ಕಿರುಕುಳ ದೂರಿನ ನಡುವೆ ಸ್ಯಾಂಡಲ್‌ವುಡ್ ನಟಿ ಭಾವನಾತ್ಮಕ ಪೋಸ್ಟ್

ಕಿರುಕುಳ ದೂರಿನ ನಡುವೆ ಸ್ಯಾಂಡಲ್‌ವುಡ್ ನಟಿ ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ.

ನಟಿ ಹಾಗೂ ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ನಿರ್ಮಾಪಕರೊಬ್ಬರ ವಿರುದ್ಧ ಕಿರುಕುಳ ಮತ್ತು ಮಾನಸಿಕ ಹಿಂಸೆ ಆರೋಪಿಸಿ ಪೊಲೀಸರಿಗೆ ದೂರು ಸಲ್ಲಿಸಿರುವ ಹಿನ್ನೆಲೆಯಲ್ಲಿ, ತಮ್ಮ ಸಾಮಾಜಿಕ ಜಾಲತಾಣದಲ್ಲಿ ಭಾವನಾತ್ಮಕ ನೋಟವೊಂದನ್ನು ಹಂಚಿಕೊಂಡಿದ್ದಾರೆ.

“ಕಳೆದ ಕೆಲವು ದಿನಗಳು ನನಗೆ ತುಂಬಾ ಭಾರವಾಗಿದ್ದವು. ನನ್ನ ವೈಯಕ್ತಿಕ ವಿಷಯ ಈಗ ಸಾರ್ವಜನಿಕವಾಗಿದೆ. ಪೊಲೀಸರ, ಕಾನೂನು, ಮಾಧ್ಯಮ ಮತ್ತು ಅನೇಕ ಜನರ ಬೆಂಬಲ ಸಿಕ್ಕಿದ್ದಕ್ಕೆ ನಾನು ಕೃತಜ್ಞೆ. ಆದರೆ ಕೆಲವರು ಇನ್ನೂ ದುಃಖ ಕೊಡೋ ರೀತಿಯಲ್ಲಿ, ಅರ್ಥವಿಲ್ಲದಂತೆ ಮಾತನಾಡುತ್ತಿದ್ದಾರೆ. ಎಲ್ಲರೂ ನನ್ನನ್ನು ನಂಬಲೇಬೇಕು ಅಥವಾ ಬೆಂಬಲಿಸಲೇಬೇಕು ಅನ್ನೋ ನಿರೀಕ್ಷೆ ನನಗಿಲ್ಲ.

ಇದನ್ನೂ ಓದಿ: ನಮ್ಮ ಮೆಟ್ರೋ ಮೂಲಕ ಅಂಗಾಂಗ ಸಾಗಣೆ ಯಶಸ್ಸು

ಆದ್ರೆ ಯಾರನ್ನಾದರೂ ಕೆಡವೋ, ಕೀಳು ಮಾತಾಡೋ ಹಕ್ಕು ಯಾರಿಗೂ ಇಲ್ಲ. ಸೋಷಿಯಲ್‌ ಮೀಡಿಯಾದ ದ್ವೇಷ-ಬುಲ್ಲಿಯಿಂಗ್ ಎಲ್ಲರೂ ತಾಳಲು ಸಾಧ್ಯವಾಗುವುದಿಲ್ಲ. ನನ್ನ ಸುರಕ್ಷತೆ, ನನ್ನ ಮನಶಾಂತಿ ಮತ್ತು ನನ್ನ ಬದುಕಿಗಾಗಿ ನಾನು ಮಾಡಬೇಕಾದುದನ್ನೇ ಮಾಡಿದ್ದೇನೆ. ನನ್ನ ಸತ್ಯದ ಮೇಲೆ ನಾನು ದೃಢವಾಗಿದ್ದೇನೆ. ನನ್ನ ಜೊತೆ ನಿಂತ ಎಲ್ಲರಿಗೂ ಹೃದಯಪೂರ್ವಕ ಧನ್ಯವಾದಗಳು” ಎಂದು ಬರೆದುಕೊಂಡಿದ್ದಾರೆ.

ನಟಿ ನೀಡಿರುವ ದೂರು ಹಾಗೂ ಅವರ ಸಾಮಾಜಿಕ ಮಾಧ್ಯಮ ಹೇಳಿಕೆಯ ನಂತರ, ಈ ವಿಷಯಕ್ಕೆ ಸಂಬಂಧಿಸಿದಂತೆ ಮನರಂಜನಾ ಕ್ಷೇತ್ರದಲ್ಲೂ ಚರ್ಚೆಗಳು ಶುರುವಾಗಿದೆ. ನಟಿ ಮಾಡಿದ ಆರೋಪ ಗಂಭೀರವಾಗಿರುವುದರಿಂದ ಪೊಲೀಸರು ಈಗಾಗಲೇ ತನಿಖೆಯನ್ನು ವೇಗಗೊಳಿಸಿದ್ದು, ಪ್ರಕರಣದ ವಿವರಗಳನ್ನು ಸಂಗ್ರಹಿಸುವ ಕೆಲಸ ಮುಂದುವರೆದಿದೆ. ಇದೇ ವೇಳೆ, ಅಭಿಮಾನಿಗಳು ಮತ್ತು ಸಹನಟರು ಕೃಷಿಗೆ ಧೈರ್ಯ ತುಂಬುವ ಸಂದೇಶಗಳನ್ನು ಕಳುಹಿಸುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ #StandWithKrishi ಎಂಬ ಹ್ಯಾಷ್‌ಟ್ಯಾಗ್‌ ಸಹ ಟ್ರೆಂಡ್ ಆಗುತ್ತಿದೆ.

Vidhya | ವಿದ್ಯಾಶ್ರೀ

ವಿದ್ಯಾಶ್ರೀ ಅವರು ನ್ಯೂಸ್‌ ನೆಕ್ಸ್ಟ್‌ ಕನ್ನಡ ( Kannada News Next) ದಲ್ಲಿ ಕಂಟೆಂಟ್‌ ಕ್ರಿಯೆಟರ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಕನ್ನಡದ ನ್ಯೂಸ್‌ ಚಾನೆಲ್‌, ದಿನ ಪತ್ರಿಕೆ ಹಾಗೂ ಡಿಜಿಟಲ್‌ ಮಾಧ್ಯಮದಲ್ಲಿ ಹಲವು ವರ್ಷಗಳ ಕಾಲ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.

Related Stories