ಚಂದನವನದ ಖ್ಯಾತ ನಿರ್ದೇಶಕ ಸಿಂಪಲ್ ಸುನಿ, ಗೋಲ್ಡನ್ ಸ್ಟಾರ್ ಗಣೇಶ್ ಕಾಂಬಿನೇಶನ್ ನಲ್ಲಿ ಬರ್ತಿರುವ ಎರಡನೇ ಸಿನಿಮಾ ಸಖತ್. ಟೈಟಲ್ ನಂತೆ ಸಿನಿಮಾ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟುಹಾಕಿದೆ. ಸದ್ಯ ಚಿತ್ರದ ಪ್ರಚಾರ ಕಾರ್ಯ ಆರಂಭಿಸಿರುವ ಚಿತ್ರತಂಡ ಪ್ರೇಮಕ್ಕೆ ಕಣ್ಣಿಲ್ಲಾ ಅನ್ನೋ ಹಾಡನ್ನು ಬಿಡುಗಡೆ ಮಾಡಿದ್ದು, ಚಿತ್ರಪ್ರೇಮಿಗಳಿಂದ ಉತ್ತಮ ರೆಸ್ಪಾನ್ಸ್ ವ್ಯಕ್ತವಾಗುತ್ತಿದೆ.

ಸದಾ ಭಿನ್ನ ಪಾತ್ರಗಳ ಮೂಲಕ ರಂಜಿಸುತ್ತಿದ್ದ ಗೋಲ್ಡನ್ ಸ್ಟಾರ್ ಈ ಚಿತ್ರದಲ್ಲಿ ಚಾಲೆಂಜಿಂಗ್ ರೋಲ್ ನಲ್ಲಿ ಅಭಿನಯಿಸುತ್ತಿದ್ದಾರೆ. ಅಂಧ ಗಾಯಕನ ಪಾತ್ರಕ್ಕೆ ಜೀವ ತುಂಬಿರುವ ಗೋಲ್ಡನ್ ಸ್ಟಾರ್ ರಿಯಾಲಿಟಿ ಶೋ ಸ್ವರ್ಧಿಯಾಗಿ ಕಾಣಸಿಗಲಿದ್ದಾರೆ. ನಿಶ್ವಿಕಾ ನಾಯ್ಡು ಹಾಗೂ ಹೊಸ ಪ್ರತಿಭೆ ಸುರಭಿ ಚಿತ್ರದಲ್ಲಿ ನಾಯಕಿಯರಾಗಿ ನಟಿಸಿದ್ದಾರೆ. ರೊಮ್ಯಾಂಟಿಕ್ ಕಾಮಿಡಿ ಕ್ರೈಂ ಥ್ರಿಲ್ಲರ್ ಸಬ್ಜೆಕ್ಟ್ ಒಳಗೊಂಡ ಚಿತ್ರ ಸಖತ್. ಟಿವಿ ರಿಯಾಲಿಟಿ ಶೋ ಹಾಗೂ ಕೋರ್ಟ್ ಕೇಸ್ ಸುತ್ತ ಸಿನಿಮಾ ಕಥೆ ಹೆಣೆಯಲಾಗಿದೆ.

ಚಿತ್ರಕ್ಕೆ ನಿಶಾ ವೆಂಕಟ್ ಕೋನನ್ಕಿ, ಭರಾಟೆ ಖ್ಯಾತಿಯ ಸುಪ್ರಿತ್ ಬಂಡವಾಳ ಹೂಡಿದ್ದು, ಜ್ಯೂಡಾ ಸ್ಯಾಂಡಿ ಸಂಗೀತ ನಿರ್ದೇಶನ, ಸಂತೋಷ್ ರೈ ಪಾತಾಜೆ ಛಾಯಾಗ್ರಹಣ ಚಿತ್ರಕ್ಕಿದೆ. ಚಿತ್ರೀಕರಣ ಕಂಪ್ಲೀಟ್ ಮಾಡಿ ಪೋಸ್ಟ್ ಪ್ರೊಡಕ್ಷನ್ ಕೆಲಸಲ್ಲಿ ಬ್ಯುಸಿಯಾಗಿರುವ ಚಿತ್ರತಂಡ ಪ್ರಚಾರ ಕಾರ್ಯವನ್ನು ಆರಂಭಿಸಿದೆ. ನವೆಂಬರ್ ಅಂತ್ಯದಲ್ಲಿ ಸಿನಿಮಾ ಬಿಡುಗಡೆಗೆ ತಯಾರಿ ನಡೆಸುತ್ತಿದೆ.
ಇದನ್ನೂ ಓದಿ : ತುಳುನಾಡ ದೈವ ಕೊರಗಜ್ಜನಿಗೆ ಹರಿಕೆ ಸಲ್ಲಿಸಿದ ನಟಿ ರಕ್ಷಿತಾ ಪ್ರೇಮ್ ದಂಪತಿ
ಇದನ್ನೂ ಓದಿ : ಅನಿತಾ ಭಟ್ ಇಂದಿರಾಗೆ ಜೊತೆಯಾದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್
( Sakat Kannada Movie Release Song )