Punith Rajkumar : ಪುನೀತ್ ರಾಜ್ ಕುಮಾರ್ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಗೆ ದಾಖಲು

ಬೆಂಗಳೂರು : ಸ್ಯಾಂಡಲ್ ವುಡ್ ನಟ ಪುನೀತ್‌ ರಾಜಕುಮಾರ್‌ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹಿರಿಯ ವೈದ್ಯರ ತಂಡ ಚಿಕಿತ್ಸೆಯನ್ನು ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಇಂದು ಬೆಳಗ್ಗೆ ಪುನಿತ್ ರಾಜ್ ಕುಮಾರ್ ಅವರು ಜಿಮ್‌ನಲ್ಲಿ ವರ್ಕ್‌ಔಟ್‌ ಮಾಡುವ ವೇಳೆಯಲ್ಲಿ ಹೃದಯ ಸಂಬಂಧಿ ಸಮಸ್ಯೆ ಕಾಣಿಸಿಕೊಂಡಿದೆ‌. ಈ  ಹಿನ್ನಲೆಯಲ್ಲಿ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕುಟುಂಬ ಸದಸ್ಯರು ಆಸ್ಪತ್ತೆಗೆ ಭೇಟಿ ನೀಡಿದ್ದಾರೆ.

ಇದನ್ನೂ ಓದಿ: ಭಜರಂಗಿ 2 ಸಿನಿಮಾದ ಕಥೆ ರಿವಿಲ್‌ ಮಾಡಿದ ನಿರ್ದೇಶಕ ಹರ್ಷ

ಸದ್ಯದ ಮಾಹಿತಿಯ ಪ್ರಕಾರ, ವೈದ್ಯರು ಚಿಕಿತ್ಸೆಯನ್ನು ನೀಡುತ್ತಿದ್ದು, ಯಾವುದೇ ಗಂಭೀರ ಸಮಸ್ಯೆಯಿಲ್ಲ ಎಂದು ತಿಳಿದುಬಂದಿದೆ. ಅಪ್ಪು ಅನಾರೋಗ್ಯ ಕಾಣಿಸಿಕೊಂಡಿರುವುದು ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ. ಆಸ್ಪತ್ರೆಯ ವೈದ್ಯರು ಈ ಕುರಿತು ಮಾಹಿತಿಯನ್ನು ನೀಡುವ ಸಾಧ್ಯತೆಯಿದೆ.

ಇದನ್ನೂ ಓದಿ: Aryan Khan : ಶಾರೂಖ್‌ ಖಾನ್‌ ಪುತ್ರ ಆರ್ಯನ್‌ ಖಾನ್‌ಗೆ ಜಾಮೀನು

(Punit Rajkumar’s health deteriorated: Hospitalised)

Comments are closed.