ರಾಮ್‌ಚರಣ್‌ ಪೆದ್ದಿ ಸಿನಿಮಾಕ್ಕೆ ದೂರಿನ ಭಯ : 250 ಕೋಟಿ ಗಳಿಕೆಯ ಬೆನ್ನಲ್ಲೇ ಬಿಗ್ ಶಾಕ್

ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಅಭಿನಯದ, ಬುಚ್ಚಿ ಬಾಬು ಸನಾ ನಿರ್ದೇಶನದ ಬಹುನಿರೀಕ್ಷಿತ ಚಿತ್ರ ‘ಪೆದ್ದಿ’ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿದ್ದರೂ, ಈಗ ಭಾರಿ ಕಾನೂನು ಸಂಕಷ್ಟಕ್ಕೆ ಸಿಲುಕಿದೆ. ಚಿತ್ರಮಂದಿರಗಳಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿರುವ ಈ ಬಿಗ್ ಬಜೆಟ್ ಸ್ಪೋರ್ಟ್ಸ್ ಆ್ಯಕ್ಷನ್ ಡ್ರಾಮಾ ವಿರುದ್ಧ ಇದೀಗ SC/ST ದೌರ್ಜನ್ಯ ತಡೆ ಕಾಯ್ದೆಯಡಿ ಮೊಕದ್ದಮೆ ದಾಖಲಿಸಲು ದೂರು ಸಲ್ಲಿಕೆಯಾಗಿದೆ.

ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಅಭಿನಯದ, ಬುಚ್ಚಿ ಬಾಬು ಸನಾ ನಿರ್ದೇಶನದ ಬಹುನಿರೀಕ್ಷಿತ ಚಿತ್ರ ‘ಪೆದ್ದಿ’ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿದ್ದರೂ, ಈಗ ಭಾರಿ ಕಾನೂನು ಸಂಕಷ್ಟಕ್ಕೆ ಸಿಲುಕಿದೆ. ಚಿತ್ರಮಂದಿರಗಳಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿರುವ ಈ ಬಿಗ್ ಬಜೆಟ್ ಸ್ಪೋರ್ಟ್ಸ್ ಆ್ಯಕ್ಷನ್ ಡ್ರಾಮಾ ವಿರುದ್ಧ ಇದೀಗ SC/ST ದೌರ್ಜನ್ಯ ತಡೆ ಕಾಯ್ದೆಯಡಿ ಮೊಕದ್ದಮೆ ದಾಖಲಿಸಲು ದೂರು ಸಲ್ಲಿಕೆಯಾಗಿದೆ.

ಒಂದೆಡೆ ಕಲೆಕ್ಷನ್ ಉತ್ತುಂಗದಲ್ಲಿದ್ದರೆ, ಇನ್ನೊಂದೆಡೆ ಚಿತ್ರದಲ್ಲಿನ ಕೆಲವು ಆಕ್ಷೇಪಾರ್ಹ ದೃಶ್ಯಗಳು ಮತ್ತು ಸಂಭಾಷಣೆಗಳು ಚಿತ್ರತಂಡಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿವೆ. ಬಿಡುಗಡೆಯಾದ ಕೇವಲ 5 ದಿನಗಳಲ್ಲಿ ‘ಪೆದ್ದಿ’ ಸಿನಿಮಾ ವಿಶ್ವಾದ್ಯಂತ ಬರೋಬ್ಬರಿ 248.92 ಕೋಟಿ ರೂಪಾಯಿ ಗಳಿಸಿ ಯಶಸ್ವಿಯಾಗಿ ಮುನ್ನುಗ್ಗುತ್ತಿದೆ. ಭಾರತದಲ್ಲೇ ಈ ಚಿತ್ರ 169.70 ಕೋಟಿ ರೂ. ನೆಟ್ ಕಲೆಕ್ಷನ್ ಮಾಡುವ ಮೂಲಕ ದಾಖಲೆ ಬರೆದಿದೆ. ಆದರೆ, ಈ ಭಾರಿ ಯಶಸ್ಸಿನ ಬೆನ್ನಲ್ಲೇ ಸಿನಿಮಾ ದೊಡ್ಡ ವಿವಾದಗಳ ಸುಳಿಗೆ ಸಿಲುಕಿಕೊಂಡಿದೆ.

