ಇತ್ತೀಚೆಗಷ್ಟೇ ಸ್ಯಾಂಡಲ್‌ವುಡ್ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಮಗಳು ರಾದ್ಯಾಳ ಮೊದಲ ವರ್ಷದ ಹುಟ್ಟುಹಬ್ಬವನ್ನು ಬಹಳಷ್ಟು ಸಂಭ್ರಮದಿಂದ ಆಚರಿಸಿದ್ದಾರೆ. ಕಾಂತಾರ ಸಿನಿಮಾ ಸೂಪರ್ ಹಿಟ್ ಬಳಿಕ ನಟ ರಿಷಬ್ ಶೆಟ್ಟಿ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮಿಂಚುತ್ತಿದ್ದಾರೆ. ಹದಿನಾರು ಕೋಟಿ ಬಜೆಟ್‌ನಲ್ಲಿ ನಿರ್ಮಾಣವಾದ ಸಿನಿಮಾ ದೇಶದಾದ್ಯಂತ ಸಖತ್ ಸದ್ದು ಮಾಡಿದೆ. ಸದ್ಯ ಕಾಂತಾರ ಸಿನಿಮಾ ನಂತರ ದಿನಗಳಲ್ಲಿ ಕಾಡಿನ ಸುತ್ತಮತ್ತ ಹಾಗೂ ಕಾಡಿನಲ್ಲಿ ವಾಸಿಸುವ ಜನರ ಸಮಸ್ಯೆಗಳ ಬಗ್ಗೆ ಮಾಹಿತಿಗಳನ್ನು ಕಲೆ ಹಾಕಿ ಅವರ ಸಮಸ್ಯೆಗಳನ್ನು ಪರಿಹರಿಸುವಂತೆ ಸಿಎಂ ಮುಖ್ಯಮಂತ್ರಿ ಬೊಮ್ಮಾಯಿ (Rishabh Shetty – CM Bommai) ಬಳಿ ಮನವಿ ಮಾಡಿದ್ದಾರೆ. ಅದರಂತೆ ಕಾಡಿನ ಜನರ ಹಾಗೂ ಕಾಡಿನ ಸಂಬಂಧಿಸಿದ ಸಮಸ್ಯೆಗೆ ತಕ್ಷಣವೇ ಪರಿಹರಿಸುವುದಾಗಿ ಸಿಎಂ ಬೊಮ್ಮಾಯಿ ಹೇಳಿದ್ದಾರೆ ಎಂದು ತಮ್ಮ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮೂಲಕ ಪೋಸ್ಟ್ ಮಾಡಿದ್ದಾರೆ.
ನಟ ರಿಷಬ್ ಶೆಟ್ಟಿ ವಿಡಿಯೋದಲ್ಲಿ, ” ಕಾಂತಾರ ಸಿನಿಮಾ ನಂತರ ಒಂದಷ್ಟು ಕಾಡ ಅಂಚಿನ ಜನರು ಹಾಗೂ ಕಾಡು ಇಲ್ಲಿ ಒಂದಷ್ಟು ಸಮಯವನ್ನು ಕಳೆಯುತ್ತಾ,ಅರಣ್ಯ ಇಲಾಖೆಯವರೊಂದಿಗೆ ಬೆರೆತು ಅವರ ಸಮಸ್ಯೆಗಳನ್ನು ಕೇಳುತ್ತಾ ಜರ್ನಿಯನ್ನು ಮಾಡುತ್ತಾ ಬಂದಿದ್ದೇನೆ. ಆಗ ಅಲ್ಲಿರುವ ಸಮಸ್ಯೆಗಳ ಬಗ್ಗೆ ಕೂಡ ನನಗೆ ತಿಳಿದಿದೆ. ಕಾಡಾನೆಗಳಿಂದ ಆಗುವ ಸಮಸ್ಯೆಗಳ ಬಗ್ಗೆ ಕೂಡ ನನ್ನ ಅರಿವಿಗೆ ಬರುತ್ತದೆ. ಈಗ ಪೈಯರ್ ಸೀಸನ್ ಆಗಿರುವುದರಿಂದ ಕಾಡನ್ನು ಉಳಿಸಿಕೊಳ್ಳಲು ಮುಂದಾಗಿದ್ದಾರೆ. ನಂತರ ಅರಣ್ಯ ಇಲಾಖೆಯವರೊಂದಿಗೆ ಚರ್ಚೆ ನಡೆಸಿದಾಗ ಸಮಸ್ಯೆಗಳ ನಿವಾರಣೆ ಹಾಗೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳು ಬೇಗನೆ ಭರ್ತಿಯಾಗಬೇಕಾಗಿದೆ.
