ಬೆಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ಅವರನ್ನು ಸಿಸಿಬಿ ವಶಕ್ಕೆ ಪಡೆದುಕೊಂಡಿದೆ.

ಬೆಳ್ಳಂಬೆಳಗ್ಗೆಯೇ ಯಲಹಂಕ ನ್ಯೂ ಟೌನ್ ನಲ್ಲಿರುವ ರಾಗಿಣಿ ಅವರ ನಿವಾಸದ ಮೇಲೆ ದಾಳಿ ನಡೆಸಿದ ಸಿಸಿಬಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದರು. ನಿವಾಸದಲ್ಲಿ ಪರಿಶೀಲನೆಯ ಬಳಿಕ ಸಿಸಿಬಿ ಅಧಿಕಾರಿಗಳು ರಾಗಿಣಿ ಅವರನ್ನು ಬಂಧಿಸಿದ್ದಾರೆ.
ಸ್ಯಾಂಡಲ್ ವುಡ್ ಗೆ ಡ್ರಗ್ಸ್ ನಶೆಯ ನಂಟಿದೆ ಎಂಬ ಆರೋಪದ ನಟಿ ರಾಗಿಣಿ ದ್ವಿವೇದಿಯನ್ನು ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ನಿನ್ನೆಯೇ ನೋಟಿಸ್ ನೀಡಿತ್ತು. ಆದರೆ ನಟಿ ರಾಗಿಣಿ ವಿಚಾರಣೆಗೆ ಹಾಜರಾಗಿರಲಿಲ್ಲ .ಹೀಗಾಗಿ ವಿಚಾರಣೆಗೆ ಹಾಜರಾಗುವಂತೆ ನಟಿ ರಾಗಿಣಿಗೆ ಸಮನ್ಸ್ ನೀಡಿದ್ದ ಅಧಿಕಾರಿಗಳು ಬೆಳ್ಳಂಬೆಳ್ಗೆಯೇ ನಿವಾಸದ ಮೇಲೆ ದಾಳಿ ನಡೆಸಿ ಸಿಸಿಬಿ ಅಧಿಕಾರಿಗಳು ನಟಿಗೆ ಶಾಕ್ ಕೊಟ್ಟಿದ್ದರು. ರಾಗಿಣಿಯನ್ನು ವಶಕ್ಕೆ ಪಡೆದಿರುವ ಸಿಸಿಬಿ ಅಧಿಕಾರಿಗಳು ವಿಚಾರಣೆಯನ್ನು ತೀವ್ರಗೊಳಿಸಿದ್ದಾರೆ.