ಬೆಂಗಳೂರು : ಸ್ಯಾಂಡಲ್ ವುಡ್ ಖ್ಯಾತ ನಟ ಸಂಚಾರಿ ವಿಜಯ್ ಭೀಕರ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಅವರನ್ನು ನಗರ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ನಟ ವಿಜಯ್ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ತನ್ನ ಸ್ನೇಹಿತರ ಜೊತೆಯಲ್ಲಿ ಬೈಕಿನಲ್ಲಿ ತೆರಳುತ್ತಿದ್ದ ವೇಳೆಯಲ್ಲಿ ಅಪಘಾತ ಸಂಭವಿಸಿದೆ. ವಿಜಯ್ ಅವರ ತಲೆಯ ಭಾಗಕ್ಕೆ ಗಂಭೀರ ಗಾಯವಾಗಿದ್ದು, ತೊಡೆಯ ಭಾಗ ಮುರಿದಿದೆ ಎಂದು ತಿಳಿದು ಬಂದಿದೆ. ತೀವ್ರ ರಕ್ತಶ್ರಾವದಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆಯನ್ನು ಕೊಡಿಸಲಾಗುತ್ತಿದೆ.
ನಾನು ಅವಳಲ್ಲ ಸಿನಿಮಾಕ್ಕೆ ರಾಷ್ಟ್ರಪ್ರಶಸ್ತಿಯನ್ನು ಪಡೆದುಕೊಂಡಿದ್ದ ಸಂಚಾರಿ ವಿಜಯ್ ಕೃಷ್ಣ ತುಳಸಿ, ಜಂಟಲ್ ಮೆನ್, ಆಕ್ಟ್ 178, ನಾತಿಚರಾಮಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ.