ಉಡುಪಿ ಕೃಷ್ಣ ಮಠದ ಕುರಿತು ಮಿಥುನ್‌ ರೈ ವಿವಾದತ್ಮಕ ಹೇಳಿಕೆ : ಟ್ವಿಟರ್‌ನಲ್ಲಿ ಕಿಡಿಕಾರಿದ ನಟ ರಕ್ಷಿತ್‌ ಶೆಟ್ಟಿ

ಸಿಂಪಲ್‌ ಸ್ಟಾರ್‌ ರಕ್ಷಿತ್‌ ಶೆಟ್ಟಿ ಕನ್ನಡ ಸಿನಿರಂಗದ ಬಹು ಬೇಡಿಕೆಯ ನಟ ಹಾಗೂ ನಿರ್ದೇಶಕರಾಗಿ ತಮ್ಮದೇ ಛಾಪು ಮೂಡಿಸಿದ್ದಾರೆ. ಸದ್ಯ ಮುಂಬುರುವ ಸಿನಿಮಾ ಸಪ್ತ ಸಾಗರದಾಚೆ ಎಲ್ಲೋ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಕಳೆದೆರಡು ದಿನಗಳ ಹಿಂದೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಆಪ್ತ ಮಿಥುನ್‌ ರೈ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಮಿಥುನ್‌ ರೈ (Mithun Rai’s Controversial Statement) ವಿರುದ್ದ ಆಕ್ರೋಶ ವ್ಯಕ್ತವಾಗುತ್ತಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ನಟ ರಕ್ಷಿತ್‌ ಶೆಟ್ಟಿ ಕೂಡ ತಮ್ಮ ಟ್ವೀಟರ್‌ ಖಾತೆಯಲ್ಲಿ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.

ನಟ, ನಿರ್ದೇಶಕ ರಕ್ಷಿತ್‌ ಶೆಟ್ಟಿ ತಮ್ಮ ಟ್ವೀಟರ್‌ ಖಾತೆಯಲ್ಲಿ, “ದೇವಾಲಯದ ಪಟ್ಟಣವಾದ ಉಡುಪಿಯು ಸಾವಿರ ವರ್ಷಗಳ ಇತಿಹಾಸವನ್ನು ಬರೆದಿದೆ. ನಿಮಗೆ ತಿಳಿದಿಲ್ಲದಿರುವಾಗ ಸಾರ್ವಜನಿಕ ವೇದಿಕೆಯಲ್ಲಿ ಏಕೆ ಅಸಂಬದ್ಧ ಮಾತನಾಡಬೇಕು.” ಎಂದು ಬರೆದು ಹಂಚಿಕೊಂಡಿದ್ದಾರೆ. ಇವರ ಈ ಹೇಳೀಕೆಯ ಟ್ವೀಟ್‌ಗೆ ನಟನ ಅಭಿಮಾನಿಗಳು ಕೂಡ ವಿವಿಧ ರೀತಿಯಲ್ಲಿ ಕಾಮೆಂಟ್‌ಗಳನ್ನು ಮಾಡಿದ್ದಾರೆ. ಅದರಲ್ಲೊಬ್ಬ “ಶೀಘ್ರದಲ್ಲೇ ಕಾಂಗಿಸ್ ನಮ್ಮ ಶೆಟ್ಟಿಯ ಮೇಲೆ ದಾಳಿ ಮಾಡುತ್ತಾನೆ ಅವನು “ಸಂಘಿ”,ಕೊನೆಗೆ ಯಾರೋ ವೋಟ್ ಗಿಟ್ಟಿಸಿಕೊಳ್ಳಲು ಅಸಂಬದ್ಧವಾಗಿ ಮಾತನಾಡುವ ಈ ಪಿಪಿಎಲ್‌ಗಳ ವಿರುದ್ಧ ಧ್ವನಿ ಎತ್ತಿದರು” ಎಂದಿದ್ದಾರೆ. ಇನ್ನೊಬ್ಬರು “ನೀವು ನ್ಯಾಯದ ಪರ ನಿಂತಿದಿದ್ದಕ್ಕೆ ಧನ್ಯವಾದಗಳು ಸರ್… ಅನೇಕ ಜನರು ಇದನ್ನು ಮಾಡುವುದಿಲ್ಲ” ಎಂದೆಲ್ಲಾ ಕಾಮೆಂಟ್‌ಗಳನ್ನು ಮಾಡಿದ್ದಾರೆ.

