Actor Sowjanya Suicide : ಖ್ಯಾತ ಕಿರುತೆರೆ ನಟಿ ಸೌಜನ್ಯ ಆತ್ಮಹತ್ಯೆ : ಸ್ಥಳದಲ್ಲಿ ಡೆತ್‌ನೋಟ್‌ ಪತ್ತೆ

ಬೆಂಗಳೂರು : ಕನ್ನಡದ ಖ್ಯಾತ ಕಿರುತೆರೆಯ ನಟಿ ಸೌಜನ್ಯ ಅಪಾರ್ಟ್‌ಮೆಂಟ್‌ನಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ದೊಡ್ಡಬೆಲೆ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಳದಲ್ಲಿ ಡೆತ್‌ನೋಟ್‌ ಪತ್ತೆಯಾಗಿದೆ ಎನ್ನಲಾಗುತ್ತಿದೆ.

ಕೊಡಗು ಜಿಲ್ಲೆಯ ಕುಶಾಲನಗರದ ನಿವಾಸಿಯಾಗಿದ್ದ ಸೌಜನ್ಯ ( 25 ವರ್ಷ) ಹಲವು ವರ್ಷಗಳಿಂದಲೂ ದೊಡ್ಡಬೆಲೆಯಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ವಾಸವಾಗಿದ್ದರು. ಕನ್ನಡದ ಕಿರುತೆರೆಯಲ್ಲಿಯೂ ನಟಿಸುತ್ತಿದ್ದರು. ಅಲ್ಲದೇ ಕನ್ನಡದ ಚೌಕಟ್ಟು ಹಾಗೂ ಫಮ್‌ ಚಿತ್ರದಲ್ಲಿ ನಟಿಸಿದ್ದಾರೆ.

ಇಂದು ಬೆಳಗ್ಗೆ ತನ್ನ ಪಿಎಯ ಬಳಿಯಲ್ಲಿ ತಿಂಡಿಯನ್ನು ತರಲು ತಿಳಿಸಿದ್ದಾರೆ. ತಿಂಡಿಯನ್ನು ತೆಗೆದುಕೊಂಡು ವಾಪಾಸ್‌ ಬಂದ ವೇಳೆಯಲ್ಲಿ ನಟಿ ಸೌನಜ್ಯ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಡೆತ್‌ ನೋಟ್‌ ನಲ್ಲಿ ಅನಾರೋಗ್ಯದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಬೆರೆದುಕೊಂಡಿದ್ದಾರೆ ಎನ್ನಲಾಗುತ್ತಿದೆ.

ತನ್ನ ತಂದೆ ತಾಯಿಗೆ ಕ್ಷಮೆಯಾಚನೆಯನ್ನು ಮಾಡಿದ್ದಾರೆ. ನನ್ನ ಮೇಲೆ ಸಾಕಷ್ಟು ಜವಾಬ್ದಾರಿಯಿದೆ. ತನಗೆ ಸಹಾಯ ಮಾಡಿದ ಎಲ್ಲರಿಗೂ ಧನ್ಯವಾದವನ್ನು ಸಮರ್ಪಿಸಿದ್ದಾರೆ. ತನ್ನ ಸಾವಿಗೆ ನಾನೇ ಕಾರಣ ಎಂದು ಬರೆದುಕೊಂಡಿದ್ದಾರೆ ಎನ್ನಲಾಗುತ್ತಿದೆ. ಆದರೆ ಸಾವಿಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಕುಂಬಳಗೋಡು ಠಾಣೆಯ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನೊಂದೆಡೆಯಲ್ಲಿ ಸೌಜನ್ಯ ಪೋಷಕರಿಗೂ ಮಾಹಿತಿಯನ್ನು ನೀಡಲಾಗಿದ್ದು, ಅವರು ಕುಶಾಲನಗರದಿಂದ ಬರುತ್ತಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ : ಪುರುಷರ ಒಳ ಉಡುಪಿನ ಜಾಹೀರಾತಿನಲ್ಲಿ ರಶ್ಮಿಕಾ: ಇದೇಷ್ಟು ಸರಿ ಅಂತ ಕೇಳ್ತಿದ್ದಾರೆ ನೆಟ್ಟಿಗರು

ಇದನ್ನೂ ಓದಿ : ಪುಷ್ಪ’ ಚಿತ್ರದ ಫಸ್ಟ್ ಲುಕ್ ರಿಲೀಸ್ ; ಅಲ್ಲು ಅರ್ಜುನ್ ಗೆ ನಾಯಕಿಯಾದ ರಶ್ಮಿಕಾ ಮಂದಣ್ಣ

( Kannada Famous television actress courtesy of suicide, Death note spotted on location )

Comments are closed.