ನಾನು ಸೇಫ್ ಚೆನ್ನಾಗಿದ್ದೇನೆ. ಸೇಫಾಗಿದ್ದೇನೆ. ನಿಮ್ಮೆಲ್ಲರ ಪ್ರೀತಿಗೆ ಧನ್ಯವಾದಗಳು. ಹೀಗಂತ ಸ್ಯಾಂಡಲ್ ವುಡ್ ನಟಿ ಜಯಶ್ರೀ ರಾಮಯ್ಯ ಪೋಸ್ಟ್ ಮಾಡಿದ್ದಾರೆ. ಈ ಮೂಲಕ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ.

ಬೆಳಗ್ಗೆ 10 ಗಂಟೆಯ ಸುಮಾರಿಗೆ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಈ ಜಗತ್ತು ಬೇಡಾ, ಡಿಫ್ರೆಶನ್ ಕೂಡ ಬೇಡಾ ಅಂತಾ ಪೋಸ್ಟ್ ಮಾಡಿದ್ದರು. ಪೋಸ್ಟ್ ಮಾಡಿದ ಕೂಡಲೇ ಮೊಬೈಲ್ ಸ್ವಿಚ್ ಆಫ್ ಮಾಡಿದ್ದಾರೆ. ಬಿಗ್ ಬಾಸ್ ನಟಿಯ ಈ ಪೋಸ್ಟ್ ಸ್ಯಾಂಡಲ್ ವುಡ್ ನಲ್ಲಿ ಅಲ್ಲೋಲ ಕಲ್ಲೋಲ ಶುರುವಾಗಿತ್ತು. ನಟಿ ಜಯಶ್ರೀ ರಾಮಯ್ಯ ಹುಡುಕಾಟ ನಡೆಸುವ ಕಾರ್ಯವನ್ನು ಮಾಡಿದ್ದಾರೆ.

ಈ ನಡುವಲ್ಲೇ ನಟಿ ಜಯಶ್ರೀ ಮನೆಯಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದೇನೆ ಅಂತ ಸುದ್ದಿ ಹರಿದಾಡಿತ್ತು. ಇದರ ಬೆನ್ನಲ್ಲೇ ಜಯಶ್ರೀ ಆರಾಮಾಗಿದ್ದಾರೆ ಅಂತಾ ಹಲವು ನಟಿಯರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆ.

ಇದರ ನಡುವಲ್ಲೇ ಜಯಶ್ರೀ ಮೊದಲು ಮಾಡಿದ್ದ ಪೋಸ್ಟ್ ಡಿಲೀಟ್ ಮಾಡಿ, ತಾನು ಆರಾಮಾಗಿದ್ದೇನೆ. ಸೇಫ್ ಆಗಿದ್ದೇನೆ. ನಿಮ್ಮೆಲ್ಲರ ಪ್ರೀತಿಗೆ ಧನ್ಯವಾದಗಳು ಅಂತಾ ಪೋಸ್ಟ್ ಮಾಡುವ ಮೂಲಕ ಎಲ್ಲಾ ಗೊಂದಲಗಳಿಗೂ ತೆರೆ ಎಳೆದಿದ್ದಾರೆ.

ಆದರೆ ನಟಿ ಜಯಶ್ರೀ ರಾಮಯ್ಯ ಚೆನ್ನಾಗಿಯೇ ಇದ್ದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿ ಜನರನ್ನು ಯಾಮಾರಿಸಿದ್ರಾ ಅನ್ನುವ ಬಗ್ಗೆ ಚರ್ಚೆಯೂ ಶುರುವಾಗಿದೆ.

ಸ್ಯಾಂಡಲ್ ವುಡ್ ನಟಿ ಜಯಶ್ರೀ ರಾಮಯ್ಯ
