Kotigobba 3 : ಸುದೀಪ್ ಅಭಿಮಾನಿಗಳಿಗೆ ಬಿಗ್‌ ಶಾಕ್‌ : ಕೋಟಿಗೊಬ್ಬ ರಿಲೀಸ್‌ ವಿಳಂಬ, ಕ್ಷಮೆ ಕೋರಿದ ಕಿಚ್ಚ

ರಾಜ್ಯದಾದ್ಯಂತ ಸ್ಯಾಂಡಲ್‌ವುಡ್‌ ಖ್ಯಾತ ನಟ, ಅಭಿನಯ ಚಕ್ರವರ್ತಿ ಸುದೀಪ್‌ ಅಭಿನಯದ ಕೋಟಿಗೊಬ್ಬ -3 ರಿಲೀಸ್‌ ಆಗಿದೆ. ಆದರೆ ಸಿನಿಮಾದ ಮೊದಲ ಶೋ ವಿಳಂಬವಾಗಿದೆ. ಈ ಹಿನ್ನೆಲೆಯಲ್ಲಿ ಕಿಚ್ಚ ತನ್ನ ಅಭಿಮಾನಿಗಳಲ್ಲಿ ಕ್ಷಮೆಯಾಚಿಸಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆದಂತೆ ಮನವಿ ಮಾಡಿಕೊಂಡಿದ್ದಾರೆ.

ಬಹುನಿರೀಕ್ಷಿತ ಕೋಟಿಗೊಬ್ಬ 3 ಸಿನಿಮಾ ರಾಜ್ಯದಾದ್ಯಂತ ಇಂದು ಬರೋಬ್ಬರಿ 300 ಚಿತ್ರಮಂದಿರಗಳಲ್ಲಿ ರಿಲೀಸ್‌ ಆಗಬೇಕಿತ್ತು. ಆದರೆ ತಾಂತ್ರಿಕ ದೋಷದಿಂದಾಗಿ ಶೋ ರದ್ದಾಗಿದೆ. ಈ ಹಿನ್ನೆಲೆಯಲ್ಲೀಗ ಕಿಚ್ಚ ಸುದೀಪ್‌ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದರ ಬೆನ್ನಲ್ಲೇ ಕಿಚ್ಚ ತನ್ನ ಸಾಮಾಜಿಕ ಜಾಲತಾಣದ ಮೂಲಕ ಮನವಿಯನ್ನು ಮಾಡಿಕೊಂಡಿದ್ದಾರೆ.

ಇದು ಅತ್ಯಂತ ವಿಚಿತ್ರ ಸನ್ನಿವೇಶವಾಗಿದೆ. ಜೊತೆಗೆ ನಿರ್ಲಕ್ಷ್ಯಕ್ಕಾಗಿ ನಾನು ಕ್ಷಮೆಯಾಚಿಸುತ್ತೇನೆ. ಅಭಿಮಾನಿಗಳು ಕೆಟ್ಟ ರೀತಿಯಲ್ಲಿ ವರ್ತಿಸಬಾರದು. ಸಿನಿಮಾ ಬಿಡುಗಡೆಯ ಸಮಯವನ್ನು ನಾನೇ ನೀಡುವೆ, ಕೆಲ ಸಮಸ್ಯೆಗಳಿಂದ ರಿಲೀಸ್ ವಿಳಂಬವಾಗಿದೆ ಎಂದು ಹೇಳಿದ್ದಾರೆ.

ಕೆಲವೊಂದು ವಿಚಾರಗಳಿಂದ ಸಿನಿಮಾದ ಮೊದಲ ಶೋ ವಿಳಂಬವಾಗಿದೆ. ಈ ಬಗ್ಗೆ ಮಾಹಿತಿ ನೀಡುವುದು ನನ್ನ ಕರ್ತವ್ಯವಾಗಿದೆ. ನಾನು ವೈಯಕ್ತಿವಾಗಿ ಎಲ್ಲರ ಬಳಿ ಕ್ಷಮೆಯಾಚಿಸು ತ್ತೇನೆ. ಇದರಲ್ಲಿ ಥಿಯೇಟರ್ ಮಾಲೀಕ ತಪ್ಪಿಲ್ಲ. ಹೀಗಾಗಿ ಅಲ್ಲಿ ಅಹಿತರ ಘಟನೆಗಳನ್ನು ನಡೆಸಬೇಡಿ. ಚಿತ್ರಮಂದಿರಗಳಿಗೆ ಹಾನಿ ಮಾಡಬೇಡಿ ಎಂದು ಮನವಿ ಮಾಡಿದ್ದಾರೆ.

( Sandalwood Movie Kotigobba 3 Release Delay, Kiccha Sudeep Apologize with His fans )

Comments are closed.