ಬೆಂಗಳೂರು : ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಸರಿಗಮಪ ಮೂಲಕ ಪ್ರಖ್ಯಾತಿಗಳಿಸಿರುವ ಪೊಲೀಸ್ ಕಾನ್ಸ್‌ಟೇಬಲ್ ಸುಬ್ರಮಣಿ ಅವರ ಪತ್ನಿ ಕೊರೊನಾ ಸೋಂಕಿನಿಂದ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಲಿದ್ದಾರೆ.
ಸುಬ್ರಮಣಿ ಪತ್ನಿ ಅವರ ಪತ್ನಿಗೆ ಕೊರೊನಾ ವೈರಸ್ ಸೋಂಕು ಧೃಡಪಟ್ಟಿದ್ದು, ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಈ ಹಿನ್ನೆಲೆ ಯಲ್ಲಿ ಚಿಕಿತ್ಸೆ ಕೊಡಿಸಲು ಬೆಂಗಳೂರಿನ ಆಸ್ಪತ್ರೆಗಳಲ್ಲಿ ಪರದಾಡಿ ದ್ದಾರೆ. ಆದರೆ ಬೆಡ್ ಸಿಗದೆ ಅಂತಿಮವಾಗಿ ಹೊಸಕೋಟೆಯ ಸಿಲಿಕಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಸುಬ್ರಹ್ಮಣಿ ಅವರ ಪತ್ನಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಸುಬ್ರಹ್ಮಣಿ ಅವರ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ಬೆಂಗಳೂರಲ್ಲಿ ಈ ಸಾವು ಕೊರೊನಾ ಕರಾಳತೆಯನ್ನು ಅನಾವರಣ ಗೊಳಿಸಿದೆ.
