ಮುಂಬೈ: ಲಾಕ್ ಡೌನ್ ಆದೇಶ ಜಾರಿಯಲ್ಲಿದ್ದರೂ ಕೂಡ ತನ್ನ ಬಾಯ್ ಫ್ರೆಂಡ್ ಜೊತೆ ಜಾಲಿ ರೈಡ್ ಮಾಡುವ ಮೂಲಕ ಲಾಕ್ ಡೌನ್ ಆದೇಶ ಮುರಿದ ಹಿನ್ನಲೆಯಲ್ಲಿ ಬಾಲಿವುಡ್ ನಟಿ ಮತ್ತು ಮಾಡೆಲ್ ಪೂನಂ ಪಾಂಡೆ ವಿರುದ್ದ ಪ್ರಕರಣ ದಾಖಲಾಗಿದೆ.

ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ವ್ಯಾಪಿಸುತ್ತಿರೊ ಹಿನ್ನೆಲೆಯಲ್ಲಿ ಲಾಕ್ ಡೌನ್ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ.

ಆದರೆ ನಟಿ ಪೂನಂ ಪಾಂಡೆ ಬೈನ ಮರೀನ್ ಡ್ರೈವ್ ನಲ್ಲಿ ಸ್ನೇಹಿತನ ಜೊತೆ ಸೇರಿ ಲಾಕ್ ಡೌನ್ ನಿಯಮ ಮುರಿದು ಕಾರಿನಲ್ಲಿ ಸುತ್ತಾಡುತ್ತಿದ್ದಾರೆ.

lಲಾಕ್ ಡೌನ್ ಆದೇಶ ಪಾಲಿಸದ ಹಿನ್ನೆಲೆಯಲ್ಲಿ ಮುಂಬೈ ಪೊಲೀಸರು ಲಾಕ್ ಡೌನ್ ನಿಯಮದಡಿಯಲ್ಲಿ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.


ಪೂನಂ ಪಾಂಡೆ ಮತ್ತು ಆಕೆಯ ಸ್ನೇಹಿತ ಸ್ಯಾಮ್ ಅಹ್ಮದ್ ವಿರುದ್ಧ ಸೆಕ್ಷನ್ 269 ಮತ್ತು 188ರ ಭಾರತೀಯ ದಂಡ ಸಂಹಿತೆಯ (ಐಪಿಸಿ) ಮತ್ತು ರಾಷ್ಟ್ರೀಯ ವಿಪತ್ತುಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಇನ್ಸ್‌ಪೆಕ್ಟರ್ ಮೃತ್ಯುಂಜಯ್ ಹಿರೇಮಠ್ ಹೇಳಿದ್ದಾರೆ.
