ಸ್ಯಾಂಡಲ್‌ವುಡ್ ನಟ ಪುನಿತ್ ರಾಜ್ ಕುಮಾರ್ ಅವರು ಹೃದಘಾತವಾಗಿದೆ. ಪುನಿತ್ ಅವರನ್ನು ನಗರದ ವಿಕ್ರಂ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಪ್ಪು ಆರೋಗ್ಯ ಕ್ಷಣ ಕ್ಷಣಕ್ಕೂ ಕ್ಷೀಣಿಸುತ್ತಿದೆ. ಅವರ ಆರೋಗ್ಯದ ಬಗ್ಗೆ ಏನೂ ಹೇಳಲು ಸಾಧ್ಯವಿಲ್ಲ ಎಂದು ವಿಕ್ರಂ ಆಸ್ಪತ್ರೆಯ ವೈದ್ಯರಾದ ಡಾ.ರಂಗನಾಥ ನಾಯಕ್ ಅವರು ಹೇಳಿದ್ದಾರೆ.

ಇಂದು ಜಿಮ್ ಮಾಡುತ್ತಿದ್ದ ವೇಳೆಯಲ್ಲಿ ಪುನಿತ್ ರಾಜ್ ಕುಮಾರ್ ಅವರಿಗೆ ಹೃದಯದ ಸಮಸ್ಯೆ ಕಂಡು ಬಂದಿತ್ತು. ಕೂಡಲೇ ಕ್ಲಿನಿಕ್‌ಗೆ ಭೇಟಿ ನೀಡಿದ್ದ ಪುನಿತ್ ಅವರಿಗೆ ಇಸಿಜಿ ಮಾಡಿಸಲಾಗಿತ್ತು. ನಂತರದಲ್ಲಿ ಬೆಳಗ್ಗೆ ೧೧.೩೦ಕ್ಕೆ ಅವರನ್ನು ಆಸ್ಪತ್ರೆಗೆ ಕರೆತರಲಾಗಿತ್ತು. ಕೂಡಲೇ ಅವರಿಗೆ ಚಿಕಿತ್ಸೆಯನ್ನು ಆರಂಭಿಸಿದ್ದೇವೆ. ಪುನಿತ್ ಅವರಿಗೆ ಸದ್ಯ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದೆ. ಆದರೆ ಅವರ ಆರೋಗ್ಯ ಬಗ್ಗೆ ಏನೂ ಹೇಳಲು ಸಾಧ್ಯವಿಲ್ಲ ಎಂದಿದ್ದಾರೆ.

ಪುನಿತ್ ರಾಜ್ ಕುಮಾರ್ ಅವರು ಆಸ್ಪತ್ರೆಗೆ ದಾಖಲಾಗಿರುವ ಸುದ್ದಿ ತಿಳಿಯುತ್ತಿದ್ದಂತೆಯೇ ಚಿತ್ರರಂಗದ ಖ್ಯಾತ ನಟರಾಗಿರುವ ವಿ.ರವಿಚಂದ್ರನ್, ದರ್ಶನ್, ನಟಿ ಶ್ರುತಿ ಸೇರಿದಂತೆ ಹಲವರು ಭೇಟಿ ನೀಡಿದ್ದಾರೆ. ಇನ್ನೊಂದೆಡೆಗೆ ನೆಚ್ಚಿನ ನಟ ಅಸ್ವಸ್ಥಗೊಂಡ ಬೆನ್ನಲ್ಲೇ ಪುನಿತ್ ಅಭಿಮಾನಿಗಳ ದಂಡೇ ಆಸ್ಪತ್ರೆಗೆ ಹರಿದು ಬಂದಿದ್ದು, ಕಣ್ಣೀರು ಸುರಿಸುತ್ತಿದ್ದಾರೆ. ಅಪ್ಪು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಅಂತಾ ದೇವರಲ್ಲಿ ಪ್ರಾರ್ಥಿಸುತ್ತಿದ್ದಾರೆ.
ಇದನ್ನೂ ಓದಿ : ಏನ್ ಮಾಡೋದು ಸ್ವಾಮಿ’ ಅಂತಿದ್ದಾರೆ ಪುನಿತ್ ರಾಜ್ ಕುಮಾರ್
ಇದನ್ನೂ ಓದಿ : ಪುನಿತ್ ರಾಜ್ ಕುಮಾರ್ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಗೆ ದಾಖಲು
Punit Health: Doctors say nothing can be done