ಸೋಮವಾರ, ಏಪ್ರಿಲ್ 28, 2025
HomeCinemaSanjay Dutt Birthday : ಪುರಿ ಜಗನ್ನಾಥ್ ಹಾಗೂ ರಾಮ್ ಪೋತಿನೇನಿ ಸಿನಿಮಾದಲ್ಲಿ ಸಂಜಯ್ ದತ್

Sanjay Dutt Birthday : ಪುರಿ ಜಗನ್ನಾಥ್ ಹಾಗೂ ರಾಮ್ ಪೋತಿನೇನಿ ಸಿನಿಮಾದಲ್ಲಿ ಸಂಜಯ್ ದತ್

- Advertisement -

ಬಾಲಿವುಡ್‌ ನಟ ಸಂಜಯ್‌ ದತ್‌ ಭಾರತೀಯ ಸಿನಿರಂಗದಲ್ಲಿ ಬಹುಮುಖ ಅಭಿನಯಕ್ಕಾಗಿ ಹೆಸರುವಾಸಿಯಾಗಿದ್ದಾರೆ. ನಟ ಸಂಜಯ್‌ ದತ್‌ ಗೆ (Sanjay Dutt Birthday) ಇಂದು (ಜುಲೈ 29) 64ನೇ ವರ್ಷದ ಹುಟ್ಟುಹಬ್ಬ ಸಂಭ್ರಮ. ನಿರ್ದೇಶಕ ಪುರಿ ಜಗನ್ನಾಥ್ ಹಾಗೂ ಉಸ್ತಾದ್ ರಾಮ್ ಪೋತಿನೇನಿ ಕಾಂಬಿನೇಷನ್‌ನಲ್ಲಿ ಕ್ರೇಜಿ ಪ್ಯಾನ್ ಇಂಡಿಯಾ ಪ್ರಾಜೆಕ್ಟ್ ಡಬಲ್ ಇಸ್ಮಾರ್ಟ್ ಮೂಡಿ ಬರುತ್ತಿದೆ.

ಕಳೆದ ತಿಂಗಳಷ್ಟೇ ಅದ್ಧೂರಿಯಾಗಿ ಹೈದ್ರಾಬಾದ್ ನಲ್ಲಿ ಸೆಟ್ಟೇರಿದ್ದ ಈ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ. ಈ ಸಿನಿಮಾಕ್ಕಾಗಿ ರಾಮ್ ಕಂಪ್ಲೀಟ್ ಲುಕ್ ಬದಲಿಸಿದ್ದು, ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ. ಪುರಿ ಕನೆಕ್ಟ್ಸ್ ಬ್ಯಾನರ್ ನಡಿ ಪುರಿ ಜಗನ್ನಾಥ್ ಹಾಗೂ ಚಾರ್ಮಿ ಕೌರ್ ಅದ್ಧೂರಿಯಾಗಿ ನಿರ್ಮಿಸುತ್ತಿರುವ ‘ಡಬಲ್ ಇಸ್ಮಾರ್ಟ್’ ಸಿನಿಮಾ ಅಂಗಳಕ್ಕೆ ಬಾಲಿವುಡ್ ಸೂಪರ್ ಸ್ಟಾರ್ ಎಂಟ್ರಿ ಕೊಟ್ಟಿದೆ.

