸಪ್ರೈಸ್ ನೀಡಿತ್ತು.
ಇದನ್ನೂ ಓದಿ : ನಟನೆಗೆ ವಿದಾಯ ಹೇಳಿದ್ರಾ ಪ್ರೇಮಂ ಬೆಡಗಿ ಸಾಯಿ ಪಲ್ಲವಿ
ಇದನ್ನೂ ಓದಿ : ಕೆಜಿಎಫ್-2 ಟ್ರೇಲರ್ ರಿಲೀಸ್ : ರಾಕಿ ಬಾಯ್ ಲುಕ್ ಗೆ ಫ್ಯಾನ್ಸ್ ಫಿದಾ
KGF 2 Sanjay Dutt Visit Puneeth Rajkumar residence