Krishna G Rao: ಕೆಜಿಎಫ್ ತಾತ ಕೃಷ್ಣ ಜಿ ರಾವ್ ಇನ್ನಿಲ್ಲ; ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಕೊನೆಯುಸಿರು

ಬೆಂಗಳೂರು: ಕೆಜಿಎಫ್ ತಾತ ಎಂದೇ ಗುರುತಿಸಿಕೊಂಡಿದ್ದ ಕೃಷ್ಣ ಜಿ ರಾವ್(Krishna G Rao) ಅವರು ಬೆಂಗಳೂರಿನ ವಿನಾಯಕ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ.

ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಕೃಷ್ಣ.ಜಿ.ರಾವ್ ಅವರನ್ನು ಡಿಸೆಂಬರ್ 1ರಂದು ಬೆಂಗಳೂರಿನ ಸೀತಾಸರ್ಕಲ್ ಬಳಿ ಇರುವ ವಿನಾಯಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯ ಸ್ಥಿತಿ ಸಂಪೂರ್ಣ ಹದಗೆಟ್ಟಿದ್ದರಿಂದ ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಈ ಬೆನ್ನಲ್ಲೇ ಅವರ ಆರೋಗ್ಯ ಸ್ಥಿತಿ ಬಗ್ಗೆ ಸೋದರ ಸಂಬಂಧಿ ನಂದಕುಮಾರ್ ಮಾಹಿತಿ ಹಂಚಿಕೊಂಡಿದ್ದರು. ಕಳೆದೊಂದು ವಾರದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 70 ವರ್ಷ ವಯಸ್ಸಿನ ಕೃಷ್ಣ ಜಿ ರಾವ್ ವೈದ್ಯರ ಚಿಕಿತ್ಸೆಗೆ ಸ್ಪಂದಿಸದೇ ಇಹಲೋಕ ತ್ಯಜಿಸಿದ್ದಾರೆ.

ಇದನ್ನೂ ಓದಿ: Shah Rukh Khan’s son Aryan : ಬಾಲಿವುಡ್‌ಗೆ ಎಂಟ್ರಿ ಕೊಟ್ಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್

ಕೃಷ್ಣ ಜಿ ರಾವ್ ಅವರಿಗೆ ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್ ಸಿನಿಮಾ ದೊಡ್ಡ ಮಟ್ಟದಲ್ಲಿ ಖ್ಯಾತಿ ತಂದುಕೊಟ್ಟಿತ್ತು. ಈ ಸಿನಿಮಾದಲ್ಲಿ ಅವರು ಕುರುಡ ಮುದುಕನ ಪಾತ್ರ ನಿಭಾಯಿಸಿದ್ದರು. ಪಂಚ್ ಡೈಲಾಗ್ ಮೂಲಕ ಪ್ರೇಕ್ಷಕರ ಮನಸ್ಸನ್ನು ಗೆದ್ದಿದ್ದರು. ಕೆಜಿಎಫ್- 2 ಸಿನಿಮಾದ ಬಳಿಕವೂ ಇವರು ಕನ್ನಡದ 15 ಸಿನಿಮಾಗಳಲ್ಲಿ ನಟಿಸಿದ್ದರು. ಕೆಮೆಸ್ಟ್ರಿ ಆಫ್ ಕರಿಯಪ್ಪ ಸಿನಿಮಾದ ನಿರ್ದೇಶಕ ಸಾರಥಿ ಕುಮಾರ್ ಅವರ ನಿರ್ದೇಶನದ ಮತ್ತೊಂದು ಹೊಸ ಸಿನಿಮಾ ನ್ಯಾನೋ ನಾರಾಯಣಪ್ಪ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಹತ್ತು ತಲೆಯ ರಾವಣನ ಅವತಾರದಲ್ಲಿ ಫಸ್ಟ್ ಲುಕ್ ನಲ್ಲೇ ಕಿರೀಟ, ಗ್ಲಾಸ್ ಹಾಕಿ ಅಭಿಮಾನಿಗಳನ್ನು ರಂಜಿಸಿದ್ದರು. ಹಾಗೆಯೇ ಪ್ರಶಾಂತ್ ನೀಲ್ ನಿರ್ದೇಶನದ ಸಲಾರ್ ಚಿತ್ರದಲ್ಲಿಯೂ ಇವರು ನಟಿಸಿದ್ದಾರೆ.

ಇದನ್ನೂ ಓದಿ: Akshay Kumar : ಛತ್ರಪತಿ ಶಿವಾಜಿ ಕಾಲದಲ್ಲಿ ಬಲ್ಬ್‌ ಕಂಡು ಹಿಡಿದಿದ್ಯಾರು ? ಅಕ್ಷಯ್‌ ಕುಮಾರ್‌ ವಿರುದ್ಧ ನೆಟ್ಟಿಗರು ಗರಂ

ಇದನ್ನೂ ಓದಿ: Tanuja Movie Trailer Release : ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟ ಬಿ.ಎಸ್ ಯಡಿಯೂರಪ್ಪ : ಸಚಿವ ಸುಧಾಕರ್‌ ಪಾತ್ರ ಏನು ಗೊತ್ತಾ ?

Krishna G Rao: KGF Grandfather Krishna G Rao passes away due to prolonged illness

Comments are closed.