ಬಿಗ್ ಬುಲ್ ಪಾತ್ರದಲ್ಲಿ ಸಂಜಯ್ ದತ್
ಬಾಲಿವುಡ್ ಸೂಪರ್ ಸ್ಟಾರ್ ಸಂಜಯ್ ದತ್ ಇತ್ತೀಚೆಗೆ ಸೌತ್ ಸಿನಿಮಾಗಳದತ್ತ ಚಿತ್ತ ಹರಿಸುತ್ತಿದ್ದಾರೆ. ಕೆಜಿಎಫ್ ಬಳಿಕ ಬ್ಯಾಕ್ ಟು ಬ್ಯಾಕ್ ದಕ್ಷಿಣ ಸಿನಿಮಾಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಸಂಜು ಬಾಬಾ ಈಗ ‘ಡಬಲ್ ಇಸ್ಮಾರ್ಟ್’ ಅಭಿನಯಿಸಲಿದ್ದಾರೆ. ಸಂಜಯ್ ದತ್ ಹುಟ್ಟುಹಬ್ಬದ ಸ್ಪೆಷಲ್ ಆಗಿ ಸಿನಿತಂಡ ಸ್ಪೆಷಲ್ ಪೋಸ್ಟರ್ ಬಿಡುಗಡೆ ಮಾಡಿದೆ ಶುಭ ಕೋರಿದೆ. ಗಡ್ಡ ಬಿಟ್ಟು ಬಿಟ್ಟು ಸ್ಟೈಲೀಶ್ ಲುಕ್ ನಲ್ಲಿ ಸಿಗಾರ್ ಸೇದುತ್ತಾ ರಗಡ್ ಆಗಿ ಮುನ್ನಭಾಯಿ ಕಾಣಿಸಿಕೊಂಡಿದ್ದು, ಈ ಪಾತ್ರಕ್ಕೆ ಬಿಗ್ ಬುಲ್ ಎಂದು ಹೆಸರಿಡಲಾಗಿದೆ. ಸಂಜಯ್ ದತ್ ಹಿಂದೆಂದೂ ಕಾಣದ ರೀತಿಯಲ್ಲಿ ತೋರಿಸಲು ನಿರ್ದೇಶಕ ಪುರಿ ಜಗನ್ನಾಥ್ ಪ್ಲಾನ್ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ : Vikrant Rona Movie : ಕಿಚ್ಚ ಸುದೀಪ್‌ ಅಭಿನಯದ ವಿಕ್ರಾಂತ್‌ ರೋಣ ಸಿನಿಮಾಕ್ಕೆ ಮೊದಲ ವರ್ಷ ಸಂಭ್ರಮ

ಇದನ್ನೂ ಓದಿ : Hostel hudugaru bekagiddare : ವಿದೇಶಗಳಿಗೂ ಹಬ್ಬಿದ ಹಾಸ್ಟೆಲ್ ಹುಡುಗರ ಹವಾಳಿ : ಈ ವೀಕೆಂಡ್ ನಿಂದ ವಿದೇಶದಲ್ಲಿ ಸಿನಿಮಾ ಪ್ರದರ್ಶನ

ಪುರಿ ಜಗನ್ನಾಥ್ ಕಥೆ ಬರೆದು ನಿರ್ದೇಶಿಸುತ್ತಿರುವ ಡಬಲ್ ಇಸ್ಮಾರ್ಟ್ ಸಿನಿಮಾಗೆ ಹಾಲಿವುಡ್ ಗಿಯಾನಿ ಜಿಯಾನೆಲ್ಲಿ ಕ್ಯಾಮೆರಾ ಹಿಡಿಯಲಿದ್ದಾರೆ. ಲೈಗರ್ ಸಿನಿಮಾದಲ್ಲಿ ಖಳನಾಯಕ ಘರ್ಜಿಸಿದ್ದ ವಿಷು ರೆಡ್ಡಿ ಪುರಿ ಕನೆಕ್ಟ್ ಸಿಇಒ ಆಗಿ ಕೆಲಸ ಮಾಡುತ್ತಿದ್ದಾರೆ. ಭಾರೀ ಬಜೆಟ್ ನಲ್ಲಿ ತಯಾರಾಗುತ್ತಿರುವ ಈ ಸಿನಿಮಾ ತಾಂತ್ರಿಕವಾಗಿ ಶ್ರೀಮಂತಿಕೆಯಿಂದ ಕೂಡಿರಲಿದೆ. ಮುಂದಿನ ವರ್ಷದ ಶಿವರಾತ್ರಿ ಹಬ್ಬಕ್ಕೆ ಬಿಡುಗಡೆಯಾಗಲಿರುವ ಈ ಸಿನಿಮಾ ತೆಲುಗು, ತಮಿಳು, ಕನ್ನಡ, ಹಿಂದಿ ಹಾಗೂ‌ ಮಲಯಾಳಂ ಭಾಷೆಯಲ್ಲಿ ಮೂಡಿ ಬರಲಿದೆ. ಉಳಿದ ತಾರಾಬಳಗ ಹಾಗೂ ತಾಂತ್ರಿಕ ವರ್ಗದ ಮಾಹಿತಿಯನ್ನು ಶೀಘ್ರದಲ್ಲೇ ಘೋಷಣೆ ಮಾಡುವುದಾಗಿ ಸಿನಿತಂಡ ತಿಳಿಸಿದೆ.

Sanjay Dutt Birthday : Sanjay Dutt in the movie Puri Jagannath and Ram Pothineni

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular