Malaika Vasupal : ವಿದ್ಯಾಪತಿಯಾಗಿರುವ ನಾಗಭೂಷಣ್ ಗೆ ಜೋಡಿ ಸಿಕ್ಕಾಗಿದೆ. ಉಪಾಧ್ಯಕ್ಷ ಸುಂದರಿ ಮಲೈಕಾ ವಸೂಪಾಲ್ ಈಗ ಡಾಲಿ ಬಳಗ ಸೇರ್ಪಡೆಯಾಗಿದ್ದಾರೆ. ನಟ ರಾಕ್ಷಸ ಡಾಲಿ ಧನಂಜಯ್ ಒಡೆತನದ ಡಾಲಿ ಪಿಕ್ಚರ್ಸ್ ಟಗರು ಪಲ್ಯ ಸಕ್ಸಸ್ ಬಳಿಕ ಮತ್ತೊಂದು ಸಿನಿಮಾ ಕೈಗೆತ್ತಿ ಕೊಂಡಿರುವುದು ಗೊತ್ತೇ ಇದೆ. ಮತ್ತೊಮ್ಮೆ ಧನು ಹಾಗೂ ನಾಗಭೂಷಣ್ ಕೈ ಜೋಡಿಸಿದ್ದು, ಈ ಚಿತ್ರಕ್ಕೆ ವಿದ್ಯಾಪತಿ ಎಂಬ ಟೈಟಲ್ ಇಡಲಾಗಿದೆ.

ಸಂಕ್ರಾಂತಿ ಹಬ್ಬಕ್ಕೆ ಫಸ್ಟ್ ಲುಕ್ ರಿಲೀಸ್ ಮಾಡಿದ್ದ ಚಿತ್ರತಂಡ ಇಂದು ನಾಯಕಿಯನ್ನು ಪ್ರೇಕ್ಷಕರಿಗೆ ಪರಿಚಯಿಸಿದೆ. ಹೀರೋ ಆಗಿ ಅದೃಷ್ಟ ಪರೀಕ್ಷೆಗಿಳಿದ ಚಿಕ್ಕಣ್ಣನಿಗೆ ಉಪಾಧ್ಯಕ್ಷ ಸಿನಿಮಾದಲ್ಲಿ ನಾಯಕಿ ಮಿಂಚಿದ್ದ ಮಲೈಕಾ ವಸೂಪಾಲ್ ಈಗ ವಿದ್ಯಾಪತಿಗೆ ಜೋಡಿಯಾಗಿದ್ದಾರೆ.
ಹಿಟ್ಲರ್ ಕಲ್ಯಾಣ ಧಾರಾವಾಹಿ ಮೂಲಕ ಕಿರುತೆರೆ ಪ್ರೇಕ್ಷಕರನ್ನು ರಂಜಿಸಿದ್ದ ಮಲೈಕಾ ಉಪಾಧ್ಯಕ್ಷ ಚಿತ್ರದ ಮೂಲಕ ಬೆಳ್ಳಿಪರದೆಗೆ ಎಂಟ್ರಿ ಕೊಟ್ಟಿದ್ದರು. ಮೊದಲ ಸಿನಿಮಾವೇ ಅವರಿಗೆ ದೊಡ್ಡ ಸಕ್ಸಸ್ ತಂದುಕೊಟ್ಟಿದೆ. ಉಪಾಧ್ಯಕ್ಷ ಸಿನಿಮಾದಲ್ಲಿ ಇವ್ರ ನಟನೆ ನೋಡಿ ಮೆಚ್ಚಿಕೊಂಡಿರುವ ವಿದ್ಯಾಪತಿ ಟೀಂ ತಮ್ಮ ತಂಡಕ್ಕೆ ಅವರನ್ನು ಸ್ವಾಗತಿಸಿದೆ.
