ಹೈದರಾಬಾದ್ : ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿದ್ದು, ಇದೀಗ ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಕೊರೊನಾ ಮಹಾಮಾರಿ ಇದೀಗ ಚಿತ್ರರಂಗದ ಗಣ್ಯರನ್ನೂ ಕಾಡುತ್ತಿದ್ದು, ಬಾಲಿವುಡ್ ದಿಗ್ಗಜ ಅಮಿತಾಬ್ ಬಚ್ಚನ್, ಐಶ್ವರ್ಯಾ ರೈ, ಅಭಿಷೇಕ್ ಬಚ್ಚನ್ ಅಲ್ಲದೇ ಪುತ್ರಿ ಆರಾಧ್ಯಗೂ ಕೊರೊನಾ ಸೋಂಕು ತಗುಲಿತ್ತು. ಇದೀಗ ಮಿಲ್ಕಿ ಬ್ಯೂಟಿ ತಮನ್ನಾಗೂ ಸೋಂಕು ಕಾಣಿಸಿಕೊಂಡಿದೆ.

ಹೈದ್ರಾಬಾದ್ ನಲ್ಲಿ ನಡೆಯುತ್ತಿರುವ ಸಿನಿಮಾ ಶೂಟಿಂಗ್ ನಲ್ಲಿ ಬ್ಯುಸಿಯಾಗಿರುವ ತಮನ್ನಾಗೆ ಚಿತ್ರೀಕರಣದ ವೇಳೆಯಲ್ಲಿಯೇ ಕೊರೊನಾ ಲಕ್ಷಣಗಳು ಕಾಣಿಸಿಕೊಂಡಿದ್ದರು. ಕೊರೊನಾ ಪರೀಕ್ಷೆಗೆ ಒಳಪಡಿಸಿದಾಗ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.ಇದೀಗ ವೈದ್ಯರ ಸಲಹೆಯ ಮೇರೆಗೆ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ತಮನ್ನಾ ಬಾಟಿಯಾಗೆ ಕೊರೊನಾ ವೈರಸ್ ಸೋಂಕು ಕಾಣಿಸಿಕೊಳ್ಳುವ ಮೊದಲು ಮನೆಯವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಇದೀಗ ಮನೆಯವರಿಂದಲೇ ತಮನ್ನಾಗೆ ಕೊರೊನಾ ಸೋಂಕು ಬಂದಿರುವುದು ಸಾಧ್ಯತೆಯಿದೆ.