KL Rahul Athiya Shetty marriage : ಕೆ.ಎಲ್ ರಾಹುಲ್-ಆತಿಯಾ ಶೆಟ್ಟಿ ಮದುವೆಗೆ ಬಾಲಿವುಡ್ ಸ್ಟಾರ್ಸ್‌ಗೆ ಆಹ್ವಾನ ಇಲ್ಲ!

ಮುಂಬೈ: ಟೀಮ್ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟ್ಸ್’ಮನ್, ಕನ್ನಡಿಗ ಕನ್ನಡಿಗ ಕೆ.ಎಲ್ ರಾಹುಲ್ ಮತ್ತು ಬಾಲಿವುಡ್ ತಾರೆ ಆತಿಯಾ ಶೆಟ್ಟಿ ಮದುವೆ (KL Rahul Athiya Shetty marriage) ಜನವರಿ 23ಕ್ಕೆ ನಡೆಯಲಿದೆ. ಎರಡೂ ಕುಟುಂಬಗಳು ಈಗಾಗಲೇ ಮದುವೆ ತಯಾರಿಯಲ್ಲಿವೆ. ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯ ನಂತರ ರಾಹುಲ್ ಕೇರಳದಿಂದ ಮುಂಬೈಗೆ ಹಾರಿದ್ದಾರೆ. ಕೇರಳದ ತಿರುವನಂತಪುರದಲ್ಲಿರುವ ಗ್ರೀನ್ ಫೀಲ್ಡ್ ಮೈದಾನದಲ್ಲಿ ಭಾನುವಾರ ನಡೆದ ಶ್ರೀಲಂಕಾ ವಿರುದ್ಧದ 3ನೇ ಏಕದಿನ ಪಂದ್ಯವನ್ನು ಮುಗಿಸಿದ ರಾಹುಲ್ ಸೋಮವಾರ ತಿರುವನಂತಪುರದಿಂದ ನೇರವಾಗಿ ಮುಂಬೈಗೆ ಪ್ರಯಾಣ ಬೆಳೆಸಿದ್ದಾರೆ.

ರಾಹುಲ್ ಮತ್ತು ಆತಿಯಾ ಶೆಟ್ಟಿ ಮದುವೆಗೆ ಎರಡೂ ಕುಟುಂಬಗಳ ಅತ್ಯಂತ ಹತ್ತಿರ ಸದಸ್ಯರನ್ನು ಮತ್ತು ಆಪ್ತ ಸ್ನೇಹಿತರನ್ನಷ್ಟೇ ಆಹ್ವಾನಿಸಲಿದೆ. ಇಂಟ್ರೆಸ್ಟಿಂಗ್ ಸಂಗತಿ ಏನಂದ್ರೆ ಬಾಲಿವುಡ್ ತಾರೆಗಳನ್ನು ಮದುವೆಗೆ ಆಹ್ವಾನಿಸಲಾಗಿದೆ. ಕುಟುಂಬ ಸದಸ್ಯರು ಮತ್ತು ಆಪ್ತ ಸ್ನೇಹಿತರ ಸಮ್ಮುಖದಲ್ಲಿ ರಾಹುಲ್ ಮತ್ತು ಆತಿಯಾ ಶೆಟ್ಟಿ ದಕ್ಷಿಣ ಭಾರತದ ಸಂಪ್ರದಾಯದಲ್ಲಿ ಸಪ್ತಪದಿ ತುಳಿಯಲಿದ್ದಾರೆ. ಬಾಲಿವುಡ್’ನ ಹಿರಿಯ ನಟ ಸುನಿಲ್ ಶೆಟ್ಟಿಯವರ ಪುತ್ರಿ ಆತಿಯಾ ಶೆಟ್ಟಿ ಮತ್ತು ಕೆ.ಎಲ್ ರಾಹುಲ್ ಕಳೆದ 4 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದಾರೆ. ಇವರ ಮದುವೆ ಜನವರಿ 22 ಮತ್ತು 23ರಂದು ಮುಂಬೈ-ಪುಣೆ ರಾಷ್ಟ್ರೀಯ ಹೆದ್ದಾರಿಯ ಖಂಡಾಲ ಬಳಿ ಇರುವ ಸುನಿಲ್ ಶೆಟ್ಟಿಯವರ ಫಾರ್ಮ್ ಹೌಸ್’ನಲ್ಲಿ ನಡೆಯಲಿದೆ.