ಇದನ್ನೂ ಓದಿ : ಕಾಟೇರ ಸಕ್ಸಸ್ : ಮಾಲಾಶ್ರೀ ಪುತ್ರಿ ಆರಾಧನಾ ರಾಮ್ ಬೆನ್ನಲ್ಲೇ ಚಿತ್ರರಂಗಕ್ಕೆ ಶುತ್ರಿ ಪುತ್ರಿ ಗೌರಿ
ವಿದ್ಯಾಪತಿ ಸಿನಿಮಾದಲ್ಲಿ ಮಲೈಕಾ ವಿದ್ಯಾ ಎಂಬ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದು, ಸಿಂಪಲ್ ಆಗಿರುವ ಹೋಮ್ಲಿ ಹುಡುಗಿಯಾಗಿ ಕಾಣಿಸಿಕೊಳ್ಳಲಿದ್ದಾರಂತೆ. ಈ ಹಿಂದೆ ಇಕ್ಕಟ್ ಸಿನಿಮಾ ಮೂಲಕ ಭರವಸೆ ಹುಟ್ಟಿಸಿದ್ದ ಇಶಾಂ ಮತ್ತು ಹಸೀಂ ಖಾನ್ ವಿದ್ಯಾಪತಿ ಸಿನಿಮಾಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಜೊತೆಗೆ ಸಿನಿಮಾವನ್ನು ಇವರೆ ಬರೆದು, ಸಂಕಲನದ ಜವಾಬ್ದಾರಿಯನ್ನು ತಾವೇ ಹೊತ್ತುಕೊಂಡಿದ್ದಾರೆ.

ಇದನ್ನೂ ಓದಿ : ಒಂದು ಸರಳ ಪ್ರೇಮಕತೆ ಸಿನಿಮಾಕ್ಕೆ ಸಾಥ್ ಕೊಟ್ಟ ರಮ್ಯ, ಸೂಫಿ ಶೈಲಿಯ ಹಾಡು ರಿಲೀಸ್
ಆಕ್ಷನ್ ಕಾಮಿಡಿ ಕಥಾಹಂದರ ಹೊಂದಿರುವ ವಿದ್ಯಾಪತಿ ಚಿತ್ರದಲ್ಲಿ ನಾಗಭೂಷಣ್ ವಿಭಿನ್ನ ಗೆಟಪ್ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.ಛಾಯಾಗ್ರಹಣದ ಜವಾಬ್ದಾರಿಯನ್ನು ಲವಿತ್ ಹೊತ್ತಿದ್ರೆ, ಡಾಸ್ಮೋಡ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಇನ್ನು ಮುರುಳಿ ನೃತ್ಯ ನಿರ್ದೇಶನವಿದೆ. ಸುಜಿತ್ ವೆಂಕಟರಾಮಯ್ಯ ಸಾಹಿತ್ಯದಲ್ಲಿ ಹಾಡುಗಳು ಅದ್ಬುತವಾಗಿ ಮೂಡಿಬಂದಿವೆ. ಇನ್ನು ಅರ್ಜುನ್ ಮಾಸ್ಟರ್ ಆಕ್ಷನ್ ವಿದ್ಯಾಪತಿ ಸಿನಿಮಾಕ್ಕಿದೆ. ಮಾರ್ಚ್ ತಿಂಗಳಿನಿಂದ ವಿದ್ಯಾಪತಿ ನಾಯಕಿ ಮಲೈಕಾ ವಸೂಪಾಲ್ ಶೂಟಿಂಗ್ ನಲ್ಲಿ ಭಾಗಿಯಾಗಲಿದ್ದಾರೆ.
ಇದನ್ನೂ ಓದಿ : ಬಂಗಾಳಿ ಬ್ಯೂಟಿ ನಟಿ ಐಂದ್ರಿತಾ ರೈ ಹೊಸ ಪೋಟೋಶೂಟ್
Malaika Vasupal of Hitler Kalyan Serial fame stars Dolly Dhananjay Vidyapathy