Sandalwood Actor Jayanthi : ಸ್ಯಾಂಡಲ್‌ವುಡ್‌ನ ಅಭಿನಯ ಶಾರದೆ, ಖ್ಯಾತ ಹಿರಿಯ ನಟಿ ಜಯಂತಿ ವಿಧಿವಶ

ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟಿ, ಅಭಿಯನ ಶಾರದೆ ಅನ್ನೋ ಖ್ಯಾತಿಗೆ ಪಾತ್ರರಾಗಿದ್ದ ಜಯಂತಿ ವಿಧಿವಶರಾಗಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿದ್ದು, ಅನಾರೋಗ್ಯ ದಿಂದ ಬಳಲುತ್ತಿದ್ದ ಅವರು ಇಂದು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.

ಜೇನುಗೂಡು ಸಿನಿಮಾದ ಮೂಲಕ ಸ್ಯಾಂಡಲ್‌ವುಡ್‌ ಗೆ ಎಂಟ್ರಿ ಕೊಟ್ಟಿದ್ದ ಜಯಂತಿ ಅವರು, ನೂರಾರು ಸಿನಿಮಾಗಳಲ್ಲಿ ನಟಿಸಿದ್ದಾರೆ. ಅದ್ರಲ್ಲೂ ಡಾ.ರಾಜ್ ಕುಮಾರ್ ಅವರ ಜೊತೆ ಸುಮಾರು 45ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸುವ ಮೂಲಕ ಬಹುಪ್ರಖ್ಯಾತಿಯನ್ನು ಪಡೆದುಕೊಂಡಿದ್ದಾರೆ. ಅಭಿನಯ ಶಾರದೆ ಎಂದೇ ಖ್ಯಾತರಾಗಿದ್ದ ಜಯಂತಿ ಕನ್ನಡ ಮಾತ್ರವಲ್ಲದೇ ತೆಲಗು, ತಮಿಳು, ಮಲಯಾಳಂ, ಹಿಂದಿ ಮತ್ತು ಮರಾಠಿ ಸೇರಿದಂತೆ ಸುಮಾರು 500 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ : ಮೇಘನಾ ರಾಜ್ ಅಭಿಮಾನಿಗಳಿಗೆ ಸಿಹಿಸುದ್ದಿ…! ಸದ್ಯದಲ್ಲೇ ಸಿನಿಮಾಗೆ ಮರಳಲಿದ್ದಾರೆ ನ್ಯೂಮಮ್ಮಿ….!!

ಬಳ್ಳಾರಿಯಲ್ಲಿ1950 ರಲ್ಲಿ ಜನಿಸಿದ ಜಯಂತಿ ಅವರ ಬಾಲ್ಯದ ಹೆಸರು ಕಮಲಾ ಕುಮಾರಿ. ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ ನಂತರ ಜಯಂತಿ ಎಂದು ಹೆಸರನ್ನು ಬದಲಾಯಿಸಿಕೊಂಡಿದ್ದರು. ಇತ್ತೀಚಿನ ದಿನಗಳಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ಜಯಂತಿ ಅವರು ಇದೀಗ ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ.

Comments are closed.