Kiccha Sudeep in Kateel: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಕಿಚ್ಚ ಸುದೀಪ್ ದಂಪತಿ

ದಕ್ಷಿಣ ಕನ್ನಡ: Kiccha Sudeep in Kateel: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಇಂದು ಮಂಗಳೂರಿನ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಪತ್ನಿ ಪ್ರಿಯಾ ಜೊತೆ ಆಗಮಿಸಿದ್ದ ಅವರು ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಬಿಗ್ ಬಾಸ್ ನ ವಾರಾಂತ್ಯದ ಶೂಟಿಂಗ್ ಮುಗಿಸಿ ಸುದೀಪ್ ಕಟೀಲು ದೇವಿಯ ದರ್ಶನ ಪಡೆದರು. ವಿಕ್ರಾಂತ್ ರೋಣ ಸಿನಿಮಾದ ಬಳಿಕ ಬಿಗ್ ಬಾಸ್ ಸೀಸನ್ 9ರ ನಿರೂಪಣೆಯ ಜವಾಬ್ದಾರಿ ಹೊತ್ತಿರುವ ನಟ ಸುದೀಪ್ ಅವರು ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಮಂಗಳೂರಿಗೆ ಆಗಮಿಸಿದ್ದರು. ಈ ವೇಳೆ ಕಟೀಲು ದುರ್ಗಾಪರಮೇಶ್ವರಿ ಸನ್ನಿಧಾನಕ್ಕೆ ಪತ್ನಿ ಪ್ರಿಯಾ ಜೊತೆಗೆ ಭೇಟಿ ನೀಡಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ದೇವಸ್ಥಾನದ ಹೊರಭಾಗದಲ್ಲಿ ಕಿಚ್ಚನನ್ನು ನೋಡಲು ಅಭಿಮಾನಿಗಳು ಮುಗಿಬಿದ್ದ ದೃಶ್ಯ ಕಂಡುಬಂತು.

ಇದನ್ನೂ ಓದಿ: Kantara v/s Tumbbad: ಕಾಂತಾರದ ಬಗ್ಗೆ ಅಪಸ್ವರ ಎತ್ತಿದ ಬಾಲಿವುಡ್ ನಿರ್ಮಾಪಕ; ಅಭಿಮಾನಿಗಳು ಗರಂ

ಕಟೀಲು ಮತ್ತು ಮುಲ್ಕಿಯಲ್ಲಿ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವ ಸಲುವಾಗಿ ಸುದೀಪ್ ಪತ್ನಿ ಪ್ರಿಯಾ ಜೊತೆಗೆ ಆಗಮಿಸಿದ್ದರು. ಅದಕ್ಕೂ ಮುನ್ನ ಕಟೀಲು ದುರ್ಗಾಪರಮೇಶ್ವರಿಯ ದರ್ಶನ ಪಡೆದು, ವಿಶೇಷ ಪೂಜೆ ನೆರವೇರಿಸಿ ದೇವರಿಗೆ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಕಿಚ್ಚ ಸುದೀಪ್ ದಂಪತಿಯನ್ನು ದೇವಸ್ಥಾನದ ವತಿಯಿಂದ ಆತ್ಮೀಯವಾಗಿ ಗೌರವಿಸಲಾಯಿತು. ಸುದೀಪ್ ಅವರಿಗೆ ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವ ಸಲ್ಲಿಸಲಾಯಿತು. ಈ ವೇಳೆ ದೇವಸ್ಥಾನದ ಆಡಳಿಯ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.

ವಿಕ್ರಾಂತ್ ರೋಣ ಸಿನಿಮಾದ ಬಳಿಕ ಕಿಚ್ಚ ಸುದೀಪ್ ಅವರು ಸದ್ಯ ಬಿಗ್ ಬಾಸ್ ಕಾರ್ಯಕ್ರಮ ನಿರೂಪಣೆಯಲ್ಲಿ ಬ್ಯುಸಿ ಆಗಿದ್ದಾರೆ. ಅವರ ಮುಂದಿನ ಸಿನಿಮಾ ಯಾವುದು ಎಂಬ ಕುತೂಹಲ ಅಭಿಮಾನಿಗಳಲ್ಲಿ ಮನೆ ಮಾಡಿದೆ. ಆದರೆ ಸುದೀಪ್ ಅವರ ಕಡೆಯಿಂದ ತಮ್ಮ ಮುಂದಿನ ಸಿನಿಮಾದ ಬಗ್ಗೆ ಯಾವ ಮಾಹಿತಿಯೂ ಹೊರಬಿದ್ದಿಲ್ಲ.

ಇದನ್ನೂ ಓದಿ: Marikanu Temple: ಹಾಲಾಡಿ ಮಾರಿಕಾನು ದೇವಸ್ಥಾನದ ಜೀರ್ಣೋದ್ಧಾರ: ಮುಷ್ಠಿ ಕಾಣಿಕೆ ಸಮರ್ಪಣೆ

Kiccha Sudeep in Kateel: Kiccha Sudeep and his wife Priya visited Kateel Durgaparameshwari temple and offered special pooja.

Comments are closed.