ಸೋಮವಾರ, ಏಪ್ರಿಲ್ 28, 2025
HomeCinemaPavitra Lokesh and Naresh : ಪವಿತ್ರಾ‌ ಲೋಕೇಶ್ ಹಾಗೂ ನರೇಶ್ 'ಮತ್ತೆ ಮದುವೆ' :...

Pavitra Lokesh and Naresh : ಪವಿತ್ರಾ‌ ಲೋಕೇಶ್ ಹಾಗೂ ನರೇಶ್ ‘ಮತ್ತೆ ಮದುವೆ’ : ಜೂನ್.9ಕ್ಕೆ ಸಿನಿಮಾ ರಿಲೀಸ್

- Advertisement -

ಟೀಸರ್, ಟ್ರೇಲರ್ ಹಾಗೂ ಹಾಡುಗಳ ಮೂಲಕ ಗಮನಸೆಳೆದಿದ್ದ ಮತ್ತೆ ಮದುವೆ ಸಿನಿಮಾ ಬಿಡುಗಡೆಗೆ (Pavitra Lokesh and Naresh) ಸಜ್ಜಾಗಿ ನಿಂತಿದೆ. ತೆಲುಗಿನಲ್ಲಿ ಮಳ್ಳಿಪೆಳ್ಳಿ ಟೈಟಲ್‌ನಡಿ ತೆರೆ ಕಂಡಿರುವ ಸಿನಿಮಾಕ್ಕೆ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿತ್ತು. ಇದೀಗ ಕನ್ನಡದಲ್ಲಿ ಸಿನಿಮಾ ಬಿಡುಗಡೆಯಾಗುತ್ತಿದ್ದು, ಪವಿತ್ರಾ ಹಾಗೂ ನರೇಶ್ ಪ್ರಚಾರ ಕಾರ್ಯದಲ್ಲಿ ನಿರತರಾಗಿದ್ದಾರೆ. ಬೆಂಗಳೂರಿನ ಎಸ್ ಆರ್ ವಿ ಥಿಯೇಟರ್ ನಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ಜೋಡಿ ಮತ್ತೆ ಮದುವೆ ಬಗ್ಗೆ ಸಾಕಷ್ಟು ವಿಷಯ ಹಂಚಿಕೊಂಡರು.

ತೆಲುಗಿನಲ್ಲಿ ಮಳ್ಳಿ ಪೆಳ್ಳಿ ಸಿನಿಮಾ ಬಿಡುಗಡೆಯಾಗಿ ಸಿನಿ ಪ್ರೇಕ್ಷಕರನ್ನು ರಂಜಿಸಿದೆ. ಮತ್ತೆ‌ ಮದುವೆ ಒಳ್ಳೆಯ ಕಂಟೆಂಟ್ ಇರುವ, ಸದ್ಯ ಸಮಾಜದಲ್ಲಿ ಗಂಡ, ಹೆಂಡತಿ ಸಂಬಂಧಗಳ ಕುರಿತ ಕಥಾಹಂದರವನ್ನು ಹೊಂದಿದೆ. ಈ ಸಿನಿಮಾ ನೋಡಿದವರೆಲ್ಲ ಚೆನ್ನಾಗಿದೆ ಎಂದು ಒಳ್ಳೆಯ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಅಷ್ಟೇ ಸಾಕು ಎಂದು ಹೇಳಿದರು ಈಗ ಕನ್ನಡದಲ್ಲಿ ಜೂನ್ 9ರಂದು ಮತ್ತೆ ಮದುವೆ ಸಿನಿಮಾ ಬಿಡುಗಡೆ ಆಗುತ್ತಿದೆ. ರಂಗಸ್ಥಳಂ ಹಾಗೂ RRR, ಪುಷ್ಪ ಅಂತಹ ಪರಭಾಷೆಯ ಸಿನಿಮಾಗಳಿಗೆ ಕನ್ನಡದಲ್ಲಿ ಡಬ್ಬಿಂಗ್ ಜೊತೆಗೆ ಹಾಡುಗಳನ್ನು ಬರೆದಿರುವ ವರದರಾಜ್ ಚಿಕ್ಕಬಳ್ಳಾಪುರ ಮತ್ತೆ ಮದುವೆ ಸಿನಿಮಾಗೆ ಬಹಳ ಅಚ್ಚುಕಟ್ಟಾಗಿ ಡಬ್ಬಿಂಗ್ ಜೊತೆಗೆ ಅದ್ಭುತ ಹಾಡುಗಳನ್ನ ಕನ್ನಡದಲ್ಲಿ ಬರೆದಿದ್ದಾರೆ. ಇವರ ಸಹಾಯದಿಂದ ಮತ್ತೆ ಮದುವೆ ಸಿನಿಮಾದ ನನ್ನ ಪಾತ್ರಕ್ಕೆ ನಾನೇ ಡಬ್ಬಿಂಗ್ ಮಾಡಿದ್ದೇನೆ ಎಂದು ನರೇಶ್‌ ಹೇಳಿದ್ದಾರೆ.

