ಬೆಂಗಳೂರು : ಬಹು ಅಂಗಾಗ ವೈಫಲ್ಯದಿಂದ ಸ್ಯಾಂಡಲ್ ವುಡ್ ನ ಖ್ಯಾತ ಹಿರಿಯ ನಿರ್ಮಾಪಕ ಕೆಸಿಎನ್ ಚಂದ್ರಶೇಖರ್ ನಿಧನರಾಗಿದ್ದಾರೆ.
ಕಳೆದ ಹಲವು ದಿನಗಳಿಂದಲೂ ಅನಾರೋಗ್ಯಕ್ಕೆ ತುತ್ತಾಗಿದ್ದ ನಿರ್ಮಾಪಕ ಚಂದ್ರಶೇಖರ್ ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ಕನ್ನಡ ಚಿತ್ರರಂಗದ ಖ್ಯಾತ ಸಿನಿಮಾ ಬಬ್ರುವಾಹನ ಸೇರಿದಂತೆ ಹಲವು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದಾರೆ.
ಶಂಕರಗುರು, ಹುಲಿಯ ಹಾಲಿನ ಮೇವು, ಅಂತ, ಭಕ್ತ ಗಂದರ್ವ, ಧರ್ಮಯುದ್ದ, ತಾಯಿ, ಮಸಾಲ ಸಿನಿಮಾಗಳನ್ನು ನಿರ್ಮಾಣ ಮಾಡಿದ್ದು, ಇಂದು ಶಿವಾನಂದ ಸರ್ಕಲ್ ಬಳಿಯಲ್ಲಿರುವ ನಿಮಾಸದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.