ಭಾನುವಾರ, ಏಪ್ರಿಲ್ 27, 2025
HomeCinemaRajinikanth's 170th movie : ರಜನಿಕಾಂತ್ 170ನೇ ಸಿನಿಮಾ, 32 ವರ್ಷ ಬಳಿಕ ಮತ್ತೆ ಒಂದಾದ...

Rajinikanth’s 170th movie : ರಜನಿಕಾಂತ್ 170ನೇ ಸಿನಿಮಾ, 32 ವರ್ಷ ಬಳಿಕ ಮತ್ತೆ ಒಂದಾದ ತಲೈವಾ – ಬಿಗ್ ಬಿ

- Advertisement -

ಭಾರತೀಯ ಸಿನಿರಂಗದ (Rajinikanth – Amitabh Bachchan) ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಲೈಕಾ ಮತ್ತೊಂದು ಸಾಹಸಕ್ಕೆ ಕೈ ಹಾಕಿದೆ. ಇಂಡಿಯನ್, ಖೈದಿ ನಂಬರ್ 150, 2.0, ದರ್ಬಾರ್ ಇತ್ತೀಚೆಗೆ ಪೊನ್ನಿಯಿನ್ ಸೆಲ್ವನ್ ನಂತಹ ಹಿಟ್ ಸಿನಿಮಾಗಳನ್ನು ನಿರ್ಮಿಸಿರುವ ಲೈಕಾ ಸೂಪರ್ ಸ್ಟಾರ್ ರಜನಿಕಾಂತ್ ಜೊತೆ ಮತ್ತೆ ಕೈ ಜೋಡಿಸಿದೆ. ರಜನಿಯ 170ನೇ ಸಿನಿಮಾಕ್ಕೆ (Rajinikanth’s 170th movie) ಹಣ ಸುರಿಯುತ್ತಿದೆ. ವಿಶೇಷ ಅಂದರೆ ರಜನಿ ಜೊತೆ ಬಾಲಿವುಡ್ ದಂತಕಥೆ ಅಮಿತಾಬ್ ಬಚ್ಚನ್ ಕೂಡ ನಟಿಸುತ್ತಿದ್ದಾರೆ.

ರಜನಿಕಾಂತ್ ಹಾಗೂ ಅಮಿತಾಬ್ ಬಚ್ಚನ್ ಭಾರತೀಯ ಸಿನಿರಂಗ ಕಂಡ ಘಟಾನುಘಟಿ ನಾಯಕ ನಟರಾಗಿದ್ದಾರೆ. ಈ ಇಬ್ಬರು ತಾರೆಯರು ಅಂದಾ ಕಾನೂನ್, ಗೆರಾಫ್ತಾರ್ ಮತ್ತು ಹಮ್ ಸಿನಿಮಾಗಳಲ್ಲಿ ನಟಿಸಿದ್ದರು. ಈ ಚಿತ್ರಗಳು ಪ್ರೇಕ್ಷಕರ ಮೆಚ್ಚುಗೆ ಪಡೆದುಕೊಂಡಿದ್ದವು. ರಜನಿ ಬಚ್ಚನ್ ಅಭಿನಯಕ್ಕೂ ಮೆಚ್ಚುಗೆಯ ಮಹಾಪೂರ ಹರಿದು ಬಂದಿತ್ತು. ಈ ಸಿನಿಮಾಗಳ ಯಶಸ್ಸಿನ ನಂತರ ಇದೀಗ 32 ವರ್ಷದ ಬಳಿಕ ಒಟ್ಟಿಗೆ ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾಗೆ ಲೈಕಾ ಪ್ರೊಡಕ್ಷನ್ ಹಣ ಹಾಕುತ್ತಿದೆ. ಬಹಳ ಅದ್ಧೂರಿಯಾಗಿ ಮೂಡಿ ಬರಲಿರುವ ಈ ಪ್ರಾಜೆಕ್ಟ್ ಮುಂದಿನ ತಿಂಗಳ ಅಂತ್ಯಕ್ಕೆ ಟೇಕಾಫ್ ಆಗಲಿದೆ.

ಇದನ್ನೂ ಓದಿ : Charlie 777 Movie : ಸಿಂಪಲ್‌ಸ್ಟಾರ್‌ ರಕ್ಷಿತ್‌ ಶೆಟ್ಟಿ ಚಾರ್ಲಿ 777 ಸಿನಿಮಾಕ್ಕೆ ಮೊದಲ ವರ್ಷದ ಸಂಭ್ರಮ

ಇದನ್ನೂ ಓದಿ : Actress Ramya : ಆರೆಂಜ್‌ ಕಲರ್‌ ಸೀರೆಯಲ್ಲಿ ಸಖತ್‌ ಕ್ಯೂಟ್‌ ಆಗಿ ಕಾಣಿಸಿಕೊಂಡ ಮೋಹಕತಾರೆ ರಮ್ಯಾ

ರಜನಿಕಾಂತ್‌ ಹಾಗೂ ಅಮಿತಾಬ್‌ ನಟಿಸಲಿರುವ, ಲೈಕಾ ನಿರ್ಮಾಣ ಮಾಡುತ್ತಿರುವ ಈ ಸಿನಿಮಾವನ್ನು ಜೈಭೀಮ್ ಖ್ಯಾತಿಯ ಟಿಜೆ ಜ್ಞಾನವೇಲ್ ನಿರ್ದೇಶಿಸಲಿದ್ದಾರೆ. ಜೈ ಭೀಮ್ ಮೂಲಕ ಇಂಡಿಯನ್ ಸಿನಿಲೋಕದಲ್ಲಿ ಸಂಚಲನ ಸೃಷ್ಟಿಸಿದ್ದ ಜ್ಞಾನವೇಲ್ ರಜನಿ ಹಾಗೂ ಬಚ್ಚನ್ ನಂತಹ ಸೂಪರ್ ಸ್ಟಾರ್ಸ್ ಗೆ ಸಿನಿಮಾ ಆಕ್ಷನ್ ಕಟ್ ಹೇಳುತ್ತಿದ್ದು, ಈ ಪ್ರಾಜೆಕ್ಟ್ ಮೇಲೆ ನಿರೀಕ್ಷೆ ಹೆಚ್ಚಿದೆ.

Rajinikanth – Amitabh Bachchan : Rajinikanth’s 170th movie, Thalaiva reunites after 32 years – Big B

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular