ನಟ ರಮೇಶ್ ಅರವಿಂದ್‌ಗೆ ಹುಟ್ಟುಹಬ್ಬ : ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರ

ಸ್ಯಾಂಡಲ್ ವುಡ್ ನ ಹಿರಿಯ ನಟ ರಮೇಶ್ ಅರವಿಂದ್ ಅವರಿಗೆ ಇಂದು 57ನೇ ಹುಟ್ಟುಹಬ್ಬದ ಸಂಭ್ರಮ. ಎಲ್ಲ ರೀತಿಯ ಪಾತ್ರಗಳಿಗೂ ಜೀವ ತುಂಬುವ ಒಬ್ಬ ಪ್ರತಿಭಾವಂತ ನಟರಾಗಿದ್ದಾರೆ. 1986ರಲ್ಲಿ ತೆರೆಕಂಡ ‘ಸುಂದರ ಸ್ವಪ್ನಗಳು’ ಎಂಬ ಚಿತ್ರದ ಮೂಲಕ ತಮ್ಮ ಸಿನಿಪಯಣ ಆರಂಭಿಸಿದರು. ಸುಮಾರು 140ಕ್ಕೂ ಅಧಿಕ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.

ಇಂದು ರಮೇಶ್ ಅರವಿಂದ್ ಅವರ ಹುಟ್ಟುಹಬ್ಬದ ಪ್ರಯುಕ್ತ ಅವರ ನಟನೆಯ ‘ಶಿವಾಜಿ ಸುರತ್ಕಲ್ 2’ ಚಿತ್ರದ ಪೋಸ್ಟರ್ ಒಂದನ್ನು ಬಿಡುಗಡೆ ಮಾಡಲಾಗಿದೆ. ಕನ್ನಡ ಮಾತ್ರವಲ್ಲದೆ ತಮಿಳು ಹಾಗೂ ತೆಲುಗಿನಲ್ಲಿ ಈ ಸಿನಿಮಾ ಬಿಡುಗಡೆ ಮಾಡುವ ಸಾಧ್ಯತೆಯಿದೆ. ಆಕಾಶ್ ಶ್ರೀವತ್ಸ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.

ಇದನ್ನೂ ಓದಿ: D BOSS ಅಭಿಮಾನಿಗಳಿಗೆ ಗುಡ್‌ನ್ಯೂಸ್‌ : “ಕ್ರಾಂತಿ” ಮೊಳಗಿಸೋಕೆ ರೆಡಿಯಾದ್ರು ನಟ ದರ್ಶನ್‌

ಸಾಮಾಜಿಕ ಜಾಲತಾಣದಲ್ಲಿ ರಮೇಶ್ ಅರವಿಂದ್ ಅವರಿಗೆ ಅವರ ಅಭಿಮಾನಿಗಳಿಂದ ಹಾಗೂ ಸಿನಿಮಾ ಕಲಾವಿದರಿಂದ ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ.

ಇದನ್ನೂ ಓದಿ: ರಜನಿಕಾಂತ್ ಅಭಿಮಾನಿಗಳಿಗೆ ಧಮಾಕಾ: ಗೌರಿ-ಗಣೇಶ್ ಹಬ್ಬಕ್ಕೆ ಬರಲಿದೆ ಅಣ್ಣಾತ್ತೆ ಫರ್ಸ್ಟ್ ಲುಕ್

(Birthday of actor Ramesh Arvind: greetings from fans)

Comments are closed.