ಹೌದು ಜಿಲ್ಲೆಯ ಮೂಡುಬಿದ್ರೆ ತಾಲೂಕಿನ ಪುತ್ತಿಗೆಯಲ್ಲಿ ನಮ್ಮೂರ ಮಸೀದಿ ನೋಡ ಬನ್ನಿ ಕಾರ್ಯಕ್ರಮ ನೆರವೇರಿದ್ದು, ಈ ವೇಳೆ ಉಡುಪಿ ಮಠಕ್ಕೆ ಜಾಗ ನೀಡಿದ್ದು ಮುಸಲ್ಮಾನ ರಾಜರು ಎಂದು ಹೇಳಿದ್ದು, ವಿವಾದದ ಕಿಡಿಯನ್ನು ಮೈಮೇಲೆ ತಂದುಕೊಂಡಿದ್ದಾರೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ ಮಿಥುನ್‌ ರೈ ಅವರ ಹೇಳಿಕೆ ವಿರುದ್ದ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಮಿಥುನ್‌ ರೈ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದು, ಪತ್ರಿಕೆಗಳಲ್ಲಿ ಬಂದ ವರದಿ ನೋಡಿ ನಾನು ಹೇಳಿಕೆ ನೀಡಿದ್ದೇನೆ. ನಾನು ಸೌಹಾರ್ದಯುತ ಹೇಳಿಕೆಯನ್ನೇ ನೀಡಿದ್ದೇನೆ ಎಂದಿದ್ದಾರೆ.

ಇದಲ್ಲದೇ ಇವರ ಹೇಳಿಕೆಗೆ ಹಿಂದೂ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದು, ಅವರ ಹೇಳಿಕೆ ಸತ್ಯಕ್ಕೆ ದೂರವಾದ ಮಾತು ಎಂದಿದ್ದಾರೆ. ಶ್ರೀ ಕೃಷ್ಣ ಮಠಕ್ಕೆ ಎಂಟು ನೂರು ವರ್ಷಗಳ ಇತಿಹಾಸವಿದೆ. ಹಿಂದೂಗಳಿಗೆ ಅವಮಾನವಾಗುವಂತ ಹೇಳಿಕೆ ಇವರದ್ದು ಎಂದು ಪ್ರಮೋದ್‌ ಮುತಾಲಿಕ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅನಂತೇಶ್ವರ ದೇಗುಲಕ್ಕೆ ರಾಮಭೋಜನು ಭೂಮಿ ಕೊಟ್ಟ ಬಗ್ಗೆ ಉಲ್ಲೇಖ ಇದೆ. ಮುಂದೆ ಆ ಭೂಮಿಯೆ ಕೃಷ್ಣ ಮಠಕ್ಕೆ ಬಳಕೆಯಾಗಿದೆ. ಅನಂತೇಶ್ವರ ದೇಗುಲ ನಂತರ ಕೃಷ್ಣ ಮಠ ನಿರ್ಮಾಣಗೊಂಡಿದೆ ಎಂದು ಉಡುಪಿ ಶಾಸಕ ಕೆ ರಘುಪತಿ ಭಟ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ಇರುವ ಜಾಮಿಯಾ ಮಸೀದಿ ಕೂಡ ಜಂಗಮರ ಮಠದ ಜಾಗದಲ್ಲಿತ್ತು ಎಂದು ಹೇಳಲಾಗುತ್ತೆ. ಶೋಕಮಾತಾ ಚರ್ಚ್ ಕೃಷ್ಣ ಮಠದವರು ಕೊಟ್ಟ ಲೀಸ್ ಭೂಮಿಯಲ್ಲಿದೆ.

ಕ್ರಿಶ್ಚಿಯನ್ ಸಮುದಾಯಕ್ಕೆ ಚರ್ಚ್ ಕಟ್ಟಲು ಕೃಷ್ಣಾಪುರ ಮಠ ಭೂಮಿ ಕೊಟ್ಟಿದೆ. ಹಾಜಿ ಅಬ್ದುಲ್ಲಾ ಸಾಹೇಬರು ಭಕ್ತರಾಗಿ ಕೃಷ್ಣ ಮಠಕ್ಕೆ ಸಹಾಯ ಮಾಡಿದ ಉಲ್ಲೇಖವಿದೆ. ಮಿಥುನ್ ರೈಗಳು ಯಾವ ಮುಸಲ್ಮಾನ ರಾಜನ ಬಗ್ಗೆ ಮಾತನಾಡುತ್ತಾರೋ ಗೊತ್ತಿಲ್ಲ. ಮಧ್ವಾಚಾರ್ಯರು 850 ವರ್ಷಗಳ ಹಿಂದೆ ಕೃಷ್ಣಮಠ ಸ್ಥಾಪಿಸಿದರು. ಮಿಥುನ್ ರೈ ಅಯೋಧ್ಯೆಯ ಪರಿಸ್ಥಿತಿ ಬಗ್ಗೆ ಚಿಂತನೆ ಮಾಡಲಿ. ಮಥುರದಲ್ಲಿ ಕೃಷ್ಣ ಮಂದಿರ, ಕಾಶಿ ಬಗ್ಗೆ ದೇಶದ ಜನತೆಗೆ ಗೊತ್ತಿದೆ. ಈಗ ಒಂದೊಂದೇ ಕ್ಷೇತ್ರಗಳು ಮುಕ್ತವಾಗುತ್ತಿದೆ ಎಂದು ರಘುಪತಿ ಭಟ್ ತಿರುಗೇಟು ನೀಡಿದರು. ಮಿಥುನ್‌ ರೈ ಮೂಡುಬಿದ್ರೆ ವಿಧಾನಸಭಾ ಕ್ಷೇತ್ರದ ಟಿಕೆಟ್‌ ಆಕಾಂಕ್ಷಿಯಾಗಿದ್ದು, ಕೆಪಿಸಿಸಿ ಅಧ್ಯಕ್ಚ ಡಿಕೆಶಿ ಅವರು ಆಪ್ತರಾಗಿದ್ದರು. ಕಳೆದ ಲೋಕಸಭಾ ಚುನಾವಣೆಯಲ್ಲಿ ಮಂಗಳೂರು ಕ್ಷೇತ್ರದಿಂದ ಬಿಜೆಪಿ ರಾಜ್ಯ ಘಟಕಾಧ್ಯಕ್ಷ ನಳೀನ್‌ ಕುಮಾರ್‌ ವಿರುದ್ದ ಸ್ಪರ್ಧಿಸಿ ಸೋಲನುಭವಿಸಿದ್ದರು. ನಂತರ ಯುವ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ದಿಸಿದ್ದರು.

