ಸಂತೋಷ್ ಶ್ರೀಕಂಠಪ್ಪ ನಿರ್ದೇಶನದಲ್ಲಿ ಮೂಡಿ ಬಂದ “ಖಾಸಗಿ ಪುಟಗಳು” (Khasagi Putagalu) ಸಿನಿಮಾ ನವೆಂಬರ್ 18ರಂದು ರಾಜ್ಯಾದ್ಯಂತ ತೆರ ಕಂಡಿದೆ. ಟ್ರೇಲರ್ ಹಾಗೂ ಹಾಡುಗಳ ಮೂಲಕ ಪ್ರೇಕ್ಷಕರಲ್ಲಿ ನಿರೀಕ್ಷೆ ಮೂಡಿಸಿದ್ದ ಸಿನಿಮಾ ಚಿತ್ರಮಂದಿರದಲ್ಲಿ ಆ ನಿರೀಕ್ಷೆಯನ್ನು ದುಪ್ಪಟ್ಟುಗೊಳಿಸಿದೆ. ಪ್ರೇಕ್ಷಕರಿಂದ ಫುಲ್ ಮಾರ್ಕ್ಸ್ ಗಿಟ್ಟಿಸಿಕೊಂಡ ಈ ಸಿನಿಮಾ ಮೂರನೇ ವಾರಕ್ಕೆ ಕಾಲಿಡುತ್ತಿದೆ.
ನವೀರಾದ ಪ್ರೇಮಕಥೆಯುಳ್ಳ ‘ಖಾಸಗಿ ಪುಟಗಳು’ ಸಿನಿಮಾ ಕಟೆಂಟ್, ವಿಶ್ಯುವಲ್ಸ್, ಹಾಡುಗಳ ಜೊತೆಗೆ ಕಲಾವಿದರ ಅಭಿನಯದ ಮೂಲಕವೂ ಸಿನಿ ಪ್ರೇಕ್ಷಕರ ಗಮನ ಸೆಳೆದಿದೆ. ಸಿನಿಮಾ ನೋಡಿದವರು ಮೆಚ್ಚುಗೆ ಸೂಚಿಸಿದ್ದಾರೆ. ಉತ್ತಮ ವಿಮರ್ಶೆ ಹೊತ್ತ ಈ ಸಿನಿಮಾದ ಬಗ್ಗೆ ಪ್ರೇಕ್ಷಕರು ಕೂಡ ಮೆಚ್ಚುಗೆ ವ್ಯಕ್ತಪಡಿಸಿ ಸೋಶಿಯಲ್ ಮೀಡಿಯಾದಲ್ಲಿ ಅಭಿಪ್ರಾಯ ಹಂಚಿಕೊಳ್ಳುತ್ತಿದ್ದಾರೆ. ಹೊಸಬರ ಪ್ರಯತ್ನವನ್ನು ಇನ್ನಷ್ಟು ಜನರಿಗೆ ತಲುಪಿಸುತ್ತಿದ್ದಾರೆ.
ಸ್ಯಾಂಡಲ್ ವುಡ್ ಸೆಲೆಬ್ರೆಟಿಗಳು ಕೂಡ ಈ ಸಿನಿಮಾವನ್ನು ಮೆಚ್ಚಿಕೊಂಡಿದ್ದಾರೆ. ನಿರ್ದೇಶಕರಾದ ಜಯತೀರ್ಥ, ಬಿ.ಎಂ.ಗಿರಿರಾಜ್, ಗುರುದೇಶ್ ಪಾಂಡೆ, ಸುಜಯ್ ಶಾಸ್ತ್ರಿ, ಶಂಕರ್ ಗುರು ಸಿನಿಮಾ ವೀಕ್ಷಿಸಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಕೆ.ಜಿ.ಎಫ್ ಖ್ಯಾತಿಯ ಅರ್ಚನಾ ಜೋಯಿಸ್, ಅರ್ಚನಾ ಕೊಟ್ಟಿಗೆ, ಶ್ರೀ ಮಹಾದೇವ್, ಚೈತ್ರಾ ಕೊಟ್ಟೂರ್, ಬ್ರೋ ಗೌಡ ಹೀಗೆ ಹಲವು ನಟ ನಟಿಯರು ಸಿನಿಮಾ ವೀಕ್ಷಿಸಿ ಸೋಶಿಯಲ್ ಮೀಡಿಯಾಗಳಲ್ಲಿ ಸಿನಿಮಾ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.