ಸಾಕಷ್ಟು ವಿಚಾರಗಳನ್ನು ಸುಮಾರು 20 ಪಾಯಿಂಟ್‌ಗಳಾಗಿ ಮಾನ್ಯ ಮುಖ್ಯಮಂತ್ರಿ ಬೊಮ್ಮಾಯಿಯವರಿಗೆ ನೀಡಿದ್ದೇವೆ. ಸಿಎಂ ಬೊಮ್ಮಾಯಿ ಕೂಡ ತುಂಬಾ ಅದ್ಭುತವಾದ ರೆಸ್ಪಾನ್‌ಯನ್ನು ನೀಡಿದ್ದಾರೆ. ಅಷ್ಟೇ ಅಲ್ಲದೇ ಮುಖ್ಯಮಂತ್ರಿಗಳು ಕಾಡಿನ ಪ್ರದೇಶಗಳಿಗೆ ಭೇಟಿ ನೀಡಿದ ಅಲ್ಲಿನ ಸಮಸ್ಯೆಗಳನ್ನು ಖುದ್ದಾಗಿ ವಿಚಾರಿಸಿದ್ದಾರೆ. ಹಾಗಾಗಿ ಇದಕ್ಕೆ ಅತೀ ಶೀಘ್ರದಲ್ಲೇ ಒಳ್ಳೆಯ ರಿಸರ್ಟ್ಸ್ ನೀಡುವುದಾಗಿ ಭರವಸೆ ನೀಡಿದ್ದಾರೆ. ಹೀಗಾಗಿ ನಮಗೆ ತುಂಬಾ ಖುಷಿಯಾಗಿದೆ” ಎಂದು ಹೇಳಿದ್ದಾರೆ.
ಕಾಂತಾರ ಚಿತ್ರದ ನಂತರದ ದಿನಗಳಲ್ಲಿ ಕಾಡು ಸುತ್ತಿ,ಅಡವಿ ಅಂಚಿನ ಜನರ ಜತೆ ಮಾತಾಡಿ, ಅರಣ್ಯ ಇಲಾಖೆ ಸಿಬ್ಬಂದಿಗಳ ಜತೆ ಚರ್ಚಿಸಿ ಕಲೆಹಾಕಿದ ಅಂಶಗಳನ್ನು ಮಾನ್ಯ ಮುಖ್ಯಮಂತ್ರಿಗಳ ಮುಂದಿಟ್ಟಾಗ ಅವರು ತಕ್ಷಣವೇ ಪರಿಹರಿಸುವುದಾಗಿ ಹೇಳಿದ್ದಾರೆ. ಸಮಸ್ಯೆಗೆ ಸ್ಪಂದಿಸಿದ ಶ್ರೀ @BSBommai ಯವರಿಗೆ ಧನ್ಯವಾದಗಳು.@CMofKarnataka @aranya_kfd pic.twitter.com/VRL9YDDZcg
— Rishab Shetty (@shetty_rishab) March 8, 2023
ತಮ್ಮ ಕರಾವಳಿ ಸಂಸ್ಕೃತಿಗೆ ಸಂಪರ್ಕವಿರುವ ಅರ್ಥಪೂರ್ಣ ಸಿನಿಮಾಗಳನ್ನು ಮಾಡುವುದರ ಜೊತೆಗೆ, ನಮ್ಮ ನಾಡಿನ ಅರಣ್ಯ ಸಂಪತ್ತು ಉಳಿಸಿ, ಬೆಳೆಸುವ ಕಡೆಗೆ ಒಬ್ಬ ನಟ ಕೆಲಸವನ್ನು