Matte Maduve Movie OTT : ‘ಮತ್ತೆ ಮದುವೆ’ ಸಿನಿಮಾ ಜೂನ್ 23ಕ್ಕೆ ಅಮೇಜಾನ್ ಪ್ರೈಮ್ ನಲ್ಲಿ ಸ್ಕ್ರೀಮಿಂಗ್

ತೆಲುಗಿನ ನಟ ನರೇಶ್ ಕೃಷ್ಣ ಹಾಗೂ ಪವಿತ್ರಾ ಲೋಕೇಶ್ ಅಭಿನಯದ ಮತ್ತೆ ಮದುವೆ ಸಿನಿಮಾ ಒಟಿಟಿ ಲಗ್ಗೆ (Matte Maduve Movie OTT) ಇಡಲು ಮುಹೂರ್ತ ಫಿಕ್ಸ್ ಆಗಿದೆ. ಇದೇ ತಿಂಗಳ 23ಕ್ಕೆ ಪ್ರತಿಷ್ಠಿತ ಒಟಿಟಿ ಅಮೇಜಾನ್ ಪ್ರೈಮ್ ನಲ್ಲಿ ಮತ್ತೆ ಮದುವೆ ಸಿನಿಮಾ ಸ್ಕ್ರೀಮಿಂಗ್ ಆಗಲಿದೆ.

ತೆಲುಗು ಹಾಗೂ ಕನ್ನಡ ಎರಡು ಭಾಷೆಯಲ್ಲಿ ಮೂಡಿಬಂದಿದ್ದ ಮತ್ತೆ ಮದುವೆಗೆ ಥಿಯೇಟರ್‌ನಲ್ಲಿ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿತ್ತು. ತೆಲುಗಿನಲ್ಲಿ ಮಳ್ಳಿಪೆಳ್ಳಿ ಎಂಬ ಟೈಟಲ್ ನಡಿ ಮೇ 26ರಂದು ಬಿಡುಗಡೆಯಾಗಿತ್ತು. ಟಾಲಿವುಡ್ ನಲ್ಲಿ ಒಳ್ಳೆ ರೆಸ್ಪಾನ್ಸ್ ಸಿಕ್ಕ ಬೆನ್ನಲ್ಲೆ ಕನ್ನಡದಲ್ಲಿ ಮತ್ತೆ ಮದುವೆ ಎಂಬ ಶೀರ್ಷಿಕೆಯಡಿ ಜೂನ್ 9ರಂದು ತೆರೆಕಂಡಿತ್ತು. ಕನ್ನಡ ಸಿನಿಪ್ರಿಯರು ಹಾಗೂ ಸಿನಿತಾರೆಯರು ಮೆಚ್ಚಿದ್ದ ನರೇಶ್ ಹಾಗೂ ಪವಿತ್ರಾ ಲೋಕೇಶ್ ಸಿನಿಮಾ ಅಮೇಜಾನ್ ಪ್ರೈಮ್ ನಲ್ಲಿ ಸ್ಟ್ರೀಮಿಂಗ್ ಆಗುತ್ತಿದೆ.

ನರೇಶ್ ಅವರ ತಾಯಿ, ಹಿರಿಯ ನಟಿ, ನಿರ್ದೇಶಕಿ ವಿಜಯಾ ನಿರ್ಮಲಾ ಅವರು 1973ರಲ್ಲಿ ‘ಸೂಪರ್ ಸ್ಟಾರ್‌’ ಕೃಷ್ಣ ಅವರ ಜತೆಗೂಡಿ ವಿಜಯ ಕೃಷ್ಣ ಮೂವೀಸ್ ಆರಂಭಿಸಿದ್ದರು. ಇದೀಗ ಆ ಬ್ಯಾನರ್‌ಗೆ 50 ವರ್ಷ ದ ಸಂಭ್ರಮ. ಆ ಹಿನ್ನೆಲೆಯಲ್ಲಿ ಆ ಬ್ಯಾನರ್‌ ಮೂಲಕ ಮತ್ತೆ ಮದುವೆ ಸಿನಿಮಾವನ್ನು ನರೇಶ್ ನಿರ್ಮಾಣ ಮಾಡಿದ್ದರು. ಸಿನಿಮಾಕ್ಕೆ ಎಂ. ಎಸ್. ರಾಜು, ಕಥೆ ಬರೆದು ಆಕ್ಷನ್ ಕಟ್ ಹೇಳಿದ್ದು, ಜಯಸುಧ ಮತ್ತು ಶರತ್ ಬಾಬು ಸಿನಿಮಾದ ಪ್ರಮುಖ ಪಾತ್ರಗಳಿಗೆ ಬಣ್ಣ ಹಚ್ಚಿದ್ದರು.

ಇದನ್ನೂ ಓದಿ : Actor Ram Charan – Upasana couple : 11 ವರ್ಷಗಳ ತಂದೆ ತಾಯಿಯಾದ ನಟ ರಾಮ್ ಚರಣ್, ಉಪಾಸನಾ

ವನಿತಾ ವಿಜಯಕುಮಾರ್, ಅನನ್ಯ ನಾಗೆಲ್ಲ, ರೋಶನ್, ರವಿವರ್ಮ, ಅನ್ನಪೂರ್ಣ, ಭದ್ರಂ, ಯುಕ್ತ, ಪ್ರವೀಣ್ ಯಂಡಮುರಿ, ಮಧು ಹಾಗೂ ಇನ್ನಿತರ ತಾರಬಳಗ ಮತ್ತೆ ಮದುವೆ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ. ಬೋಲ್ಡೆಸ್ಸ್ ಜೋಡಿಯ ಫ್ಯಾಮಿಲಿ ಎಂಟರ್ಟೈನ್ಮೆಂಟ್ ಕಹಾನಿಯನ್ನು ಥಿಯೇಟರ್‌ನಲ್ಲಿ ಮಿಸ್ ಮಾಡಿಕೊಂಡವರು ಅಮೇಜಾನ್‌ನಲ್ಲಿ ನೋಡಬಹುದು.

Matte Maduve Movie OTT : Naresh-Pavitra Lokesh ‘Matte Maduve’ for OTT

Comments are closed.