ಚಿತ್ರದಲ್ಲಿ ಬುಡಕಟ್ಟು ಸಮುದಾಯವನ್ನು ಅತ್ಯಂತ ಅವಮಾನಕರವಾಗಿ ಮತ್ತು ಕೀಳಾಗಿ ಬಿಂಬಿಸಲಾಗಿದೆ ಎಂದು ಆರೋಪಿಸಿ ಆಂಧ್ರಪ್ರದೇಶದ ಮಾನ್ಯಂ ಹಾಗೂ ವಿಜಯನಗರಂ ಜಿಲ್ಲೆಗಳಲ್ಲಿ ಬುಡಕಟ್ಟು ಜನಾಂಗದ ನಾಯಕರು ಅಧಿಕಾರಿಗಳಿಗೆ ಅಧಿಕೃತವಾಗಿ ದೂರು ನೀಡಿದ್ದಾರೆ. ಸಿನಿಮಾದಲ್ಲಿ ಬಳಸಲಾಗಿರುವ ಕೆಲವು ಡೈಲಾಗ್‌ಗಳು ಸಮುದಾಯದ ಗೌರವಕ್ಕೆ ಧಕ್ಕೆ ತಂದಿವೆ ಎಂದು ಅವರು ಆಕ್ರೋಶ ಹೊರಹಾಕಿದ್ದಾರೆ.

ಈ ಹಿನ್ನೆಲೆಯಲ್ಲಿ ಚಿತ್ರದ ನಿರ್ದೇಶಕ ಬುಚ್ಚಿ ಬಾಬು ಸನಾ, ಪ್ರಮುಖ ನಿರ್ಮಾಣ ಸಂಸ್ಥೆಯಾದ ಮೈತ್ರಿ ಮೂವಿ ಮೇಕರ್ಸ್ ಹಾಗೂ ಇಂತಹ ಸಂಭಾಷಣೆಗಳಿಗೆ ಅನುಮತಿ ನೀಡಿದ ಸೆನ್ಸಾರ್ ಮಂಡಳಿ (Censor Board) ಸದಸ್ಯರ ವಿರುದ್ಧ ತಕ್ಷಣವೇ ಅಟ್ರಾಸಿಟಿ ಕೇಸ್ ದಾಖಲಿಸಬೇಕೆಂದು ಬುಡಕಟ್ಟು ಜನಾಂಗದ ಸಂಘಟನೆಗಳು ಪಟ್ಟು ಹಿಡಿದಿವೆ.

Also Read: ಆಮೀರ್​ ಖಾನ್​ ಬಾಳಲ್ಲಿ ಮತ್ತೊಮ್ಮೆ ಕಂಕಣ ಭಾಗ್ಯ : 60ರ ಹರೆಯದಲ್ಲಿ 3ನೇ ಮದುವೆಗೆ ಸಜ್ಜಾದ ಬಾಲಿವುಡ್​ ನಟ

ಒಂದೆಡೆ ಲೀಗಲ್ ಶಾಕ್ ಎದುರಾಗಿದ್ದರೆ, ಮತ್ತೊಂದೆಡೆ ಸಾಮಾಜಿಕ ಜಾಲತಾಣಗಳಲ್ಲಿ ನಾಯಕಿ ಜಾನ್ವಿ ಕಪೂರ್ ಅವರ ಪಾತ್ರದ ಚಿತ್ರಣದ ವಿರುದ್ಧ ನೆಟ್ಟಿಗರು ಕಿಡಿಕಾರುತ್ತಿದ್ದಾರೆ. ಗ್ರಾಮೀಣ ಹಿನ್ನೆಲೆಯ ಕಥೆಯನ್ನು ಹೊಂದಿರುವ ಈ ಸಿನಿಮಾದಲ್ಲಿ ಜಾನ್ವಿ ಕಪೂರ್ ಅವರಿಗೆ ತೊಡಿಸಿರುವ ಉಡುಪುಗಳು ಹಾಗೂ ಅವರನ್ನು ಅತಿಯಾಗಿ ಗ್ಲಾಮರಸ್ ಆಗಿ (Hyper-sexualized) ತೋರಿಸಿರುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ.

