ಸೋಮವಾರ, ಏಪ್ರಿಲ್ 28, 2025
HomeCinema‘ರೋಲೆಕ್ಸ್ ಕೋಮಲ್’ಗೆ ನಾಯಕಿಯಾದ ಕರಾವಳಿ ಬೆಡಗಿ ಸೋನಾಲ್ ಮೊಂಟೆರೋ

‘ರೋಲೆಕ್ಸ್ ಕೋಮಲ್’ಗೆ ನಾಯಕಿಯಾದ ಕರಾವಳಿ ಬೆಡಗಿ ಸೋನಾಲ್ ಮೊಂಟೆರೋ

- Advertisement -

ಸೆನ್ಸೇಶನಲ್ ಸ್ಟಾರ್ ಕೋಮಲ್ ಆಫ್ಟರ್ ಲಾಂಗ್ ಬ್ರೇಕ್ ಬಳಿಕ ಮತ್ತೆ ಸಿನಿರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಹಾಗೆಯೇ ನಟ ಕೋಮಲ್ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲೂ ಬ್ಯುಸಿಯಾಗುತ್ತಿದ್ದಾರೆ. ಶ್ರೀನಿವಾಸ್ ಮಂಡ್ಯ ನಿರ್ದೇಶನದಲ್ಲಿ ಮೂಡಿ ಬರ್ತಿರೋ ‘ರೋಲೆಕ್ಸ್ ಕೋಮಲ್’ (Rolex Komal Movie) ಸಿನಿಮಾಕ್ಕೆ ಕೋಮಲ್ ಬಣ್ಣ ಹಚ್ಚುತ್ತಿದ್ದಾರೆ. ಫೋಟೋಶೂಟ್ ಮೂಲಕ ಗಮನ ಸೆಳೆದ ಈ ಸಿನಿಮಾ ಜನವರಿ 26ರಂದು ಸೆಟ್ಟೇರುತ್ತಿದೆ. ಅದಕ್ಕೂ ಮುನ್ನ ಸಿನಿತಂಡದಿಂದ ಹೊಸದೊಂದು ಅಪ್ಡೇಟ್ ಹೊರಬಿದ್ದಿದೆ.

‘ರೋಲೆಕ್ಸ್ ಕೋಮಲ್’ ಸಿನಿಮಾಕ್ಕೆ ನಾಯಕಿ ಹುಡುಕಾಟದಲ್ಲಿದ್ದ ಸಿನಿತಂಡಕ್ಕೆ ಕರಾವಳಿ ಬೆಡಗಿ ಸೋನಾಲ್ ಮೊಂಟೆರೋ ಜೊತೆಯಾಗಿದ್ದಾರೆ. ಸಿನಿಮಾದ ಕಥೆ ಕೇಳಿ ಇಂಪ್ರೆಸ್ ಆಗಿರೋ ಸೋನಾಲ್ ಕೋಮಲ್ ಜೊತೆ ನಟಿಸೋಕೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಸ್ಯಾಂಡಲ್ ವುಡ್ ಅಂಗಳದಲ್ಲಿ ಸಖತ್ ಬ್ಯುಸಿಯಾಗಿರೋ ಸೋನಾಲ್ ಮೊಂಟೆರೋ ಹಲವು ಸಿನಿಮಾಗಳಲ್ಲಿ ಅಭಿನಯಿಸುತ್ತಿದ್ದಾರೆ. ಇದೀಗ ‘ರೋಲೆಕ್ಸ್ ಕೋಮಲ್’ ಸಿನಿಮಾಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದು ‘ರೋಲೆಕ್ಸ್ ಕೋಮಲ್’ ಸಿನಿತಂಡವನ್ನು ಸೇರಿಕೊಂಡಿದ್ದಾರೆ.

