ಮುಂಬೈ : ಬಾಲಿವುಡ್ ನಟ ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್ ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಬೆನ್ನಲ್ಲೇ ಎನ್‌ಸಿಬಿ ಅಧಿಕಾರಿಗಳು ಬಾಲಿವುಡ್ ನಟಿ ಅನನ್ಯ ಪಾಂಡೆ ಅವರ ನಿವಾಸದಲ್ಲಿ ಶೋಧ ಕಾರ್ಯವನ್ನು ನಡೆಸಿದ್ದಾರೆ. ಈ ವೇಳೆಯಲ್ಲಿ ಲ್ಯಾಪ್‌ಟಾಪ್, ಮೊಬೈಲ್ ಪೋನ್ ಹಾಗು ಎಲೆಕ್ಟ್ರಾನಿಕ್ ವಸ್ತುಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಸಮುದ್ರದಲ್ಲಿ ಕ್ರೂಸ್‌ನಲ್ಲಿ ನಡೆದಿದ್ದ ಡ್ರಗ್ಸ್ ಪ್ರಕರಣದಲ್ಲಿ ಬಂಧಿತನಾಗಿರುವ ಆರ್ಯನ್ ಖಾನ್ ಅಕ್ಟೋಬರ್ ಅಂತ್ಯದ ವರೆಗೂ ಜೈಲಿನಲ್ಲಿಯೇ ಇರಬೇಕಾಗಿದೆ. ಇನ್ನೊಂದೆಡೆಯಲ್ಲಿ ಆರ್ಯಖಾನ್ ಗೆಳತಿ ಬಾಲಿವುಡ್ ನಟಿ ಅನನ್ಯ ಪಾಂಡೆ ಮನೆಗೆ ಎನ್‌ಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಈ ವೇಳೆಯಲ್ಲಿ ಅನನ್ಯ ಪಾಂಡೆ ಮನೆಯಲ್ಲಿ ದೊರೆತಿರುವ ತಾಂತ್ರಿಕ ಸಾಕ್ಷ್ಯಗಳನ್ನು ಕಲೆ ಹಾಕುವ ಕಾರ್ಯವನ್ನು ಮಾಡಿದ್ದಾರೆ. ದಾಳಿಯ ವೇಳೆಯಲ್ಲಿ ಮಹತ್ವದ ದಾಖಲೆಗಳು ಲಭ್ಯವಾಗಿದೆ ಎನ್ನಲಾಗುತ್ತಿದೆ. ಅಲ್ಲದೇ ಅನನ್ಯ ಪಾಂಡೆ ಇಂದು ಎನ್‌ಸಿಬಿ ಅಧಿಕಾರಿಗಳ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದು, ಈ ವೇಳೆಯಲ್ಲಿ ಡ್ರಗ್ಸ್ ಪಾರ್ಟಿ ವಿಚಾರದ ಕುರಿತು ಮಾಹಿತಿಯನ್ನು ಕಲೆ ಹಾಕಿದ್ದಾರೆ ಎನ್ನಲಾಗುತ್ತಿದೆ. ಆದರೆ ಅನನ್ಯ ಪಾಂಡೆ ಆರ್ಯನ್ ಖಾನ್ ಜೊತೆಗೆ ಡ್ರಗ್ಸ್ ಪ್ರಕರಣದಲ್ಲಿ ಭಾಗಿಯಾಗಿದ್ದಾರಾ. ಇಲ್ಲಾ ಡ್ರಗ್ಸ್ ಬೇರೆ ಯಾವ ರೀತಿಯ ನಂಟು ಹೊಂದಿದ್ದಾರೆ ಅನ್ನೋ ಕುರಿತು ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ.

ಇನ್ನೊಂದೆಡೆಯಲ್ಲಿ ಅರ್ಯನ್ ಖಾನ್ ಡ್ರಗ್ಸ್ ಕೇಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾರೂಖ್ ಮನೆಗೆ ಎನ್‌ಸಿಬಿ ಅಧಿಕಾರಿಗಳು ತೆರಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ನೋಟಿಸ್ ನೀಡಿದ್ದು, ತಾಂತ್ರಿಕ ಸಾಕ್ಷ್ಯಗಳನ್ನು ಕಲೆ ಹಾಕುವ ಕಾರ್ಯವನ್ನು ಮಾಡಿದೆ.
ಇದನ್ನೂ ಓದಿ : ಮಲೆನಾಡ ಭೂಗತ ಲೋಕವನ್ನು ಅನಾವರಣಗೊಳಿಸಿದ “ಕಾರ್ಗಲ್ ನೈಟ್ಸ್”
ಇದನ್ನೂ ಓದಿ : ಆರ್ಯನ್ ಖಾನ್ ಭೇಟಿಯ ಬೆನ್ನಲ್ಲೇ ಶಾರೂಖ್ ಮನೆ ಮೇಲೆ ಎನ್‌ಸಿಬಿ ದಾಳಿ
( NCB inquiry into Bollywood actress Ananya Panday, mobile and laptop seizure officials )