ಬೆಂಗಳೂರು : ಖ್ಯಾತ ನಟಿ ಮಾಲಾಶ್ರೀ ಅವರ ಪತಿ, ಸ್ಯಾಂಡಲ್ ವುಡ್ ಹಿರಿಯ ನಿರ್ಮಾಪಕ ರಾಮು ಕೊರೊನಾ ವೈರಸ್ ಸೋಂಕಿಗೆ ಬಲಿಯಾಗಿದ್ದಾರೆ.
ಒಂದು ವಾರದ ಹಿಂದೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಆದರೆ ಕಳೆದ ಮೂರು ದಿನಗಳ ಹಿಂದೆ ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಎಮ್.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ರಾಮು ಅವರು ಸಾವನ್ನಪ್ಪಿದ್ದಾರೆ. ಎಕೆ 47, ಲಾಕಪ್ ಡೆತ್, ಕಲಾಸಿಪಾಳ್ಯ, ಸಿಬಿಐ ದುರ್ಗಾ ಸೇರಿದಂತೆ ಹಲವು ಸಿನಿಮಾಗಳನ್ನು ನಟಿಸಿದ್ದರು.
ಸ್ಯಾಂಡಲ್ ವುಡ್ ಮಟ್ಟಿಗೆ ದುಬಾರಿ ವೆಚ್ಚದಲ್ಲಿ ಸಿನಿಮಾ ನಿರ್ಮಾಣ ಮಾಡುವ ಮೂಲಕ ಕೋಟಿ ರಾಮು ಅಂತಾನೂ ಖ್ಯಾತಿಯನ್ನು ಪಡೆದಿದ್ದಾರೆ. ನಟಿ ಮಾಲಾಶ್ರೀ ಹಾಗೂ ಇಬ್ಬರು ಮಕ್ಕಳನ್ನು ರಾಮು ಅವರು ಅಗಲಿದ್ದಾರೆ. ಇದೀಗ ರಾಮು ಅವರ ನಿಧನಕ್ಕೆ ಸ್ಯಾಂಡಲ್ ವುಡ್ ಶಾಕ್ ಆಗಿದ್ದು, ಸಿನಿಮಾ ನಟ, ನಟಿಯರು ಸಂತಾಪ ಸೂಚಿಸಿದ್ದಾರೆ.