ಕಂಟೆಂಟ್ ಬೇಸ್ಡ್ ಸಿನಿಮಾವಾಗಿರೋ ಈ ಸಿನಿಮಾ ನಿರ್ದೇಶಕ ಶ್ರೀನಿವಾಸ್ ಮಂಡ್ಯ ಅವರ ಎರಡನೇ ಸಿನಿಮಾ ಆಗಿದೆ. ಈ ಹಿಂದೆ ‘ಬಿಲ್ ಗೇಟ್ಸ್’ ಸಿನಿಮಾ ನಿರ್ದೇಶನ ಮಾಡಿದ್ದ ಶ್ರೀನಿವಾಸ್ ಮಂಡ್ಯ ಈ ಬಾರಿ ಇಂಟ್ರಸ್ಟಿಂಗ್ ಕಥೆ ಹೊತ್ತು ಬಂದಿದ್ದಾರೆ. ಜನವರಿ 26ರಂದು ಸಿನಿಮಾ ಸೆಟ್ಟೇರಲಿದ್ದು 27ರಿಂದ ಚಿತ್ರೀಕರಣ ಆರಂಭವಾಗಲಿದೆ ಎಂದು ಶ್ರೀನಿವಾಸ್ ಮಂಡ್ಯ ತಿಳಿಸಿದ್ದಾರೆ.

ಇದನ್ನೂ ಓದಿ : ರೇಣು ಮಹಾರಾಜನಾಗಿ ಕಿರುತೆರೆಗೆ ಎಂಟ್ರಿ ಕೊಟ್ಟ ಕೆಜಿಎಫ್‌ ಗ್ಯಾಂಗ್‌ ಸ್ಟಾರ್‌ ತಾರಕ್‌ ಪೊನ್ನಪ್ಪ

ಇದನ್ನೂ ಓದಿ : ಆಸ್ಕರ್ ನಾಮಿನೇಷನ್ ಲಿಸ್ಟ್ ಬಿಡುಗಡೆಗೆ ಕ್ಷಣಗಣನೆ : ಆರ್‌ಆರ್‌ಆರ್‌ಗೆ ಲಭಿಸುತ್ತಾ ಪ್ರಶಸ್ತಿ?

ಇದನ್ನೂ ಓದಿ : Actress Prema : ಎರಡನೇ ಮದುವೆ ಬಗ್ಗೆ ಸ್ಪಷ್ಟನೆ ನೀಡಿದ ನಟಿ ಪ್ರೇಮಾ

ಇನ್ನು ಈ ಸಿನಿಮಾವನ್ನು ನಿರ್ಮಾಪಕ ಅನಿಲ್ ಕುಮಾರ್ ಎಸ್ ಫೀನಿಕ್ಸ್ ಎಂಟರ್ಟೈನ್ಮೆಂಟ್ಸ್ ಬ್ಯಾನರ್ ನಡಿ ನಿರ್ಮಾಣ ಮಾಡುತ್ತಿದ್ದಾರೆ. ಸಿನಿಮಾದಲ್ಲಿ ರಂಗಾಯಣ ರಘು, ಶೋಭರಾಜ್, ಅರವಿಂದ್, ಅಪೂರ್ವ ಸೇರಿದಂತೆ ಹಲವು ಕಲಾವಿದರನ್ನು ಒಳಗೊಂಡ ಬಹು ತಾರಾಬಳಗದಲ್ಲಿದ್ದಾರೆ. ರಾಕೇಶ್ ಸಿ ತಿಲಕ್ ಈ ಸಿನಿಮಾಕ್ಕೆ ಛಾಯಾಗ್ರಾಹಕರಾಗಿ ಕಾರ್ಯನಿರ್ವಹಿಸಲಿದ್ದಾರೆ. ಈ ಸಿನಿಮಾಕ್ಕೆ ಜೆಸ್ಸಿ ಅವರು ಸಂಗೀತ ನಿರ್ದೇಶನ ಮಾಡಲಿದ್ದಾರೆ. ಅರವಿಂದ್ ರಾಜ್ ಸಂಕಲನ ಈ ಸಿನಿಮಾಕ್ಕೆ ಇರುತ್ತದೆ.

Rolex Komal Movie: Sonal Montero is the heroine of Rolex Komal

RELATED ARTICLES

Most Popular