Nikhil Siddharth – Aishwarya Menon : ಸ್ಪೈ ಸಿನಿಮಾ ಪ್ರಚಾರಕ್ಕಾಗಿ ಬೆಂಗಳೂರಿಗೆ ಬಂದಿಳಿದ ನಿಖಿಲ್ ಸಿದ್ಧಾರ್ಥ್ – ಐಶ್ವರ್ಯ ಮೆನನ್

ಟಾಲಿವುಡ್ ಸಿನಿರಂಗದ ಟ್ಯಾಲೆಂಟೆಡ್ ನಟ ಅಖಿಲ್ ಸಿದ್ಧಾರ್ಥ್ ನಟನೆಯ (Nikhil Siddharth – Aishwarya Menon) ಬಹು ನಿರೀಕ್ಷಿತ ಸಿನಿಮಾ ಸ್ಪೈ ಇದೇ 29ರಂದು ವಿಶ್ವಾದ್ಯಂತ ಬಿಡುಗಡೆಯಾಗುತ್ತಿದೆ. ಈ ಹಿನ್ನೆಲೆ ಸಿನಿತಂಡ ಭರ್ಜರಿ ಪ್ರಚಾರ ಕಾರ್ಯದಲ್ಲಿ ತೊಡಗಿದೆ. ಮುಂಬೈನಲ್ಲಿ ಪ್ರಮೋಷನ್ ಮುಗಿಸಿರುವ ಸ್ಪೈ ಟೀಂ ಈಗ ಬೆಂಗಳೂರಿಗೆ ಬಂದಿಳಿದಿದೆ. ನಾಯಕ ನಿಖಿಲ್ ಸಿದ್ಧಾರ್ಥ್, ನಾಯಕಿ ಐಶ್ವರ್ಯ ಮೆನನ್ ಸಿಲಿಕಾನ್ ಸಿಟಿಯಲ್ಲಿ ಪ್ರಚಾರ ನಡೆಸಲಿದ್ದಾರೆ.

ಸುಭಾಷ್ ಚಂದ್ರ ಬೋಸ್ ಸಾವಿನ ರಹಸ್ಯ ಕಥಾಹಂದರ ಹೊಂದಿರುವ ಸ್ಪೈ ಸಿನಿಮಾಗೆ ಖ್ಯಾತ ನಿರ್ದೇಶಕ ಹಾಗೂ ಸಂಕಲನಕಾರರು ಆಗಿರುವ ಗ್ಯಾರಿ ಬಿ ಹೆಚ್‌ ಸ್ಪೈ ಸಿನಿಮಾಗೆ ಆಕ್ಷನ್‌ ಕಟ್‌ ಹೇಳಿದ್ದಾರೆ. ಎವರು ಮತ್ತು ಹಿಟ್‌ ಸಿನಿಮಾಗಳ ನಿರ್ಮಾಪಕ ಕೆ.ರಾಜಶೇಖರ್‌ ರೆಡ್ಡಿ, ಚರಣ್‌ ರಾಜ್‌ ಉಪ್ಪಲಪತಿ ಸಿನಿಮಾ ನಿರ್ಮಿಸಿದ್ದಾರೆ.

ಇದನ್ನೂ ಓದಿ : Bangalore Boys movie : ಇದೇ 30ಕ್ಕೆ ತೆರೆಗೆ ಬರಲು ಸಿದ್ದವಾಯ್ತು ಬೆಂಗಳೂರು ಬಾಯ್ಸ್‌ ಸಿನಿಮಾ

ಇದನ್ನೂ ಓದಿ : Kamal Haasan – Prabhas : ಪ್ರಾಜೆಕ್ಟ್‌ ಕೆ ಸಿನಿಮಾದಲ್ಲಿ ನಟ ಪ್ರಭಾಸ್‌ ಜೊತೆ ನಟಿಸಲಿದ್ದಾರೆ ನಟ ಕಮಲ್‌ ಹಾಸನ್

ಸನ್ಯಾ ಠಾಕೂರ್‌ ಪ್ರಮುಖ ಪಾತ್ರದಲ್ಲಿ ನಟಿಸಿದ್ದು, ಸ್ಪೆಷಲ್‌ ರೋಲ್‌ ನಲ್ಲಿ ಬಾಹುಬಲಿ ಬಲ್ಲಾಳದೇವ ರಾಣಾ ದಗ್ಗುಭಾಟಿ ಕೂಡ ಕಾಣಿಸಿಕೊಂಡಿದ್ದಾರೆ. ಅಭಿನವ್‌ ಗೋಮತಮ್, ಮಕರಂದ್‌ ದೇಶಪಾಂಡೆ, ನಿತಿನ್‌ ಮೆಹ್ತಾ, ರವಿವರ್ಮ, ಕೃಷ್ಣ ತೇಜ, ಪ್ರಿಶಾ ಸಿಂಗ್‌, ಸೋನಿಯಾ ನರೇಶ್‌ ಮತ್ತು ಇತರರು ತಾರಾಬಳಗದಲ್ಲಿದ್ದಾರೆ. ಈಗಾಗಲೇ ಕಾರ್ತಿಕೇಯ, ಕಾರ್ತಿಕೇಯ-2 ನಂತಹ ಮೆಗಾ ಬ್ಲಾಕ್ ಬಸ್ಟರ್ ಹಿಟ್ ಕೊಟ್ಟಿರುವ ನಿಖಿಲ್ ಸಿದ್ಧಾರ್ಥ್ ಸ್ಪೈ ಮೇಲೆ ನಿರೀಕ್ಷೆ ಹೆಚ್ಚಿದೆ.

Nikhil Siddharth – Aishwarya Menon: Nikhil Siddharth – Aishwarya Menon landed in Bangalore for the promotion of Spy movie.

Comments are closed.