ವರನಟ ಡಾ.ರಾಜ್ ಕುಮಾರ್ ಅವರ ಧರ್ಮಪತ್ನಿ ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ ಅವರು ಕುಟುಂಬ ಹಾಗೂ ಅಭಿಮಾನಿಗಳನ್ನು ಅಗಲಿ ಇಂದಿಗೆ ಮೂರು ವರ್ಷ ಕಳೆದಿದೆ.

ಡಾ.ರಾಜ್ ಕುಮಾರ್ ಅವರ ಮಕ್ಕಳು ಹಾಗೂ ಮೊಮ್ಮಕ್ಕಳು ಪಾರ್ವತಮ್ಮ ಸಮಾಧಿಗೆ ಪೂಜೆ ಮಾಡುವ ಮೂಲಕ ಪಾರ್ವತಮ್ಮ ರಾಜ್ ಕುಮಾರ್ ಅವರ ಪುಣ್ಯತಿಥಿಯನ್ನು ಆಚರಿಸಲಿದ್ದಾರೆ.

ಕನ್ನಡ ಚಿತ್ರರಂಗಕ್ಕೆ ಪಾರ್ವತಮ್ಮ ರಾಜ್ ಕುಮಾರ್ ಅವರ ಕೊಡುಗೆ ಅನನ್ಯ. ನೂರಾರು ಸಿನಿಮಾಗಳನ್ನು ನಿರ್ಮಿಸುವ ಮೂಲಕ ಕನ್ನಡ ಚಿತ್ರರಂಗ ಕಂಡ ಶ್ರೇಷ್ಟ ನಿರ್ಮಾಪಕರಲ್ಲೊಬ್ಬರು.

ಕಳೆದೆರಡು ವರ್ಷಗಳಿಂದಲೂ ಅಭಿಮಾನಿಗಳು ಅನ್ನದಾನ, ರಕ್ತದಾನ ಹಾಗೂ ಉಚಿತ ಆರೋಗ್ಯ ತಪಾಸಣೆಯನ್ನು ನಡೆಸುತ್ತಿದ್ದರು. ಆದ್ರೀಗ ಲಾಕ್ ಡೌನ್ ಹಿನ್ನೆಲೆಯಲ್ಲಿ ಎಲ್ಲದಕ್ಕೂ ತಡೆಯಾಗಿ