ಐಶ್ವರ್ಯಾ ರೈ, ಪುತ್ರಿ ಆರಾಧ್ಯ ಬಚ್ಚನ್‌ಗೆ ಆಸ್ಪತ್ರೆಗೆ ದಾಖಲು

0

ಮುಂಬೈ : ನಟಿ ಐಶ್ವರ್ಯಾ ರೈ ಬಚ್ಚನ್ ಮತ್ತು ಅವರ ಪುತ್ರಿ ಆರಾಧ್ಯ ಬಚ್ಚನ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಇಬ್ಬರನ್ನು ಕೊರೊನಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಕಳೆದಾರು ದಿನಗಳ ಹಿಂದೆ ನಟ ಅಮಿತಾಬ್ ಬಚ್ಚನ್ ಮತ್ತು ಪುತ್ರ ಅಭಿಷೇಕ್ ಬಚ್ಚನ್‍ಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಇಬ್ಬರನ್ನೂ ಮುಂಬೈನ ನಾನಾವತಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ನಂತರದಲ್ಲಿ ನಟಿ ಐಶ್ವರ್ಯಾ ರೈ ಹಾಗೂ ಪುತ್ರಿ ಆರಾಧ್ಯ ಬಚ್ಚನ್ ಅವರಿಗೂ ಅಲ್ಪ ಮಟ್ಟದ ಸೋಂಕಿನ ಗುಣಲಕ್ಷಣಗಳು ಕಾಣಿಸಿಕೊಂಡಿದ್ದವು. ಆದರೆ ಜಯಾ ಬಚ್ಚನ್ ಅವರಿಗೆ ಕೊರೊನಾ ವರದಿ ನೆಗೆಟಿವ್ ಬಂದಿತ್ತು. ಐಶ್ವರ್ಯ ರೈ ಹಾಗೂ ಆರಾಧ್ಯ ಇಬ್ಬರನ್ನೂ ಮನೆಯಲ್ಲಿಯೇ ಕ್ವಾರಂಟೈನ್ ಗೆ ಒಳಪಡಿಸಿ ಚಿಕಿತ್ಸೆಯನ್ನು ನೀಡಲಾಗುತ್ತಿತ್ತು.

ಆದ್ರೀಗ ಐಶ್ಚರ್ಯಾ ಮತ್ತು ಆರಾಧ್ಯ ಕೊರೊನಾ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಇಬ್ಬರನ್ನೂ ಕೂಡ ನಾನಾವತಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Leave A Reply

Your email address will not be published.