ಕೋಲ್ಕತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಶ್ರೀಲಂಕಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ 103 ಎಸೆತಗಳಲ್ಲಿ ಅಜೇಯ 64 ರನ್ ಗಳಿಸಿ ಭಾರತಕ್ಕೆ ಸರಣಿ ಗೆಲುವು ತಂದು ಕೊಟ್ಟಿದ್ದರು. ಆದರೆ ತಿರುವನಂತಪುರದಲ್ಲಿ ನಡೆದ 3ನೇ ಏಕದಿನ ಪಂದ್ಯದಲ್ಲಿ ರಾಹುಲ್ ಕೇವಲ 7 ರನ್ ಗಳಿಸಿ ಔಟಾಗಿದ್ದರು. ಗುವಾಹಟಿಯಲ್ಲಿ ನಡೆದ ಲಂಕಾ ವಿರುದ್ಧದ ಪ್ರಥಮ ಏಕದಿನ ಪಂದ್ಯದಲ್ಲಿ ರಾಹುಲ್ 29 ಎಸೆತಗಳಲ್ಲಿ 39 ರನ್ ಸಿಡಿಸಿದ್ದರು.

ಇದನ್ನೂ ಓದಿ : India No1 in ODI: ಕಿವೀಸ್ ವಿರುದ್ಧದ ಏಕದಿನ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದರೆ ಟೀಮ್ ಇಂಡಿಯಾ ವರ್ಲ್ಡ್ ನಂ.1

ಇದನ್ನೂ ಓದಿ : ಭಾರತೀಯ ಕ್ರಿಕೆಟಿಗರ ಪುತ್ರಿಯರ ಬಗ್ಗೆ ಅಶ್ಲೀಲ ಕಾಮೆಂಟ್‌ : ಆರೋಪಿಗಳ ಮೇಲೆ ಎಫ್‌ಐಆರ್‌ ದಾಖಲಿಸಿದ ದೆಹಲಿ ಪೋಲಿಸರು

ಮದುವೆಯ ಕಾರಣ ಕೆ.ಎಲ್ ರಾಹುಲ್ ಜನವರಿ 18ರಂದು ಆರಂಭವಾಗಲಿರುವ ನ್ಯೂಜಿಲೆಂಡ್ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯಿಂದ ಹೊರಗುಳಿದಿದ್ದಾರೆ. ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ 4 ಪಂದ್ಯಗಳ ಟೆಸ್ಟ್ ಸರಣಿಯ ಮೂಲಕ ರಾಹುಲ್ ಮತ್ತೆ ಟೀಮ್ ಇಂಡಿಯಾಗೆ ಕಂಬ್ಯಾಕ್ ಮಾಡಲಿದ್ದಾರೆ. ಆಸೀಸ್ ವಿರುದ್ಧದ ಮೊದಲೆರಡು ಟೆಸ್ಟ್ ಪಂದ್ಯಗಳಿಗೆ ಈಗಾಗ್ಲೇ ಟೀಮ್ ಇಂಡಿಯಾವನ್ನು ಆಯ್ಕೆ ಮಾಡಲಾಗಿದ್ದು, ರಾಹುಲ್ ಉಪನಾಯಕನಾಗಿ ಮುಂದುವರಿದಿದ್ದಾರೆ.

KL Rahul Athiya Shetty marriage Bollywood stars are not invited to the wedding

Comments are closed.