ಸ್ಯಾಂಡಲ್‌ವುಡ್ ನಿರ್ದೇಶಕ ಮಹೇಶ್ ಸಿ ಅಮ್ಮಳ್ಳಿದೊಡ್ಡಿ ಹಾರರ್ ಸಿನಿಮಾ ನಂತರ ಹೊಸದಾಗಿ ಲವ್ ಸಿನಿಮಾಕ್ಕೆ (Love movie song release) ನಿರ್ದೇಶಿಸಿದ್ದಾರೆ. ಈ ಸಿನಿಮಾದ ಟೈಟಲ್ ಹೇಳುವಂತೆ ಇದೊಂದು ಪ್ರೇಮಕಥೆಯನ್ನು ಒಳಗೊಂಡಿದೆ. ಸದ್ಯ ಈ ಸಿನಿಮಾದ ಎರಡನೇ ಹಾಡು ಬಿಡುಗಡೆಯಾಗಿದ್ದು, ಈ ಮೆಲೋಡಿ ಸಾಂಗ್‌ಗೆ ಕೇಳುಗರಿಂದ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿದೆ.
ಈ ಸಿನಿಮಾದ ಮೊದಲ ಹಾಡು ಬಿಡುಗಡೆ ಆದಾಗ ಸಿನಿಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಇದೀಗ ಬಿಡುಗಡೆಯಾದ ಒಂಟಿ ಅಲ್ಲ ನಾನೀಗ ಎನ್ನುವ ಮಲೋಡಿ ಹಾಡನ್ನು ಕೂಡ ಕೇಳುಗರು ಇಷ್ಟಪಟ್ಟಿದ್ದಾರೆ. ಈ ಮೆಲೋಡಿ ಹಾಡಿಗೆ ಹೃದಯ ಶಿವ ಅವರು ಸಾಹಿತ್ಯ ನೀಡಿದ್ದು, ಸಾಯಿ ಶ್ರೀ ಕಿರಣ್ ಟ್ಯೂನ್ ಹಾಕಿದ್ದಾರೆ. ಗಾಯಕಿ ಕೀರ್ತಿ ಮಾರಾತೆ ಅವರ ಮಧುರ ಕಂಠದಿಂದ ಸ್ವರಗಳು ಬಹಳ ಅದ್ಭುತವಾಗಿ ಮೂಡಿ ಬಂದಿದೆ. ಲವರ್ಸ್‌ಗಳ ನಡುವಿನ ಮಧುರ ಪ್ರೇಮಗೀತೆಯಾಗಿರುವ ಈ ಹಾಡಿನಲ್ಲಿ ಯುವ ಪ್ರತಿಭೆಗಳಾದ ಪ್ರಜಯ್ ಜಯರಾಮ್ ಹಾಗೂ ವೃಷ ಪಾಟೀಲ್ ಅಭಿನಯಿಸಿದ್ದಾರೆ.
ನಿರ್ಮಾಪಕ ದಿವಾಕರ್.ಎಸ್ ಅವರು ಶ್ರೀಕಾಲ ಭೈರವೇಶ್ವರ ಮೂವೀ ಮೇಕರ್ಸ್ ನಡಿ ಲವ್ ಸಿನಿಮಾವನ್ನು ನಿರ್ಮಿಸಿದ್ದಾರೆ. ಈ ಸಿನಿಮಾದ ಮೂಲಕ ಪ್ರಜಯ್ ಜಯರಾಮ್ ಹಾಗೂ ವೃಷ ಪಾಟೀಲ ನಾಯಕ ಹಾಗೂ ನಾಯಕಿಯಾಗಿ ಸ್ಯಾಂಡಲ್ ವುಡ್ ಗೆ ಹೊಸ ಮುಖವಾಗಿ ಗುರುತಿಸಿಕೊಳ್ಳಲಿದ್ದಾರೆ. ಕಾಂತಾರ ಸಿನಿಮಾ ಖ್ಯಾತಿಯ ಪ್ರಭಾಕರ್ ಕುಂದರ್ ಬ್ರಹ್ಮಾವರ, ಸತೀಶ್ ಕಾಂತಾರ ಸೇರಿದಂತೆ ಉಮೇಶ್ ಶ್ರೀಕಾಂತ್ ತೇಲಿ, ರಾಧಿಕಾ ಭಟ್, ತಿಲಕ, ಪ್ರಸಾದ್ ಭಟ್, ಹರೀಶ್ ಶೆಟ್ಟಿ, ಸೌರಭ್ ಶಾಸ್ತ್ರೀ, ರಜತ್ ಶೆಟ್ಟಿ ಬಹುತಾರಾಂಗಣ ಈ ಸಿನಿಮಾಕ್ಕಿದೆ.
ಇದನ್ನೂ ಓದಿ : Pretha Movie : ಕಲಾಕರ್ ಹರೀಶ್ ರಾಜ್ ನಿರ್ದೇಶನದ ಪ್ಯಾನ್ ಇಂಡಿಯಾ ಸಿನಿಮಾ ‘ಪ್ರೇತ’ ಫಸ್ಟ್ ಲುಕ್ ರಿಲೀಸ್
ಸಿದ್ದಾರ್ಥ್ ಹೆಚ್ ಆರ್ ಛಾಯಾಗ್ರಹಣ, ರೋಸಿತ್ ವಿಜಯನ್, ಶ್ರೀ ಸಾಯಿ ಕಿರಣ್ ಸಂಗೀತ, ಕಂಬಳಿಹುಳ ಖ್ಯಾತಿಯ ಶಿವ ಪ್ರಸಾದ್ ಹಿನ್ನಲೆ ಸಂಗೀತ, ಲೋಕೇಶ್ ಪುಟ್ಟೇಗೌಡ ಸಂಕಲನ ಸಿನಿಮಾದ ಶ್ರೀಮಂತಿಕೆ ಹೆಚ್ಚಿಸಿದೆ. ನೈಜ ಘಟನೆಗಳಿಂದ ಪ್ರೇರಿತವಾದ ಕಥೆಯಾಗಿರುವ ಲವ್ ಸಿನಿಮಾವನ್ನು ಉಡುಪಿ, ಕೋಟ, ಕುಂದಾಪುರ, ಬೈಂದೂರ್, ಬಾಗಲಕೋಟೆ ಮತ್ತು ಬೆಂಗಳೂರಿನಲ್ಲಿ ಚಿತ್ರೀಕರಿಸಲಾಗಿದೆ. ಈಗಾಗಲೇ ಶೂಟಿಂಗ್ ಮುಗಿಸಿ ಬಿಡುಗಡೆಗೆ ಸಿದ್ದವಾಗಿರುವ ಸಿನಿಮಾ ಹಾಡುಗಳ ಮೂಲಕ ಸದ್ದು ಮಾಡುತ್ತಿದೆ.
Love movie song release: Love movie’s second song release: A shower of appreciation from listeners