ಮುಂಬೈ : ಗೋವಾಕ್ಕೆ ತೆರಳುತ್ತಿದ್ದ ಹಡಗಿನಲ್ಲಿ ನಡೆದಿರುವ ಡ್ರಗ್ಸ್ ಪಾರ್ಟಿಗೆ ಸಂಬಂಧಿಸಿದಂತೆ ಬಾಲಿವುಡ್ ನಟ ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್‌ನನ್ನು ಎನ್‌ಸಿಬಿ (NCB) ಅಧಿಕಾರಿಗಳು ಬಂಧಿಸಿದ್ದಾರೆ.
ಮುಂಬೈನಿಂದ ಗೋವಾಕ್ಕೆ ತೆರಳುತ್ತಿದ್ದ ಐಶಾರಾಮಿ ಹಡಗಿನಲ್ಲಿ ಡ್ರಗ್ಸ್ ಪಾರ್ಟಿಯನ್ನು ಆಯೋಜನೆ ಮಾಡಲಾಗಿತ್ತು. ಖಾಸಗಿ ವಾಹಿನಿಯ ಮಾಲೀಕ ಈ ಪಾರ್ಟಿ ಆಯೋಜಿಸಿದ್ದ ಎಂದು ತಿಳಿದು ಬಂದಿದೆ. ಐಶಾರಾಮಿ ರೇವ್ ಪಾರ್ಟಿಯಲ್ಲಿ ಬಾಲಿವುಡ್ ಖ್ಯಾತ ನಟ ಶಾರೂಖ್ ಪುತ್ರ ಆರ್ಯನ್ ಖಾನ್ ಭಾಗಿಯಾಗಿದ್ದ. ಮಾರುವೇಷದಲ್ಲಿದ್ದ ಎನ್‌ಸಿಬಿ ಅಧಿಕಾರಿಗಳು ಡ್ರಗ್ಸ್ ಪಾರ್ಟಿಯ ಮೇಲೆ ದಾಳಿಯನ್ನು ನಡೆಸಿ ಆರೋಪಿಗಳನ್ನು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದರು.
ಈ ವೇಳೆಯಲ್ಲಿ ಆರ್ಯನ್ ಖಾನ್‌ನನ್ನು ವಶಕ್ಕೆ ಪಡೆದಿದ್ದ ಎನ್‌ಸಿಬಿ ಅಧಿಕಾರಿಗಳು ರಕ್ತದ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಿದ್ದಾರೆ. ಸುದೀರ್ಘ 7 ಗಂಟೆಗಳ ಕಾಲ ನಡೆದ ವಿಚಾರಣೆಯ ಬಳಿಕ ಆರ್ಯನ್ ಖಾನ್‌ನನ್ನು ಬಂಧಿಸಿದ್ದಾರೆ ಎನ್ನಲಾಗುತ್ತಿದೆ.
ಇದನ್ನೂ ಓದಿ : ಕ್ರೂಸ್‌ನಲ್ಲಿ ಡ್ರಗ್ಸ್ ಪಾರ್ಟಿ : ನಟ ಶಾರೂಖ್ ಪುತ್ರ ಆರ್ಯನ್ ವಿಚಾರಣೆ, 16 ಮಂದಿ ಅರೆಸ್ಟ್
ಡ್ರಗ್ಸ್ ಪಾರ್ಟಿಯಲ್ಲಿ ಭಾಗಿಯಾಗಿರುವ 16 ಮಂದಿಯನ್ನು ಎನ್‌ಸಿಬಿ ಅಧಿಕಾರಿಗಳು ಬಂಧಿಸಿದ್ದು, ಎಲ್ಲರನ್ನೂ ನ್ಯಾಯಾಲಯಕ್ಕೆ ಹಾಜರು ಪಡಿಸುವ ಸಾಧ್ಯತೆಯಿದೆ. ನಂತರದಲ್ಲಿ ಎನ್‌ಸಿಬಿ ಅಧಿಕಾರಿಗಳು ಮತ್ತೆ ಎಲ್ಲರನ್ನೂ ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆಯನ್ನು ನಡೆಸುವ ಸಾಧ್ಯತೆಯಿದೆ.
ಇದನ್ನೂ ಓದಿ : ಸಮುದ್ರದ ನಡುವಲ್ಲಿ ನಡೆದ ಡ್ರಗ್ಸ್ ಪಾರ್ಟಿಯಲ್ಲಿ ಶಾರೂಖ್ ಪುತ್ರ ಸಿಕ್ಕಿಬಿದ್ದಿದ್ದು ಹೇಗೆ ಗೊತ್ತಾ ?
(Bollywood Actor Shah Rukh Khan’s son Aryan Khan arrested by NCB )