ಇದನ್ನೂ ಓದಿ : ಉಡುಪಿ ಮಠಕ್ಕೆ ಜಾಗ ಕೊಟ್ಟಿದ್ದು ಮುಸಲ್ಮಾನರ ರಾಜರು: ವಿವಾದದ ಕಿಡಿ ಹೊತ್ತಿಸಿದ ಮಿಥುನ್‌ ರೈ

ಇದನ್ನೂ ಓದಿ : ಎರಡೂ ಕಿಡ್ನಿ ವೈಫಲ್ಯಕ್ಕೆ ಒಳಗಾದ ನಿರ್ದೇಶಕ ಶ್ಯಾಮ್ ಬೆನಗಲ್ : ಶೀಘ್ರ ಚೇತರಿಕೆಗಾಗಿ ಸಿನಿರಂಗದ ಹಾರೈಕೆ

ನಟ ರಕ್ಷಿತ ಶೆಟ್ಟಿ ಪುಷ್ಕರ್ ಮಲ್ಲಿಕಾರ್ಜುನಯ್ಯ ನಿರ್ಮಾಣದಲ್ಲಿ ಮೂಡಿ ಬರುತ್ತಿರುವ ಸಪ್ತ ಸಾಗರದಾಚೆ ಎಲ್ಲೋ ಸಿನಿಮಾದಲ್ಲಿ ನಾಯಕನಾಗಿ ನಟಿಸುತ್ತಿದ್ದಾರೆ. ಹೇಮಂತ್ ರಾವ್ ನಿರ್ದೇಶನವಿದೆ. ಬೀರಬಲ್ ಸಿನಿಮಾದ ಖ್ಯಾತಿ ರುಕ್ಮಿಣಿ ವಸಂತ್ ನಾಯಕಿಯಾಗಿ ನಟಿಸಿದ್ದಾರೆ. ಸದ್ಯ ಸಪ್ತ ಸಾಗರದಾಚೆ ಎಲ್ಲೋ ಸಿನಿಮಾದ 36 ಸೆಕೆಂಡ್ ಇರುವ ಟೀಸರ್‌ನ್ನು ಪ್ರೇಮಿಗಳ ದಿನದಂದು​ ಬಿಡುಗಡೆ ಮಾಡಲಾಗಿದೆ. ಟೀಸರ್​ನಲ್ಲಿ ರಕ್ಷಿತ್ ಶೆಟ್ಟಿ ಹಾಗೂ ರುಕ್ಮಿಣಿ ವಸಂತ್ ಮಾತ್ರ ಕಾಣಿಸಿಕೊಂಡಿದ್ದಾರೆ. ಮನು-ಸುರಭಿ ಪ್ರೇಮ ಕಥೆಯ ಝಲಕ್​ ಅನ್ನು ಟೀಸರ್​ ನಲ್ಲಿ ಕಾಣಬಹುದಾಗಿದೆ. ಈಗಾಗಲೇ ಟೀಸರ್‌ ನೋಡಿದ ಪ್ರೇಕ್ಷಕರಿಗೆ ರಕ್ಷಿತ್ ಸಿನಿಮಾ ಮೇಲೆ ಮತ್ತಷ್ಟು ನಿರೀಕ್ಷೆ ಹೆಚ್ಚಾಗಿದೆ.

Mithun Rai’s Controversial Statement on Udupi Krishna Mutt: Actor Rakshit Shetty on Twitter

Comments are closed.