ಎಲ್ಲರೂ ಮೆಚ್ಚುಗೆ ಪಾತ್ರವಾಗಿದೆ. ಸದ್ಯ ರಿಷಬ್ ಶೆಟ್ಟಿ ಕಾಂತಾರ 2 ಸಿನಿಮಾ ಕಥೆಯನ್ನು ರಚಿಸುವಲ್ಲಿ ಬ್ಯುಸಿಯಾಗಿದ್ದಾರೆ. ಈ ಮೂಲಕ ಕಾಂತಾರ 2 ಮುಂದಿನ ವರ್ಷದ ಬೇಸಿಗೆಯಲ್ಲಿ ಬೆಳ್ಳಿತೆರೆಗೆ ಅಪ್ಪಳಿಸಲಿದೆ. ಇಷ್ಟೇ ಅಲ್ಲದೇ “ಕಾಂತಾರ 2” “ಕಾಂತಾರ” ಸಿನಿಮಾದ ಮುಂದುವರಿದ ಭಾಗವಲ್ಲ ಎಂಬುದೂ ಸಹ ಖಚಿತವಾಗಿದೆ.
ಇದನ್ನೂ ಓದಿ : “ಘಜನಿ” ಸಿನಿಮಾ ನಿರ್ಮಾಪಕ ಮಧು ಮಾಂಟೇನಾ ತಂದೆ ನಿಧನ : ಸಂತಾಪ ಸಲ್ಲಿಸಿದ ಸಿನಿತಾರೆಯರು
ಇದನ್ನೂ ಓದಿ : ನಟ ಯಶ್ ರಾಧಿಕಾಗೆ ನೀಡಿದ ಮೊದಲ ಗಿಫ್ಟ್ ಯಾವುದು ? ರಾಧಿಕಾ ಶೇರ್ ಮಾಡಿದ್ರು ಎಕ್ಸಕ್ಲೂಸಿವ್ ಪೋಟೋ
ಈ ಬಾರಿ ಕಾಂತಾರ ಸಿನಿಮಾದಲ್ಲಿ ತೋರಿಸಲಾಗಿದ್ದ ಕಥೆಗೂ ಹಿಂದೆ ನಡೆದಿದ್ದೇನು ಎಂಬುದನ್ನು ತೆರೆಮೇಲೆ ತರಲಿದ್ದು, ಇದು ಸೀಕ್ವೆಲ್ ಆಗಿರದೇ ಪ್ರೀಕ್ವೆಲ್ ಆಗಿರಲಿದೆ. ಕಾಂತಾರ ಸಿನಿಮಾದಲ್ಲಿ ತೋರಿಸಲಾಗಿದ್ದ ಭೂತಕೋಲದ ಹಿನ್ನೆಲೆಯನ್ನು ಈ ಬಾರಿ ಇನ್ನೂ ಆಳವಾಗಿ ತೋರಿಸಲಾಗುತ್ತದೆ. ಈ ಮೂಲಕ ಕಾಡುಬೆಟ್ಟು ಶಿವನ ತಂದೆಯ ಕಾಲಘಟ್ಟದ ಕಥೆಯನ್ನು ಸಿನಿ ರಸಿಕರು ನಿರೀಕ್ಷಿಸಬಹುದು ಎಂದು ಸಿನಿತಂಡ ತಿಳಿಸಿದ್ದಾರೆ.
Rishabh Shetty – CM Bommai : Actor Rishabh Shetty petitioned for the survival of the endangered forest.