ಭಾನುವಾರ, ಏಪ್ರಿಲ್ 27, 2025
HomeCinemaMohan Juneja : ಸ್ಯಾಂಡಲ್‌ವುಡ್‌ ಖ್ಯಾತ ಹಾಸ್ಯನಟ ಮೋಹನ್‌ ಜುನೇಜ ಇನ್ನಿಲ್ಲ

Mohan Juneja : ಸ್ಯಾಂಡಲ್‌ವುಡ್‌ ಖ್ಯಾತ ಹಾಸ್ಯನಟ ಮೋಹನ್‌ ಜುನೇಜ ಇನ್ನಿಲ್ಲ

- Advertisement -

ಸ್ಯಾಂಡಲ್‌ವುಡ್‌ನ ಖ್ಯಾತ ಹಾಸ್ಯನಟ ಮೋಹನ್‌ ಜುನೇಜ (Mohan Juneja ) (54 ವರ್ಷ) ವಿಧಿವಶರಾಗಿದ್ದಾರೆ. ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಹೆಸರುಘಟ್ಟ ಮುಖ್ಯರಸ್ತೆಯಲ್ಲಿರುವ ಸಪ್ತಗಿರಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಬಾರದ ಲೋಕಕ್ಕೆ ಪಯಣಿಸಿದ್ದಾರೆ.

ಕಿರುತೆರೆ ಹಾಗೂ ಬೆಳ್ಳಿ ತೆರೆಯಲ್ಲಿ ಹಲವು ವರ್ಷಗಳ ಕಾಲ ಮಿಂಚಿದ್ದ ಮೋಹನ್‌ ಜುನೇಜ ಬೆಂಗಳೂರಿನ ಉತ್ತರ ತಾಲೂಕಿನ ತಮ್ಮೇನಹಳ್ಳಿಯಲ್ಲಿ ವಾಸವಾಗಿದ್ದರು. ವಠಾರ ಧಾರವಾಹಿಯ ಮೂಲಕ ಹೆಚ್ಚು ಜನಪ್ರಿಯತೆಯನ್ನು ಪಡೆದುಕೊಂಡ ಮೋಹನ್‌ ಜುನೇಜ, ಚೆಲ್ಲಾಟ ಸಿನಿಮಾದಲ್ಲಿ ಮದುಮಗನ ಪಾತ್ರದಲ್ಲಿ ಪ್ರಖ್ಯಾತಿಯನ್ನು ಗಳಿಸಿದ್ದರು. ಅಷ್ಟೇ ಯಾಕೆ ಭಾರತೀಯ ಚಿತ್ರರಂಗದ ಇತಿಹಾಸದಲ್ಲಿಯೇ ದಾಖಲೆಗಳ ಮೇಲೆ ದಾಖಲೆ ಬರೆಯುತ್ತಿರುವ ಕೆಜಿಎಫ್‌ ಭಾಗ 1 ಹಾಗೂ ಕೆಜಿಎಫ್‌ ಭಾಗ 2 ರಲ್ಲಿಯೂ ಅಭಿನಯಿಸಿದ್ದಾರೆ.

ಮೋಹನ್ ಅವರು ಹಾಸ್ಯನಟರಾಗಿ ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ನಟಿಸಿದ್ದಾರೆ, ವೃತ್ತಿಜೀವನದಲ್ಲಿ ಅವರು 100 ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ನಟಿಸಿದ್ದಾರೆ. ಮೋಹನ್‌ ಅವರ ನಿಧನಕ್ಕೆ ಅಭಿಮಾನಿಗಳು, ಚಿತ್ರರಂಗದ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ : ಸ್ನೇಹಿತನೊಂದಿಗೆ ಫೋಟೋ ಶೇರ್​ ಮಾಡಲು ಹೋಗಿ ಯರ್ರಾಬಿರ್ರಿ ಟ್ರೋಲ್​ ಆದ ಮಂದಿರಾ ಬೇಡಿ

ಇದನ್ನೂ ಓದಿ : ಇನ್ಸ್ಟಾಗ್ರಾಂನಲ್ಲಿ ಹೊಸ ದಾಖಲೆ ಬರೆದ ಯಶ್‌ : ರಾಕಿ ಬಾಯ್‌ ಈಗ ನ್ಯಾಷನಲ್‌ ಸ್ಟಾರ್‌

Sandalwood actor Mohan Juneja no more

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular