‘ಭಜರಂಗಿ 2’ ಸಿನಿಮಾ ಬಿಡುಗಡೆಗೂ ಮುನ್ನವೇ ಸಾಕಷ್ಟು ಸದ್ದು ಮಾಡುತ್ತಿದೆ. ಶಿವರಾಜ್ ಕುಮಾರ್ ನಟನೆಯ ‘ಭಜರಂಗಿ 2’ ಸಿನಿಮಾದ ನಾಯಕಿಯ ಪೋಸ್ಟರ್ ಬಿಡುಗಡೆಗೊಂಡಿದೆ. ಭಾವನಾ ಮೆನನ್ ಸಖತ್ ಲುಕ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಮೈಕ್ರೊಬ್ಲಾಗಿಂಗ್ ಪ್ಲಾಟ್‌ಫಾರ್ಮ್ ಕೂ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟರ್ ಅನ್ನು ಚಿತ್ರತಂಡ ಹಂಚಿಕೊಂಡಿದೆ. ‘ಚಿನಿಮಿನಿಕಿ-ದಿ ಲೇಡಿ ಫೈರ್’ ಎಂಬ ಸಬ್ ಟೈಟಲ್ ಅನ್ನು ಭಾವನಾ ಮೆನನ್ ನ ಪೋಸ್ಟರ್‌ಗೆ ನೀಡಲಾಗಿದೆ.

ನಿರ್ದೇಶಕ ಎ. ಹರ್ಷ ಅವರ ಕೈಚಳಕದಿಂದ ಮೂಡಿ ಬಂದಿರುವ ಈ ಸಿನಿಮಾದ ಟೀಸರ್ ಶಿವರಾಜ್ ಕುಮಾರ್ ಹುಟ್ಟುಹಬ್ಬದಂದು ಬಿಡುಗಡೆಗೊಂಡಿತ್ತು. ಸಿನಿಮಾದ ಟೀಸರ್ ಈಗಾಗಲೇ ವೈರಲ್ ಆಗಿದ್ದು, ಇದೀಗ ಮೊದಲ ಬಾರಿಗೆ ನಾಯಕಿಯ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಕೆಲವು ದಿನಗಳ ಹಿಂದಷ್ಟೆ ಸಿನಿಮಾದ ಮತ್ತೊಬ್ಬ ಪ್ರಮುಖ ಪಾತ್ರಧಾರಿ ಸೌರವ್ ಲೋಕೇಶ್ ನಿರ್ವಹಿಸಿರುವ ಪಾತ್ರದ ಪೋಸ್ಟರ್ ಬಿಡುಗಡೆ ಮಾಡಲಾಗಿತ್ತು.
ಇದನ್ನೂ ಓದಿ: ಅನಿತಾ ಭಟ್ ಇಂದಿರಾಗೆ ಜೊತೆಯಾದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್

ದೊಡ್ಡ ಕ್ಯಾನ್ವಾಸ್‌ನಲ್ಲಿ ‘ಭಜರಂಗಿ 2’ ಸಿದ್ಧವಾಗಿದ್ದು, ಶಿವರಾಜ್‌ಕುಮಾರ್ ಮತ್ತು ಎ. ಹರ್ಷ ಕಾಂಬಿನೇಷನ್‌ನಲ್ಲಿ ಈ ಹಿಂದೆ ಮೂಡಿಬಂದಿದ್ದ ‘ಭಜರಂಗಿ’ ಚಿತ್ರದ ಸೀಕ್ವೆಲ್ ಆಗಿ ಈ ಸಿನಿಮಾ ಸಿದ್ಧವಾಗಿದೆ. ಸಿನಿಮಾದಲ್ಲಿ ಶಿವಣ್ಣ, ಭಾವನಾ ಜೊತೆಗೆ ಸೌರವ್ ಲೋಕೇಶ್, ಶಿವರಾಜ್ ಕೆ.ಆರ್.ಪೇಟೆ ಇನ್ನೂ ಹಲವರು ನಟಿಸಿದ್ದಾರೆ. ಈ ಸಿನಿಮಾದಲ್ಲಿ ಹಿರಿಯ ನಟಿ ಶ್ರುತಿ ಬಹಳ ಭಿನ್ನವಾದ ಪಾತ್ರದಲ್ಲಿ ಈ ಸಿನಿಮಾದಲ್ಲಿ ನಟಿಸಿದ್ದಾರೆ. ಭಜರಂಗಿ 2′ ಚಿತ್ರಕ್ಕೆ ಜಯಣ್ಣ-ಭೋಗೇಂದ್ರ ಬಂಡವಾಳ ಹೂಡಿದ್ದಾರೆ. ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ಸಿನಿಮಾವು ಅಕ್ಟೋಬರ್ 29ಕ್ಕೆ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿದೆ.
ಇದನ್ನೂ ಓದಿ: ತುಳುನಾಡ ದೈವ ಕೊರಗಜ್ಜನಿಗೆ ಹರಿಕೆ ಸಲ್ಲಿಸಿದ ನಟಿ ರಕ್ಷಿತಾ ಪ್ರೇಮ್ ದಂಪತಿ
(‘Bajrangi 2’ film team released by heroine poster)