ಪ್ರೇಕ್ಷಕರಿಂದ ಮೆಚ್ಚುಗೆ, ಸ್ಯಾಂಡಲ್ ವುಡ್ ಸೆಲೆಬ್ರೆಟಿಗಳಿಂದ ಸಾಥ್ ಹಾಗೂ ಪ್ರಶಂಸೆ ಪಡೆದುಕೊಂಡಿರುವ ಈ ಸಿನಿಮಾ ಇದೀಗ ಮೂರನೇ ವಾರಕ್ಕೆ ಕಾಲಿಟ್ಟಿದೆ. ಸಿನಿತಂಡ ಕೂಡ ಸಿನಿಮಾಗೆ ಸಿಗುತ್ತಿರುವ ಪ್ರೀತಿಗೆ ಸಂತಸಗೊಂಡಿದೆ. ಈ ಸಿನಿಮಾ ಸಂಪೂರ್ಣ ಹೊಸಬರ ಪ್ರಯತ್ನದಿಂದ ಕೂಡಿದೆ. ಕಾಲೇಜು ಹುಡುಗನ್ನೊಬ್ಬನ ನವೀರಾದ ಪ್ರೇಮಕಥೆಯನ್ನು ಒಳಗೊಂಡ ಸಿನಿಮಾ ಇದಾಗಿದೆ. ಸಿನಿಮಾದಲ್ಲಿ ವಿಶ್ವ ನಾಯಕನಾಗಿ, ಶ್ವೇತಾ ಡಿಸೋಜ ನಾಯಕಿಯಾಗಿ ನಟಿಸಿದ್ದಾರೆ.
ಇದನ್ನೂ ಓದಿ : Vijay Devarakonda: ‘ಲೈಗರ್’ ಚಿತ್ರತಂಡಕ್ಕೆ ಸೋಲಿನ ನಡುವೆಯೇ ಇಡಿ ಶಾಕ್; ವಿಚಾರಣೆಗೆ ಹಾಜರಾದ ವಿಜಯ ದೇವರಕೊಂಡ
ಇದನ್ನೂ ಓದಿ : Rishab Shetty Photoshoot: ‘ಹ್ಯಾಷ್ ಟ್ಯಾಗ್’ ಮ್ಯಾಗಜಿನ್ ಮುಖಪುಟದಲ್ಲಿ ರಿಷಬ್ ಶೆಟ್ಟಿ; ಫೋಟೋಶೂಟ್ ನಲ್ಲಿ ಮಿಂಚಿದ್ದು ಹೀಗೆ..
ಇದನ್ನೂ ಓದಿ : Samantha treatment: ಮತ್ತಷ್ಟು ಬಿಗಡಾಯಿಸಿದೆಯಾ ನಟಿ ಸಮಂತಾ ಕಾಯಿಲೆ..? ಸೌತ್ ಕೊರಿಯಾದಲ್ಲಿ ಹೆಚ್ಚಿನ ಚಿಕಿತ್ಸೆ..
ಈ ಸಿನಿಮಾದಲ್ಲಿ ಚೇತನ್ ದುರ್ಗಾ, ನಂದಕುಮಾರ್, ಶ್ರೀಧರ್, ನಿರೀಕ್ಷಾ ಶೆಟ್ಟಿ, ದಿನೇಶ್ ಒಳಗೊಂಡ ತಾರಾಬಳಗ ಇದೆ. ಎಸ್ ವಿ ಎಂ ಮೋಶನ್ ಪಿಕ್ಚರ್ ಬ್ಯಾನರ್ ನಡಿ ಮಂಜು ವಿ ರಾಜ್, ವೀಣಾ ವಿ ರಾಜ್, ಮಂಜುನಾಥ್ ಡಿ ಎಸ್ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ವಾಸುಕಿ ವೈಭವ್ ಸಂಗೀತ ನಿರ್ದೇಶನ, ವಿಶ್ವಜಿತ್ ರಾವ್ ಛಾಯಾಗ್ರಹಣ,ರಾಕೇಶ್ ಆಚಾರ್ಯ ಹಿನ್ನೆಲೆ ಸಂಗೀತ, ಆಶಿಕ್ ಕುಸುಗೋಳಿ ಸಂಕಲನ ಸಿನಿಮಾಕ್ಕೆ ಇದೆ.
Sandalwood Celebs Appreciated “Khasagi Putagalu” that were crowd pleasers