ಪವಿತ್ರಾ‌ ಲೋಕೇಶ್ ಕೂಡ ಸಿನಿಮಾದ ಬಗ್ಗೆ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ವಿಜಯ್ ಕೃಷ್ಣ ಮೂವೀಸ್ ಮತ್ತೆ ಲಾಂಚ್ ಮಾಡಿ ಒಳ್ಳೆ ಸಿನಿಮಾ ಮಾಡಬೇಕು. ಈ ಬ್ಯಾನರ್ ನಲ್ಲಿ ಹಿಂದೆ ಬಂದ ಸಿನಿಮಾಗಳು ಮೆಸೇಜ್ ಓರಿಯೆಂಟೆಡ್ ಆಗಿತ್ತು. ಸಮಾಜಕ್ಕೆ ಒಳ್ಳೆ ವಿಷಯ ತಲುಪಿಸುವ ಕೆಲಸ ಮಾಡಿದ್ದರು. ವಿಜಯ್ ಕೃಷ್ಣ ಮೂವೀಸ್ ನಡಿ ಮತ್ತೊಂದು ಮೆಸೇಜ್ ಕೊಡುವಂತಹ ಸ್ಟ್ರಾಂಗ್ ಸಿನಿಮಾ ಮಾಡಬೇಕು ಎಂಬುವುದು ನರೇಶ್ ಅವರ ಉದ್ದೇಶವಾಗಿತ್ತು. ಮತ್ತೆ ಮದುವೆ ಕಥೆಯನ್ನು ಎಂ ಎಸ್ ರಾಜು ಅವರು ತಂದಾಗ ಕನ್ನಡದಲ್ಲಿಯೂ ಮಾಡಬೇಕು ಎಂದು ತೀರ್ಮಾನ ಮಾಡಿದೆವು. ತೆಲುಗು ಕನ್ನಡ ಎರಡು ಭಾಷೆಯಲ್ಲಿಯೂ ಒಟ್ಟಿಗೆ ಪ್ರಚಾರ ಮಾಡಲು ಕಷ್ಟವಾಗುತ್ತದೆ ಎಂದು ಮೊದಲ ತೆಲುಗಿನಲ್ಲಿ ಸಿನಿಮಾ ರಿಲೀಸ್ ಮಾಡಿದೆವು. ಜೂನ್ 9ಕ್ಕೆ ಕನ್ನಡದಲ್ಲಿ ಸಿನಿಮಾ ರಿಲೀಸ್ ಆಗ್ತಿದೆ. ಒಳ್ಳೊಳ್ಳೆ ಸಾಂಗ್ಸ್ ಇದೆ. ಒಳ್ಳೆ ಮೆಸೇಜ್ ಎಂದರು.

ಇದನ್ನೂ ಓದಿ : Rihanna Birthday celebration : ಹಿರಣ್ಯನ ನಾಯಕಿಗೆ ಹುಟ್ಟುಹಬ್ಬದ ಸಂಭ್ರಮ : ರಾಜವರ್ಧನ್‌ಗೆ ಯುವನಟಿ ರಿಹಾನಾ ಜೋಡಿ

ಮತ್ತೆ ಮದುವೆ ಸಿನಿಮಾವನ್ನು ನರೇಶ್ ಅವರೇ ನಿರ್ಮಾಣ ಮಾಡುತ್ತಿದ್ದಾರೆ. ನರೇಶ್ ಅವರ ತಾಯಿ, ಹಿರಿಯ ನಟಿ, ನಿರ್ದೇಶಕಿ ವಿಜಯಾ ನಿರ್ಮಲಾ ಅವರು 1973ರಲ್ಲಿ ‘ಸೂಪರ್ ಸ್ಟಾರ್‌’ ಕೃಷ್ಣ ಅವರ ಜತೆಗೂಡಿ ವಿಜಯ ಕೃಷ್ಣ ಮೂವೀಸ್ ಆರಂಭಿಸಿದ್ದರು. ಇದೀಗ ಆ ಬ್ಯಾನರ್‌ಗೆ ಭರ್ತಿ 50 ವರ್ಷ ತುಂಬಿದೆ. ಆ ಹಿನ್ನೆಲೆಯಲ್ಲಿ ಆ ಬ್ಯಾನರ್‌ ಮೂಲಕ ಮತ್ತೆ ಮದುವೆ ಸಿನಿಮಾವನ್ನು ನರೇಶ್ ನಿರ್ಮಾಣ ಮಾಡುತ್ತಿದ್ದಾರೆ. ಸಿನಿಮಾಕ್ಕೆ ಎಂ. ಎಸ್. ರಾಜು, ಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಇದೊಂದು ಫ್ಯಾಮಿಲಿ ಎಂಟರ್ಟೈನ್ಮೆಂಟ್ ಸಿನಿಮಾವಾಗಿದೆ. ಜಯಸುಧ ಮತ್ತು ಶರತ್ ಬಾಬು ಸಿನಿಮಾದ ಪ್ರಮುಖ ಪಾತ್ರಗಳಿಗೆ ಬಣ್ಣ ಹಚ್ಚಿದ್ದಾರೆ. ವನಿತ ವಿಜಯಕುಮಾರ್, ಅನನ್ಯ ನಾಗೆಲ್ಲ, ರೋಶನ್, ರವಿವರ್ಮ, ಅನ್ನಪೂರ್ಣ, ಭದ್ರಂ, ಯುಕ್ತ, ಪ್ರವೀಣ್ ಯಂಡಮುರಿ, ಮಧು ಹಾಗೂ ಇನ್ನಿತರರು ಈ ಚಿತ್ರದಲ್ಲಿ ನಟಿಸಿದ್ದಾರೆ.‌ ಜೂನ್ 9ರಂದು ಮತ್ತೆ ಮದುವೆ ಥಿಯೇಟರ್ ಗೆ ಎಂಟ್ರಿ ಕೊಡಲಿದೆ.

Pavitra Lokesh and Naresh ‘Married Again’: Movie Released on June 9

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular