ಸ್ಯಾಂಡಲ್ ವುಡ್ ಹಿರಿಯ ನಟಿ ಸುರೇಖಾ ಹೃದಯಾಘಾತದಿಂದ ವಿಧಿವಶ

ಬೆಂಗಳೂರು : ವರನಟ ಡಾ.ರಾಜ್ ಕುಮಾರ್ ಅವರ ಸಿನಿಮಾಗಳಲ್ಲಿ ನಟಿಸಿದ್ದ ಸ್ಯಾಂಡಲ್ ವುಡ್ ಖ್ಯಾತ ನಟಿ ಸುರೇಖಾ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಅವರಿಗೆ 66 ವರ್ಷ ವಯಸ್ಸಾಗಿತ್ತು. ಸುರೇಖಾ ಅವರ ಅಂತ್ಯಕ್ರೀಯೆ ಇಂದು ಬನಶಂಕರಿಯ ಚಿತಾಗಾರದಲ್ಲಿ ನಡೆಯಲಿದೆ.

ಲಾಕ್ ಡೌನ್ ಹಿನ್ನೆಲೆಯಲ್ಲಿ ಮನೆಯಲ್ಲಿದ್ದ ನಟಿ ಸುರೇಖಾ ಅವರಿಗೆ ಹೃದಯಾಘಾತವಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದ್ರೂ ಚಿಕಿತ್ಸೆ ಫಲಕಾರಿಯಾಗದೆ ಬಾರದ ಲೋಕಕ್ಕೆ ಪಯಣಿಸಿದ್ದಾರೆ. ಭರತನಾಟ್ಯ ಹಾಗೂ ಕೂಚುಪುಡಿ ನೃತ್ಯ ಕಲಾವಿದರಾಗಿ ದೇಶದಾದ್ಯಂತ ಹಲವು ಕಾರ್ಯಗಳನ್ನು ನೀಡಿದ ಖ್ಯಾತಿಗೂ ಪಾತ್ರರಾಗಿದ್ದಾರೆ.

ಒಂದು ಕಾಲದಲ್ಲಿ ಸ್ಯಾಂಡಲ್ ವುಡ್ ನ ಬಹು ಬೇಡಿಕೆಯ ನಟಿಯಾಗಿದ್ದ ಸುರೇಖಾ ಅವರು, ಡಾ.ರಾಜ್ ಕುಮಾರ್ ಅವರ ಹಲವು ಸಿನಿಮಾಗಳಲ್ಲಿಯೂ ಬಣ್ಣ ಹಚ್ಚಿದ್ದಾರೆ. ತ್ರಿಮೂರ್ತಿ, ಗಿರಿಕನ್ಯೆ, ಸಾಕ್ಷಾತ್ಕಾರ, ಕಸ್ತೂರಿ ನಿವಾಸ, ಆಪರೇಷನ್ ಜಾಕ್ ಪಾಟ್ ನಲ್ಲಿ ಸಿಐಡಿ 999, ಹುಲಿಯ ಹಾಲಿನ ಮೇವು. ಶಿವಕನ್ಯೆ, ನಾಗರಹೊಳೆ, ತಾಯಿದೇವರು, ಭಕ್ತ ಸಿರಿಯಾಳ, ಕೆಸರಿನ ಕಮಲ ಸೇರಿದಂತೆ ಸುಮಾರು 150ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ನೂರಾರು ಸಿನಿಮಾಗಳಲ್ಲಿ ನಟಿಸಿದ ಸುರೇಖಾ ಇದೀಗ ಬಾರದ ಲೋಕಕ್ಕೆ ಪಯಣಿಸಿದ್ದಾರೆ.

Comments are closed.