ಸೋಮವಾರ, ಏಪ್ರಿಲ್ 28, 2025
HomeCinemaSapta Sagaradaache Yello : ಸಿಂಪಲ್‌ ಸ್ಟಾರ್‌ ರಕ್ಷಿತ್‌ ಅಭಿನಯದ ಸಪ್ತ ಸಾಗರದಾಚೆ ಎಲ್ಲೋ ಸಿನಿಮಾದ...

Sapta Sagaradaache Yello : ಸಿಂಪಲ್‌ ಸ್ಟಾರ್‌ ರಕ್ಷಿತ್‌ ಅಭಿನಯದ ಸಪ್ತ ಸಾಗರದಾಚೆ ಎಲ್ಲೋ ಸಿನಿಮಾದ ಮೊದಲ ಸಾಂಗ್ ರಿಲೀಸ್‌

- Advertisement -

ಸಿಂಪಲ್‌ ಸ್ಟಾರ್‌ ರಕ್ಷಿತ್‌ ಅಭಿನಯದ ಸಪ್ತ ಸಾಗರದಾಚೆ ಎಲ್ಲೋ ಸಿನಿಮಾ (Sapta Sagaradaache Yello) ರಿಲೀಸ್‌ಗೆ ಸಿದ್ದವಾಗಿದೆ. ಇದೀಗ ಈ ಸಿನಿಮಾದ ಮೊದಲ ಹಾಡು ರಿಲೀಸ್‌ ಆಗಿರುವ ಬಗ್ಗೆ ನಟ ರಕ್ಷಿತ್‌ ಶೆಟ್ಟಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದು ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ.

ನಟ ರಕ್ಷಿತ್‌ ಶೆಟ್ಟಿ ಅಭಿನಯದ ಚಾರ್ಲಿ 777 ಕಳೆದ ವರ್ಷ ತೆರೆ ಕಂಡು ಸಿನಿಪ್ರೇಕ್ಷಕರಿಂದ ಸಾಕಷ್ಟು ಯಶಸ್ಸನ್ನು ಕಂಡಿದೆ. ಅದರ ಬೆನ್ನಲ್ಲೇ ನಟ ರಕ್ಷಿತ್‌ ಶೆಟ್ಟಿ ಮುಂದಿನ ಸಿನಿಮಾಗಳಲ್ಲಿ ಸಕ್ರೀಯವಾಗಿದ್ದಾರೆ. ಸದ್ಯ ಎರಡು ವರ್ಷಗಳ ಹಿಂದೆ ಸೆಟ್ಟೇರಿದ ಸಪ್ತ ಸಾಗರದಾಚೆ ಎಲ್ಲೋ ಸಿನಿಮಾ ಶೂಟಿಂಗ್‌ ಮುಕ್ತಾಯಗೊಂಡಿದ್ದು, ಇದೀಗ ಈ ಸಿನಿಮಾ ಟೀಸರ್‌ ಜೊತೆಗೆ ಹಾಡುಗಳನ್ನು ಒಂದೊಂದಾಗಿ ಬಿಡುಗಡೆ ಮಾಡಲು ಸಿನಿತಂಡ ತಾಯರಿ ನಡೆಸಿದೆ.

ಸ್ಯಾಂಡಲ್‌ವುಡ್‌ನಲ್ಲಿ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾದ ಸಪ್ತ ಸಾಗರದಾಚೆ ಎಲ್ಲೋ ಸಿನಿಮಾ ಎರಡು ಭಾಗಗಳಲ್ಲಿ ಬಿಡುಗಡೆಯಾಗಲಿದ್ದು, ಮೊದಲ ಭಾಗ ಸೈಡ್‌ ಎ ಸೆಪ್ಟೆಂಬರ್‌ 1 ರಂದು ಬಿಡುಗಡೆಯಾಗಲಿದ್ದು, ಎರಡನೇ ಭಾಗ ಸೈಡ್‌ ಬಿ ಅಕ್ಟೋಬರ್‌ 20 ರಂದು ಬಿಡುಗಡೆಯಾಗಲಿದೆ. ಇದೇ ಮೊದಲ ಭಾರೀ ಕನ್ನಡ ಸಿನಿಮಾವೊಂದು ಎರಡು ಭಾಗಗಳು ಒಂದೇ ತಿಂಗಳಲ್ಲಿ ಬಿಡುಗಡೆಯಾಗಿ ದಾಖಲೆ ಸೃಷ್ಟಿಸಲಿದೆ.

ಇದನ್ನೂ ಓದಿ : Hostel hudugaru bekagiddare : ಹಾಸ್ಟೆಲ್‌ ಹುಡುಗರು ಬೇಕಾಗಿದ್ದಾರೆ ಸಿನಿತಂಡಕ್ಕೆ ಶಾಕ್‌ ಕೊಟ್ಟ ಸ್ಯಾಂಡಲ್‌ವುಡ್‌ ಕ್ವೀನ್‌ ರಮ್ಯಾ

ಇದನ್ನೂ ಓದಿ : Music Director Sam C.S : ಶಿವಣ್ಣನ ಹೊಸ ಸಿನಿಮಾಗೆ ಟ್ಯೂನ್ ಹಾಕಲಿದ್ದಾರೆ ವಿಕ್ರಂ ವೇದ ಮ್ಯೂಸಿಕ್ ಡೈರೆಕ್ಟರ್ ಸ್ಯಾಮ್ ಸಿ.ಎಸ್

ಇನ್ನು ಎರಡು ಭಾಗಗಳ ಚಿತ್ರೀಕರಣವನ್ನು ಒಟ್ಟಿಗೆ ಮುಗಿಸಿಕೊಂಡಿರುವ ಸಪ್ತ ಸಾಗರದಾಚೆ ಎಲ್ಲೋ ಚಿತ್ರತಂಡ ಇದೀಗ ಮೊದಲ ಭಾಗದ ಸಿನಿಮಾದ ಹಾಡುಗಳನ್ನು ಬಿಡುಗಡೆ ಮಾಡುವ ಮೂಲಕ ಪ್ರಚಾರ ಕಾರ್ಯಗಳನ್ನು ಆರಂಭಿಸಿದೆ. ಇದೀಗ ಇಂದು ಸಪ್ತ ಸಾಗರದಾಚೆ ಎಲ್ಲೋ ಸೈಡ್‌ ಎ ಸಿನಿಮಾದ ಮೊದಲ ಹಾಡು ಬಿಡುಗಡೆಯಾಗಿದೆ. ಈ ಸಿನಿಮಾದ ಮೊದಲ ಹಾಡು “ಹೋರಾಟ” ಎನುವ ಶೀರ್ಷಿಕೆ ಅಡಿಯಲ್ಲಿ ಬಿಡುಗಡೆಯಾಗಿರುವ ಸಪ್ತ ಸಾಗರದಾಚೆ ಎಲ್ಲೋ ಫಸ್ಟ್‌ ಸಿಂಗಲ್‌ ಪರಮ್‌ ಮ್ಯೂಸಿಕ್‌ ಯುಟ್ಯೂಬ್‌ ಚಾನೆಲ್‌ಗಳಲ್ಲಿ ಬಿಡುಗಡೆಗೊಂಡಿದೆ.‌

Sapta Sagaradaache Yello: Simple Star Rakshit Starrer Sapta Sagaradaache Yello First Song Release

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular