ಭಾನುವಾರ, ಏಪ್ರಿಲ್ 27, 2025
HomeCinemaಪುನೀತ್‌ ಮನೆಗೆ ಬಿಗಿ ಭದ್ರತೆ, ಸೈಂಟ್‌ ಆನ್ಸ್‌ ಶಾಲೆಗೆ ರಜೆ ಘೋಷಣೆ : ಆಸ್ಪತ್ರೆಗೆ ಸಿಎಂ...

ಪುನೀತ್‌ ಮನೆಗೆ ಬಿಗಿ ಭದ್ರತೆ, ಸೈಂಟ್‌ ಆನ್ಸ್‌ ಶಾಲೆಗೆ ರಜೆ ಘೋಷಣೆ : ಆಸ್ಪತ್ರೆಗೆ ಸಿಎಂ ಬೊಮ್ಮಾಯಿ ಭೇಟಿ

- Advertisement -

ಬೆಂಗಳೂರು : ಪವರ್‌ ಸ್ಟಾರ್‌ ಪುನಿತ್‌ ರಾಜ್‌ ಕುಮಾರ್‌ ಆರೋಗ್ಯ ಕ್ಷೀಣಿಸಿದ ಹಿನ್ನೆಲೆಯಲ್ಲಿ ಅವರನ್ನು ವಿಕ್ರಂ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇದರ ಬೆನ್ನಲ್ಲೇ ಆಸ್ಪತ್ರೆಗೆ ಸಿಎಂ ಬಸವರಾಜ್‌ ಬೊಮ್ಮಾಯಿ ಅವರು ಭೇಟಿ ನೀಡಿದ್ದಾರೆ. ಪುನಿತ್‌ ನಿವಾಸಕ್ಕೆ ಬಿಗಿ ಭದ್ರತೆಯನ್ನು ಒದಗಿಸಲಾಗಿದ್ರೆ, ಸೈಂಟ್‌ ಆನ್ಸ್‌ ಶಾಲೆಗೆ ರಜೆಯನ್ನು ಘೋಷಣೆ ಮಾಡಲಾಗಿದೆ.

ಪುನಿತ್‌ ರಾಜ್‌ ಕುಮಾರ್‌ ಅವರ ಆರೋಗ್ಯದ ಸ್ಥಿತಿ ಚಿಂತಾ ಜನಕವಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಬಸವರಾಜ್‌ ಬೊಮ್ಮಾಯಿ ಅವರು ವಿಕ್ರಂ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಶಿವರಾಜ್‌ ಕುಮಾರ್‌ ಅವರ ಜೊತೆಯಲ್ಲಿ ಸಿಎಂ ಮಾತುಕತೆಯನ್ನು ನಡೆಸುತ್ತಿದ್ದಾರೆ. ಇನ್ನೊಂದೆಡೆಯಲ್ಲಿ ಆಸ್ಪತ್ರೆಗೆ ರಾಜಕಾರಣಿಗಳು, ಸಿನಿಮಾ ರಂಗದ ಗಣ್ಯಾತಿ ಗಣ್ಯರ ದಂಡೇ ಹರಿದು ಬರುತ್ತಿದೆ.

ಪುನಿತ್‌ ಅವರು ದಾಖಲಾಗಿರುವ ವಿಕ್ರಂ ಆಸ್ಪತ್ರೆಯ ಪಕ್ಕದಲ್ಲಿರುವ ಸೈಂಟ್‌ ಆನ್ಸ್‌ ಶಾಲೆಗೆ ರಜೆಯನ್ನು ಘೋಷಣೆ ಮಾಡಲಾಗಿದೆ. ಶಾಲಾ ಆಡಳಿತ ಮಂಡಳಿ ವಿದ್ಯಾರ್ಥಿಗಳಿಗೆ ರಜೆಯನ್ನು ನೀಡಿದ್ದು, ಮಕ್ಕಳನ್ನು ಮನೆಗೆ ಕಳುಹಿಸುವ ಕಾರ್ಯವನ್ನು ಮಾಡುತ್ತಿದೆ.

ಇನ್ನೊಂದೆಡೆಯಲ್ಲಿ ನಗರ ಪೊಲೀಸ್‌ ಆಯುಕ್ತರು ಬೆಂಗಳೂರಿನಾದ್ಯಂತ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸುವಂತೆ ಸೂಚನೆಯನ್ನು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಎಲ್ಲಾ ಪೊಲೀಸ್‌ ಠಾಣೆಗಳಿಗೆ ಸುತ್ತೋಲೆಯನ್ನು ಹೊರಡಿಸಲಾಗಿದೆ. ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತಮ್ಮ ಪ್ರವಾಸವನ್ನು ಮೊಟಕುಗೊಳಿಸಿ ಬೆಂಗಳೂರಿಗೆ ವಾಪಸಾಗುತ್ತಿದ್ದಾರೆ.

ವಿಕ್ರಂ ಆಸ್ಪತ್ರೆಗೆಯಲ್ಲಿ ಹಿರಿಯ ವೈದ್ಯರ ತಂಡ ಪುನಿತ್‌ ಅವರಿಗೆ ಚಿಕಿತ್ಸೆಯನ್ನು ನೀಡುತ್ತಿದೆ. ತೀವ್ರ ಹೃದಯಾಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ವೈದ್ಯರು ಕೂಡ ಸದ್ಯ ಪುನಿತ್‌ ಅವರ ಆರೋಗ್ಯದ ಕುರಿತು ಯಾವುದೇ ಸ್ಯಾಂಡಲ್‌ವುಡ್‌ ನಟ ಪುನಿತ್‌ ರಾಜ್‌ ಕುಮಾರ್‌ ಅವರು ಹೃದಘಾತವಾಗಿದೆ. ಪುನಿತ್‌ ಅವರನ್ನು ನಗರದ ವಿಕ್ರಂ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಪ್ಪು ಆರೋಗ್ಯ ಕ್ಷಣ ಕ್ಷಣಕ್ಕೂ ಕ್ಷೀಣಿಸುತ್ತಿದೆ. ಅವರ ಆರೋಗ್ಯದ ಬಗ್ಗೆ ಏನೂ ಹೇಳಲು ಸಾಧ್ಯವಿಲ್ಲ ಎಂದು ವಿಕ್ರಂ ಆಸ್ಪತ್ರೆಯ ವೈದ್ಯರಾದ ಡಾ.ರಂಗನಾಥ ನಾಯಕ್‌ ಅವರು ಹೇಳಿದ್ದಾರೆ.

ಇದನ್ನೂ ಓದಿ : ಕ್ಷಣಕ್ಷಣಕ್ಕೂ ಕ್ಷಣಿಸುತ್ತಿದೆ ಪುನಿತ್‌ ರಾಜ್‌ ಕುಮಾರ್ ಆರೋಗ್ಯ : ಏನೂ ಹೇಳಲು ಸಾಧ್ಯವಿಲ್ಲ ಎಂದ ವೈದ್ಯರು

ಇಂದು ಬೆಳಗ್ಗೆ ಜಿಮ್‌ ಮಾಡುತ್ತಿದ್ದ ವೇಳೆಯಲ್ಲಿ ಪುನಿತ್‌ ರಾಜ್‌ ಕುಮಾರ್‌ ಅವರಿಗೆ ಹೃದಯದ ಸಮಸ್ಯೆ ಕಂಡು ಬಂದಿತ್ತು. ಕೂಡಲೇ ಕ್ಲಿನಿಕ್‌ಗೆ ಭೇಟಿ ನೀಡಿದ್ದ ಪುನಿತ್‌ ಅವರಿಗೆ ಇಸಿಜಿ ಮಾಡಿಸಲಾಗಿತ್ತು. ನಂತರದಲ್ಲಿ ಬೆಳಗ್ಗೆ ೧೧.೩೦ಕ್ಕೆ ಅವರನ್ನು ಆಸ್ಪತ್ರೆಗೆ ಕರೆತರಲಾಗಿತ್ತು. ಕೂಡಲೇ ಅವರಿಗೆ ಚಿಕಿತ್ಸೆಯನ್ನು ಆರಂಭಿಸಿದ್ದೇವೆ. ಪುನಿತ್‌ ಅವರಿಗೆ ಸದ್ಯ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದೆ. ಆದರೆ ಅವರ ಆರೋಗ್ಯ ಬಗ್ಗೆ ಏನೂ ಹೇಳಲು ಸಾಧ್ಯವಿಲ್ಲ ಎಂದಿದ್ದಾರೆ.

ಪುನಿತ್‌ ರಾಜ್‌ ಕುಮಾರ್‌ ಅವರು ಆಸ್ಪತ್ರೆಗೆ ದಾಖಲಾಗಿರುವ ಸುದ್ದಿ ತಿಳಿಯುತ್ತಿದ್ದಂತೆಯೇ ಚಿತ್ರರಂಗದ ಖ್ಯಾತ ನಟರಾಗಿರುವ ವಿ.ರವಿಚಂದ್ರನ್‌, ದರ್ಶನ್‌, ನಟಿ ಶ್ರುತಿ ಸೇರಿದಂತೆ ಹಲವರು ಭೇಟಿ ನೀಡಿದ್ದಾರೆ. ಇನ್ನೊಂದೆಡೆಗೆ ನೆಚ್ಚಿನ ನಟ ಅಸ್ವಸ್ಥಗೊಂಡ ಬೆನ್ನಲ್ಲೇ ಪುನಿತ್‌ ಅಭಿಮಾನಿಗಳ ದಂಡೇ ಆಸ್ಪತ್ರೆಗೆ ಹರಿದು ಬಂದಿದ್ದು, ಕಣ್ಣೀರು ಸುರಿಸುತ್ತಿದ್ದಾರೆ. ಅಪ್ಪು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಅಂತಾ ದೇವರಲ್ಲಿ ಪ್ರಾರ್ಥಿಸುತ್ತಿದ್ದಾರೆ.

ಇದನ್ನೂ ಓದಿ : ಪುನಿತ್ ರಾಜ್ ಕುಮಾರ್ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಗೆ ದಾಖಲು

(CM Bommai visits Punit Rajkumar Admited Vikaram hospital with tight security, St. Ann’s School Declare holiday )

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular