ಭಾನುವಾರ, ಏಪ್ರಿಲ್ 27, 2025
HomeCinemaSharath Kumar: ತಮಿಳಿನ ಖ್ಯಾತ ನಟ ಶರತ್ ಕುಮಾರ್ ಅಸ್ವಸ್ಥ; ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲು

Sharath Kumar: ತಮಿಳಿನ ಖ್ಯಾತ ನಟ ಶರತ್ ಕುಮಾರ್ ಅಸ್ವಸ್ಥ; ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲು

- Advertisement -

ಚೆನ್ನೈ: ತಮಿಳು ಚಿತ್ರರಂಗದ ಖ್ಯಾತ ನಟ ಶರತ್ ಕುಮಾರ್ (Sharath Kumar) ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು. ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಬೆಳಿಗ್ಗೆ ಅವರು ಅಸ್ವಸ್ಥರಾಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಕಳೆದ ಕೆಲ ದಿನಗಳಿಂದ ಶರತ್ ಕುಮಾರ್ ಅವರು ಹೈಡ್ರೇಷನ್ ಹಾಗೂ ಇನ್ನಿತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು. ಇಂದು ಬೆಳಗ್ಗೆ ಅಸ್ವಸ್ಥರಾಗಿದ್ದು, ತಕ್ಷಣ ಅವರನ್ನು ಕುಟುಂಬಸ್ಥರು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಿಸಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.

ಇದನ್ನೂ ಓದಿ: Puneeth – Darshan Thoogudeepa : ಅಪ್ಪು ನೆಚ್ಚಿನ ಊರಿನಲ್ಲಿ “ಕ್ರಾಂತಿ” 2ನೇ ಹಾಡು : ತೂಗುದೀಪ್‌ ದರ್ಶನ್‌ ಘೋಷಣೆ ‌

ಶರತ್ ಕುಮಾರ್ ಅವರ ಆರೋಗ್ಯ ತಪಾಸಣೆ ನಡೆಸಿರುವ ವೈದ್ಯರು, ಶರತ್ ಅವರ ಜೀವಕ್ಕೆ ಅಪಾಯವಿಲ್ಲ. ಚಿಕಿತ್ಸೆ ಮುಂದುವರೆದಿದ್ದು, ಶೀಘ್ರದಲ್ಲೇ ಅವರನ್ನು ಡಿಸ್ಚಾರ್ಜ್ ಮಾಡುತ್ತೇವೆ ಎಂದಿದ್ದಾರೆ. ಶರತ್ ಕುಮಾರ್ ಪತ್ನಿ ರಾಧಿಕಾ ಹಾಗೂ ಪುತ್ರಿ ವರಲಕ್ಷ್ಮೀ ಆಸ್ಪತ್ರೆಯಲ್ಲಿ ಉಳಿದಿದ್ದಾರೆ ಎಂದು ಮೂಲಗಳು ತಿಳಿಸಿವೆ.

2020ರಲ್ಲಿ ಶರತ್ ಕುಮಾರ್ ಕೊರೋನಾ ಸೋಂಕಿಗೆ ಒಳಗಾಗಿದ್ದರು. ಆಗ ಮನೆಯಲ್ಲೇ ಅವರಿಗೆ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಕೊರೋನಾದಿಂದ ಚೇತರಿಸಿಕೊಂಡಿದ್ದ ಅವರು ಇದೀಗ ಮತ್ತೆ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ಸದ್ಯ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆಪ್ತರು ಯೋಗಕ್ಷೇಮ ವಿಚಾರಿಸುತ್ತಿದ್ದಾರೆ. ಶರತ್ ಕುಮಾರ್ ಅವರ ಅನಾರೋಗ್ಯ ಸುದ್ದಿ ತಿಳಿಯುತ್ತಿದ್ದಂತೆ ಅಭಿಮಾನಿಗಳು ಆತಂಕಕ್ಕೆ ಒಳಗಾಗಿದ್ದಾರೆ. ಆದರೆ ವೈದ್ಯರು ಅವರು ಆರೋಗ್ಯವಾಗಿರುವ ಕುರಿತು ಮಾಹಿತಿ ನೀಡಿದ್ದು, ಕೊಂಚ ಸಮಾಧಾನ ತಂದಿದೆ.

1954ರಂದು ದೆಹಲಿಯಲ್ಲಿ ಜನಿಸಿದ್ದ ಶರತ್ ಕುಮಾರ್ ನಟರಾಗಿ, ಪತ್ರಕರ್ತರಾಗಿ , ರಾಜಕಾರಣಿ, ಬಾಡಿ ಬಿಲ್ಡರ್ ಆಗಿ ಗುರುತಿಸಿಕೊಂಡಿದ್ದಾರೆ. 1986ಲ್ಲಿ ತೆಲುಗಿನ ‘ಸಮಾಜಮ್ ಲೋ ಸ್ತ್ರೀ’ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ಇವರು ತಮಿಳು, ತೆಲುಗು, ಮಲಯಾಳಂ, ಕನ್ನಡ ಸಿನಿಮಾಗಳಲ್ಲೂ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಕನ್ನಡದ ಸಾರಥಿ, ಮೈನಾ, ಸಂತೆಯಲ್ಲಿ ನಿಂತ ಕಬೀರ, ರಾಜಕುಮಾರ, ಸೀತಾರಾಮ ಕಲ್ಯಾಣ, ಜೇಮ್ಸ್, ರೆಮೋ ಸಿನಿಮಾಗಳಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ: Mayank-Ashita blessed with baby boy : ಗಂಡು ಮಗುವಿನ ತಂದೆಯಾದ ಮಯಾಂಕ್ ಅಗರ್ವಾಲ್

Sharath Kumar: Actor Sharath Kumar Admitted to Apollo Hospital In Chennai

RELATED ARTICLES

Most Popular