ಕಥೆಗೆ ಪೂರಕವಲ್ಲದ ಇಂತಹ ಆಕ್ಷೇಪಾರ್ಹ ಶಾಟ್‌ಗಳನ್ನು ಇಡುವ ಅಗತ್ಯವಿರಲಿಲ್ಲ ಎಂದು ಸಿನಿಪ್ರೇಕ್ಷಕರು ಸಾಮಾಜಿಕ ಜಾಲತಾಣಗಳಲ್ಲಿ ಚಿತ್ರತಂಡದ ವಿರುದ್ಧ ತೀವ್ರ ಆಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಈ ಮಧ್ಯೆ, ಈ ಆಕ್ಷೇಪಾರ್ಹ ಶಾಟ್‌ಗಳಿಗೆ ಸ್ವತಃ ಜಾನ್ವಿ ಕಪೂರ್ ಅವರೇ ವಿರೋಧ ವ್ಯಕ್ತಪಡಿಸಿದ್ದರು ಎನ್ನಲಾದ ಸಂದೇಶವೊಂದು ಲೀಕ್ ಆಗಿರುವುದು ವಿವಾದವನ್ನು ಮತ್ತಷ್ಟು ಮುನ್ನಲೆಗೆ ತಂದಿದೆ. ಒಟ್ಟಿನಲ್ಲಿ ಬಾಕ್ಸ್ ಆಫೀಸ್‌ನಲ್ಲಿ ಮೈಲಿಗಲ್ಲು ಸ್ಥಾಪಿಸುತ್ತಿರುವ ‘ಪೆದ್ದಿ’ ಚಿತ್ರಕ್ಕೆ ಈ ಹೊಸ ಕಾನೂನು ಸಂಕಷ್ಟ ಮತ್ತು ಸಾಮಾಜಿಕ ಜಾಲತಾಣಗಳ ವಿರೋಧ ಯಾವ ರೀತಿಯ ತಿರುವು ನೀಡಲಿದೆ ಎಂಬುದನ್ನು ಕಾದು ನೋಡಬೇಕಿದೆ.

Ram Charans Peddi movie faces complaints Big shock after earning 250 crores

Darshan Shetty Narkali | ದರ್ಶನ್‌ ಶೆಟ್ಟಿ ನಾರ್ಕಳಿ

ದರ್ಶನ್‌ ಶೆಟ್ಟಿ ನಾರ್ಕಳಿ (Darshan Shetty Narkali) ಅವರು ನ್ಯೂಸ್‌ ನೆಕ್ಸ್ಟ್ ಕನ್ನಡ ( News Next Kannada) ವಿಭಾಗದ ಪತ್ರಕರ್ತ. ಮಂಗಳೂರು ವಿವಿಯಲ್ಲಿ ಪದವಿ ಪಡೆದಿದ್ದಾರೆ. ಕಳೆದ 1 ವರ್ಷಗಳಿಂದ ವೆಬ್‌ಸೈಟ್‌ನಲ್ಲಿ ವರದಿಗಾರಿಕೆಯ ಅನುಭವ ಹೊಂದಿದ್ದಾರೆ. ನ್ಯೂಸ್‌ ನೆಕ್ಸ್ಟ್‌ ( News Next Digital) ಸುದ್ದಿ ವಾಹಿನಿಯಲ್ಲಿ ನಿರೂಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜಕೀಯ, ಪರಿಸರ, ವಿಜ್ಞಾನ -ತಂತ್ರಜ್ಞಾನ ರಂಗಗಳಲ್ಲಿ ಆಸಕ್ತಿ ಹೊಂದಿದ್ದಾರೆ. ಪ್ರವಾಸ, ಕ್ರಿಕೆಟ್ ,ಫೋಟೋಗ್ರಾಫಿ, ಓದು, ಸಿನಿಮಾ ಇವರ ಹವ್ಯಾಸಗಳು. More »

Related Stories