G.K.GOVINDA RAO : ಕನ್ನಡದ ಹಿರಿಯ ನಟ, ರಂಗಕರ್ಮಿ ಜಿ.ಕೆ.ಗೋವಿಂದ ರಾವ್‌ ಇನ್ನಿಲ್ಲ

ಹುಬ್ಬಳ್ಳಿ: ರಂಗಕರ್ಮಿ ಕನ್ನಡದ ಹಿರಿಯ ನಟ ಪ್ರೊ.ಜಿ.ಕೆ ಗೋವಿಂದ ರಾವ್ ಅವರು ಇಂದು ವಿಧಿವಶರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು. ಇಂದು ಬೆಳಗ್ಗೆ ಹುಬ್ಬಳ್ಳಿಯಲ್ಲಿ ಇರುವ ತಮ್ಮ ಮಗಳ ಮನೆಯಲ್ಲಿ ನಿಧನರಾಗಿದ್ದಾರೆ. ಹಿರಿಯ ನಟನ ಅಗಲಿಕೆಗೆ ಕನ್ನಡ ಚಿತ್ರರಂಗ ಹಾಗೂ ರಂಗಭೂಮಿ ಕಂಬನಿ ಮಿಡಿದಿದೆ.

1937 ಏಪ್ರಿಲ್ 27ರಂದು ಬೆಂಗಳೂರಿನಲ್ಲಿ ಜನಿಸಿದ ಜಿ.ಕೆ.ಗೋವಿಂದ ರಾವ್‌ ಅವರು ವೃತ್ತಿಯಲ್ಲಿ ಇಂಗ್ಲಿಷ್‌ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು. ವೃತ್ತಿಯ ಜೊತೆಗೆ ರಂಗಭೂಮಿ ಕಲಾವಿದರಾಗಿಯೂ ಗುರುತಿಸಿಕೊಂಡಿದ್ದಾರೆ. ಅದ್ರಲ್ಲೂ ಧಾರವಾಹಿ ಹಾಗೂ ಸಿನಿಮಾ ರಂಗದಲ್ಲಿ ಪೋಷಕ ನಟರಾಗಿ ಬಹು ಖ್ಯಾತಿಯನ್ನು ಪಡೆದುಕೊಂಡಿದ್ದರು. ಮಾಲ್ಗುಡಿ ಡೇಸ್‌, ಮಹಾಪರ್ವ ಸೇರಿದಂತೆ ಹಲವಾರ ಧಾರವಾಹಿಗಳಲ್ಲಿ ಅವರು ನಟಿಸಿದ್ದಾರೆ.

ಜಿ.ಕೆ.ಗೋವಿಂದ ರಾವ್‌ ಅವರಿಗೆ ರಂಗಭೂಮಿ ಕಲಾವಿದರಾಗಿ ಪ್ರಖ್ಯಾತಿಯನ್ನು ಪಡೆದುಕೊಂಡಿದ್ದರು. ಈಶ್ವರ ಅಲ್ಲಾ (ಕಿರು ಕಾದಂಬರಿ), ಶೇಕ್ಸ್‍ಪಿಯರ್ ಎರಡು ನಾಟಕಗಳ ಅಧ್ಯಯನ, ಶೇಕ್ಸ್‍ಪಿಯರ್ ಸಂವಾದ (ವಿಮರ್ಶಾ ಲೇಖನಗಳು), ನಡೆ-ನುಡಿ, ನಾಗರಿಕತೆ ಮತ್ತು ಅರಾಜಕತೆ, ಬಿಂಬ ಪ್ರತಿಬಿಂಬ, ಕ್ರಿಯೆ ಪ್ರತಿಕ್ರಿಯೆ, ಮನು ವರ್ಸಸ್ ಅಂಬೇಡ್ಕರ್: ತಮ್ಮ ಆಯ್ಕೆ ಯಾವುದು? (ಸಂಕೀರ್ಣ ಬರಹಗಳ ಸಂಗ್ರಹಗಳು) ಸೇರಿದಂತೆ ಹಲವು ಕೃತಿಗಳನ್ನು ರಚಿಸಿದ ಖ್ಯಾತಿ ಇವರಿಗೆ ಸಲ್ಲುತ್ತದೆ.

ಹಿರಿಯ ನಟನ ನಿಧನ ರಂಗಭೂಮಿ, ಚಿತ್ರರಂಗ ಹಾಗೂ ಕಿರುತೆರೆ ಲೋಕಕ್ಕೆ ಅಪಾರ ನಷ್ಟವನ್ನುಂಟು ಮಾಡಿದೆ. ಗೋವಿಂದ ರಾವ್‌ ಅವರು ಇಬ್ಬರು ಪುತ್ರಿಯರನ್ನು ಅಗಲಿದ್ದು, ಅವರ ನಿಧನಕ್ಕೆ ಚಿತ್ರರಂಗದ ಗಣ್ಯರು, ರಂಗಭೂಮಿ ಕಲಾವಿದರು, ಅಭಿಮಾನಿಗಳು ಸೇರಿದಂತೆ ಹಲವರು ಶ್ರದ್ದಾಂಜಲಿಯನ್ನು ಅರ್ಪಿಸಿದ್ದಾರೆ.

ಇದನ್ನೂ ಓದಿ : ಅಕ್ಟೋಬರ್‌ 18ಕ್ಕೆ ತೆರೆಗೆ ಬರಲಿದೆ ‘ಕಡಲ ತೀರದ ಭಾರ್ಗವ’ ಟೀಸರ್

ಇದನ್ನೂ ಓದಿ : ಸುದೀಪ್‌ ಸರ್‌ಗೆ ಸತ್ಯ ಗೊತ್ತಿದೆ : ಕೋಟಿಗೊಬ್ಬ ಸಿನಿಮಾಕ್ಕೆ ವಿತರಕರು ಮೋಸ ಮಾಡಿದ್ರು : ಸೂರಪ್ಪ ಬಾಬು

( Sandalwood Senior Actor GK Govinda Rao No More )

Comments are closed.