ಬೆಂಗಳೂರು : ಸ್ಯಾಂಡಲ್‌ವುಡ್ ನಟ ಪುನೀತ್ ರಾಜ್ ಕುಮಾರ್ ಬಾರದ ಲೋಕಕ್ಕೆ ಪಯಣಿಸಿ ಎರಡು ದಿನ ಕಳೆದಿದೆ. ಅಮೇರಿಕಾದಲ್ಲಿ ಪುನೀತ್ ರಾಜ್ ಕುಮಾರ್ ಅವರ ಪುತ್ರಿ ದೃತಿ ಕೊನೆಗೂ ತಂದೆಯ ಅಂತಿಮ ದರ್ಶನ ಪಡೆದಿದ್ದಾರೆ. ತಂದೆಯ ಪಾರ್ಥಿವ ಶರೀರದ ಮುಂದೆ ನಿಂತು ಕಂಬನಿ ಮಿಡಿದಿದ್ದಾರೆ.

ಪುನಿತ್ ರಾಜ್ ಕುಮಾರ್ ಅವರ ನಿಧನದ ಬೆನ್ನಲ್ಲೇ ಅಮೇರಿಕಾದಲ್ಲಿದ್ದ ಪುನೀತ್ ಪುತ್ರಿ ಧೃತಿ ಬೆಂಗಳೂರಿಗೆ ಹೊರಟಿದ್ದಾರೆ. ವಿಶೇಷ ವಿಮಾನದ ಮೂಲಕ ಮಧ್ಯಾಹ್ನ ದೆಹಲಿಗೆ ಬಂದಿಳಿದ ಧೃತಿ ಅಲ್ಲಿಂದ ಮತ್ತೆ ವಿಶೇಷ ವಿಮಾನದ ಮೂಲಕ ಸಂಜೆ 4.15ರ ಸುಮಾರಿಗೆ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಝೀರೋ ಟ್ರಾಫಿಕ್ ವ್ಯವಸ್ಥೆಯ ಮೂಲಕ ಧೃತಿ ಕಂಠೀರವ ಸ್ಟೇಡಿಯಂಗೆ ಆಗಮಿಸಿದ ತಂದೆಗೆ ಅಂತಿಮ ನಮನ ಸಲ್ಲಿಸಿದ್ದಾರೆ.

ಪುನೀತ್ ರಾಜ್ ಕುಮಾರ್ ಅವರ ನಿಧನದ ಸುದ್ದಿ ತಿಳಿಯುತ್ತಲೇ ರಾಜ್ಯದ ಮೂಲೆ ಮೂಲೆಗಳಿಂದಲೂ ಲಕ್ಷಾಂತರ ಅಭಿಮಾನಿಗಳು ಕಂಠೀರವ ಕ್ರೀಡಾಂಗಣಕ್ಕೆ ಆಗಮಿಸಿದ್ದಾರೆ. ನೆಚ್ಚಿನ ನಟನ ಅಂತಿಮ ದರ್ಶನವನ್ನು ಪಡೆದು ವಿಧಿಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನುಅಂತಿಮ ದರ್ಶನ ಸಂಜೆಯಾದ ಹಿನ್ನೆಲೆಯಲ್ಲಿ ಅಂತ್ಯಕ್ರೀಯೆಯನ್ನು ಭಾನುವಾರದಂದು ನಡೆಸಲು ತೀರ್ಮಾನಿಸಲಾಗಿದೆ.
ಇದನ್ನೂ ಓದಿ : ಪುನೀತ್ ರಾಜ್ ಕುಮಾರ್ ಅಂತ್ಯ ಸಂಸ್ಕಾರಕ್ಕೆ ಸಿದ್ದತೆ : ಈ ಮಾರ್ಗದಲ್ಲಿ ಸಾಗುತ್ತೆ ಅಂತಿಮ ಯಾತ್ರೆ
ಇದನ್ನೂ ಓದಿ : ಪುನೀತ್ ರಾಜ್ ಕುಮಾರ್ ನಿಧನಕ್ಕೆ ಕಂಬನಿ ಮಿಡಿದ ಸೆಹವಾಗ್
( Dhruti, daughter of Puneet Raj Kumar, who received her father’s final appearance )